ನಿನ್ನೊಲುಮೆ ನಮಗಿರಲಿ ತಂದೆ ಕೈ ಹಿಡಿದು ನಡೆಸು ಮುಂದೆ
ಇನಿದನಿಗೆ, ಭಾವಪೂರ್ಣ ಗಾಯನಕ್ಕೆ ಸುಮಿತ್ರ ಹೆಸರಾದವರು. ‘ಘಲ್ಲು ಘಲ್ಲೆನ್ನುತ’ ಎನ್ನುವ ಜನಪದದಿಂದ ‘ನಮ್ಮ ಮಕ್ಕಳು’ ಸಿನಿಮಾದ ‘ನಿನ್ನೊಲುಮೆ ನಮಗಿರಲಿ ತಂದೆ’ ಪದದವರೆಗೆ ಸುಮಿತ್ರ ಕಂಠದ ಹರವು ದೊಡ್ಡದು. ಸುಮಿತ್ರ ಕಂಠದ ಜನಪ್ರಿಯ ಗೀತೆ ಇಲ್ಲಿದೆ. ಶ್ರೀಯವರ ‘ಕರುಣಾಳು ಬಾ ಬೆಳಕೆ’ ಗೀತೆಯಂತೆ ಕನ್ನಡಿಗರನ್ನು ಕಾಡಿದ ಮತ್ತೊಂದು ಅಪರೂಪದ ಗೀತೆಯಿದು. ಕಾರ್ಯಕ್ರಮದಲ್ಲಿ ಸುಮಿತ್ರಾ ಈ ಗೀತೆಯನ್ನು ಹಾಡಬಹುದು. ಹಾಡದಿದ್ದರೆ ಕೋರಿಕೆ ಸಲ್ಲಿಸಿ; ಎದೆ ತುಂಬಿಸಿಕೊಳ್ಳಿ.
ಸತ್ಯ ಮಾರ್ಗದಿ ನಡೆವ ಶಕ್ತಿ ಕೊಡು ತಂದೆ
ನಿನ್ನೊಲುಮೆ ನಮಗಿರಲಿ ತಂದೆ
ಕೈ ಹಿಡಿದು ನೀ ನಡೆಸು ಮುಂದೆ ।
ತಾನುರಿದು ಜಗಕೆಲ್ಲ ಜ್ಯೋತಿಯನು ನೀಡುವ
ದೀಪದೊಳು ನೀ ನನ್ನ ಅನುಗೊಳಿಸು ತಂದೆ
ಕಾನನದ ಸುಮವೊಂದು ಸೌರಭವ ತಾ ಸೂಸಿ
ಸಫಲತೆಯ ಪಡೆವಂತೆ ಮಾಡೆನ್ನ ತಂದೆ
ಸಿರಿಯು ಸಂಪದ ಬೇಡ ಯಾವ ವೈಭವ ಬೇಡ
ನಿನ್ನ ಕರುಣೆಯು ಒಂದೆ ಸಾಕೆಮಗೆ ತಂದೆ ।। ನಿನ್ನೊಲುಮೆ।।
ನಿನ್ನ ಈ ಮಕ್ಕಳನು ಪ್ರೇಮದಲಿ ನೀ ನೋಡು
ಈ ಮನೆಯು ಎಂದೆಂದು ನಗುವಂತೆ ನೀ ಮಾಡು
ನಂಬಿದರೆ ಭಯವಿಲ್ಲ ನಂಬದಿರೆ ಬಾಳಿಲ್ಲ
ಅಂಬಿಗನೇ ನೀ ನಡೆಸು ಈ ಬಾಳ ನೌಕೆ
ಯಾವ ನೋವೇ ಬರಲಿ ಎದೆಗುಂದದಿರಲಿ
ಸತ್ಯ ಮಾರ್ಗದಿ ನಡೆವ ಶಕ್ತಿ ಕೊಡು ತಂದೆ ।। ನಿನ್ನೊಲುಮೆ।।
(ಚಿತ್ರ : ನಮ್ಮ ಮಕ್ಕಳು)
ವಾರ್ತಾ ಸಂಚಯ
ಮುಖಪುಟ / ಸಾಹಿತ್ಯ ಸೊಗಡು
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications