ಅಹ್ಮದಾಬಾದ್ ಕನ್ನಡ ಸಂಘದಿಂದ ಎಸ್ಸೆಂ ಕೃಷ್ಣಗೆ ಸನ್ಮಾನ
ಅಹ್ಮದಾಬಾದ್: ಕರ್ನಾಟಕದ ಹೊರಗಡೆ ಇರುವ ಕನ್ನಡಿಗರಿಗೆ ಹೊರನಾಡ ಕನ್ನಡಿಗರ ನಿಧಿಯಾಂದನ್ನು ಸ್ಥಾಪಿಸಲು ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ತಾತ್ವಿಕವಾಗಿ ಒಪ್ಪಿಕೊಂಡಿದ್ದಾರೆ.
ಅಹ್ಮದಾಬಾದ್ನ ಕರ್ನಾಟಕ ಸಂಘವು ಶನಿವಾರ (ಡಿ.7) ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿದ ನಂತರ ಅಲ್ಲಿನ ಕನ್ನಡಿಗರನ್ನುದ್ದೇಶಿಸಿ ಮುಖ್ಯಮಂತ್ರಿ ಕೃಷ್ಣ ಮಾತನಾಡಿದರು. ಹೊರನಾಡಿನಲ್ಲಿ ಕನ್ನಡ ಭವನಗಳನ್ನು ಸ್ಥಾಪಿಸುವುದಿದ್ದರೆ ಜಾಗ ಸ್ವಾಧೀನಪಡಿಸಿಕೊಳ್ಳಲು ನೆರವು ನೀಡಲಾಗುವುದು. ಅಲ್ಲದೆ ಹೊರನಾಡಿನ ಕನ್ನಡಿಗರ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗುವಂತೆ ವಿದ್ಯಾರ್ಥಿ ವೇತನಗಳನ್ನೂ ಆರಂಭಿಸುವುದಾಗಿಯೂ ಆಶ್ವಾಸನೆ ಇತ್ತರು.
ಗುಜರಾತ್ ಭೂಕಂಪ ಪರಿಹಾರ ನಿಧಿಗಾಗಿ ಕರ್ನಾಟಕ ಸರಕಾರವು ಸಂಗ್ರಹಿಸಿರುವ 30 ಕೋಟಿ ರೂಪಾಯಿಗಳನ್ನು ಪಡೆಯಲು ಗುಜರಾತ್ ಸರಕಾರ ಇನ್ನೂ ಮುಂದೆ ಬಂದಿಲ್ಲ ಎಂದು ಬೇಜಾರು ಮಾಡಿಕೊಂಡ ಕೃಷ್ಣ ಹಣವನ್ನಂತೂ ಗುಜರಾತ್ ಸರಕಾರಕ್ಕೆ ನೀಡಲಾಗುವುದು. ಆದರೆ ಅದು ಕಾಂಗ್ರೆಸ್ ಸರಕಾರಕ್ಕೇ ತಲುಪುವ ಹಾಗಾದರೆ ಒಳ್ಳೆಯದು ಎಂದು ತಮ್ಮ ಕಾಂಗ್ರೆಸ್ ಪ್ರೀತಿಯನ್ನು ತೋರಿದರು. ಕೊನೆಯದಾಗಿ, ಗುಜರಾತ್ನಲ್ಲಿರುವ ಎರಡು ಸಾವಿರಕ್ಕೂ ಹೆಚ್ಚು ಮಂದಿ ಕನ್ನಡಿಗರು ಕಾಂಗ್ರೆಸ್ಗೆ ಮತ ಹಾಕಬೇಕು ಎಂದು ಮನವಿ ಮಾಡುತ್ತಾ ಕೃಷ್ಣ ಮಾತು ಮುಗಿಸಿದರು.
ಕಾರ್ಯಕ್ರಮದಲ್ಲಿ ಕೃಷ್ಣ ಜೊತೆಗೆ ಕಾಂಗ್ರೆಸ್ನ ಡಿ.ಕೆ. ಶಿವಕುಮಾರ್, ಟಿ. ಬಿ. ಜಯಚಂದ್ರ, ಸಲೀಂ ಅಹ್ಮದ್ ಮತ್ತಿತರರು ಭಾಗವಹಿಸಿದ್ದರು.
(ಇನ್ಫೋ ವಾರ್ತೆ)
ಮುಖಪುಟ / ಸಾಹಿತ್ಯ ಸೊಗಡು-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications