ದುಬೈ ಕನ್ನಡ ಸಮ್ಮೇಳನಕ್ಕೆ ಕಣವಿ ಅಧ್ಯಕ್ಷತೆ

ಸಮ್ಮೇಳನವು ದುಬೈ ಜಿಮ್ಸ್ ಪ್ರೈವೆಟ್ ಸ್ಕೂಲ್ ಸಭಾಗೃಹದಲ್ಲಿ ತಾ. 23.04.2010 ಶುಕ್ರವಾರ ಮುಂಜಾನೆ ಗಂಟೆ 10ರಿಂದ ಸಂಜೆ 6.30ರತನಕ ನಡೆಯಲಿದೆ. ಕನ್ನಡ ಸಾಹಿತ್ಯದ ವಿವಿಧ ನೆಲೆಗಳು ಎಂಬ ಎರಡು ಗೋಷ್ಠಿಗಳು, ಗಲ್ಫ್ ಕನ್ನಡಿಗರ ಸಮಸ್ಯೆಗಳ ಬಗ್ಗೆ ವಿಚಾರ ಸಂಕಿರಣ ಹಾಗೂ ಕವಿ ಗೋಷ್ಠಿ ನಡೆಯಲಿದೆ. ಕರ್ನಾಟಕದಿಂದ ಆಗಮಿಸಲಿರುವ ಅತಿಥಿ ಕಲಾವಿದರು ಮನರಂಜನಾ ಕಾರ್ಯಕ್ರಮ ನೀಡಲಿದ್ದಾರೆ. ಸಮ್ಮೇಳನದಲ್ಲಿ ಕರ್ನಾಟಕದಿಂದ ಸಾಹಿತಿಗಳು, ರಾಜಕೀಯ ನಾಯಕರು, ಕಲಾವಿದರು, ಸರಕಾರಿ ಆಧಿಕಾರಿಗಳು ಹಾಗೂ ಇತರ ಗಣ್ಯರು ಆಗಮಿಸಲಿದ್ದಾರೆ. ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪ್ರವೇಶ ಮತ್ತು ಊಟೋಪಚಾರ ಉಚಿತ.
ಮುಂಬೈಯಲ್ಲಿ ಸಮಾನ ಮನಸ್ಕ ಯುವಕರು ಹೊರನಾಡಿನಲ್ಲಿ ಕನ್ನಡ ಚಟುವಟಿಕೆಗಳು ನಿಂತ ನೀರಾಗದೆ ಹರಿಯುವ ನದಿಯಾಗಬೇಕೆಂಬ ಉದ್ದೇಶದಿಂದ 1985ರಲ್ಲಿ ಅಸ್ತಿತ್ವಕ್ಕೆ ತಂದ ಧ್ವನಿ ಪ್ರತಿಷ್ಠಾನ ಈಗ ಬೆಳ್ಳಿ ಹಬ್ಬದ ಸಡಗರದಲ್ಲಿದೆ. ಧ್ವನಿ ಸಮಾಜದಲ್ಲಿ ಒಂದು ಸಂಸ್ಥೆಯಾಗಿ ಗುರುತಿಸಿಕೊಳ್ಳದೆ ಒಂದು ಸಾಮಾಜಿಕ ಪ್ರಕ್ರಿಯೆಯಾಗಬೇಕೆಂಬ ಉದ್ದೇಶದಿಂದ ಕಾರ್ಯಪ್ರವೃತ್ತವಾಗಿದ್ದು ಆ ನಿಟ್ಟಿನಲ್ಲಿ ಸತತ ಇಪ್ಪತೈದು ವರ್ಷಗಳಿಂದ ಕನ್ನಡ ಸೇವೆಯನ್ನು ಮಾಡುತ್ತಾ ಬಂದಿದೆ.
ಸಮ್ಮೇಳನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಿಗರು ಅಗಮಿಸಿ ಯಶಸ್ವಿಗೊಳಿಸಬೇಕೆಂದು ಪ್ರತಿಷ್ಠಾನದ ಅಧ್ಯಕ್ಷ ಪ್ರಕಾಶ್ ರಾವ್ ಪಯ್ಯಾರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿಕೊಂಡಿದ್ದಾರೆ. ಸಮ್ಮೇಳನದಲ್ಲಿ ಮನರಂಜನೆ ಕಾರ್ಯಕ್ರಮ ನೀಡಲು ಯು.ಎ.ಇ.ಯಲ್ಲಿರುವ ಎಲ್ಲಾ ಕನ್ನಡಿಗ ಸಂಘಟನೆಗಳಿಗೂ ಅವಕಾಶ ಕಲ್ಪಿಸಲಾಗುವುದು.
ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ
ಜಯರಾಮ ಸೋಮಯಾಜಿ : 050 7952930, ಮುರುಗೇಶ್ ಗಾಜರೆ : 050 7256594, ಅನಂದ ಬೈಲೂರ್ : 050 4982189, ಸಂಪತ್ ಶೆಟ್ಟಿ : 050 9376796, ಡೊನಾಲ್ಡ್ ಕೊರಿಯ : 050 6941572, ಸರಳಾ ರಘು ಪ್ರಸಾದ್ : 050 2242033, ಮಧುಸೂದನ್ : 050 7643774, ದಾಸ್ : 050 7576238 ಅಥವಾ ಇ-ಮೈಲ್ [email protected] ಮೂಲಕ ಕೂಡಾ ಸಂಪರ್ಕಿಸಬಹುದಾಗಿದೆ.
ಭಾಗವಹಿಸಲು ಬಯಸುವ ಯು.ಎ.ಇ.ಯನ್ನು ಹೊರತುಪಡಿಸಿ ಇತರ ದೇಶದಲ್ಲಿರುವ ಅನಿವಾಸಿ ಕನ್ನಡಿಗರು : [email protected] ಸಂಪರ್ಕಿಸಬಹುದು.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications