ಅಮೆರಿಕನ್ನಡ ಬರಹಗಾರರಿಗೆ ಮತ್ತೊಂದು ಕರೆಯೋಲೆ

ಈ ಬಾರಿ ನಮ್ಮ ವಿಷಯ, ಸ್ಥೂಲವಾಗಿ : ಅಮೆರಿಕಾದಲ್ಲಿ ನಮ್ಮ ಬದುಕು.
ಈಗಾಗಲೇ ಹಲವಾರು ಕಡೆಗಳಲ್ಲಿ, ಕೆಲವಾರು ರೀತಿಯಲ್ಲಿ, ಹತ್ತಾರು ಲೇಖಕರಿಂದ ಈ ಭಾವ-ಬಣ್ಣಗಳು ಬಣ್ಣಿಸಲ್ಪಟ್ಟಿರಬಹುದು. 'ಅದನ್ನೇ ಮತ್ತೆ ಮತ್ತೆ ಏನು ಬರೆಯೋದು' ಅನ್ನುವ ಔದಾಸೀನ್ಯ ಬದಿಗಿರಿಸಿ, ನಮ್ಮ ವಲಸೆ-ಜೀವನದ ಆಸು-ಪಾಸುಗಳನ್ನು ಹತ್ತು ಹಲವು ಮಗ್ಗಲುಗಳನ್ನು ಒಂದೇ ಧಾರೆಯಲ್ಲಿ ಎರಡು ರಟ್ಟುಗಳ ನಡುವೆ ದಾಖಲಿಸೋಣ. ನಾವೆಲ್ಲ ಯಾವ್ಯಾವುದೋ ಕಾಲ ಘಟ್ಟಗಳಲ್ಲಿ ಪೆಟ್ಟಿಗೆ ಹೊತ್ತು, ಹೊಸ ಪಟ್ಟು ಕಲಿಯುವ ಜಟ್ಟಿಗಳಾಗಿ, ಹೊಸ ದೇಶದ ಹೊಸ ನೆಲವನ್ನು ಮುಟ್ಟಿದವರು. ನಮ್ಮೆಲ್ಲರ ಅನುಭವ-ಅನುಭಾವಗಳೂ ಅಷ್ಟೇ ವಿಭಿನ್ನ, ವೈವಿಧ್ಯತರ. ಅಂತೆಯೇ, ನಮ್ಮೆಲ್ಲರ ಅಭಿವ್ಯಕ್ತಿಯ ದಾರಿಗಳೂ ಭಿನ್ನ. ಆ ಭಿನ್ನತೆಗೆ ಅನುಗುಣವಾಗಿಯೇ ಅಭಿವ್ಯಕ್ತಿಸೋಣ. ಈ ವೈವಿಧ್ಯವೇ ಈ ಗ್ರಂಥದ ವಿಶೇಷವಾಗಲಿ. ಸಾಮಾಜಿಕವಾಗಿ ಮತ್ತು ಚಾರಿತ್ರಿಕವಾಗಿ ಅಮೆರಿಕನ್ನಡ ವಲಸೆಯ ಈ ಭಾವಗಳು, ಸ್ವರಗಳು, ಮುಖಗಳು ಅತಿ ಮುಖ್ಯವಾಗಲಿವೆ.
ನಮ್ಮ ನಿತ್ಯ ಜೀವನ, ವೃತ್ತಿ ಜೀವನ, ಮನೆ/ನೆರೆಹೊರೆ, ಶಾಲೆ/ಕಾಲೇಜು ಪರಿಸರ, ಕಂಡದ್ದು, ಕೇಳಿದ್ದು, ಆಡಿದ್ದು, ಹಾಡಿದ್ದು, ತಿರುಗಿದ್ದು, ಮರುಗಿದ್ದು, ಹೊರಳಿದ್ದು, ನರಳಿದ್ದು, ಬಿದ್ದದ್ದು, ಎದ್ದದ್ದು... ಇನ್ನೂ ಏನೇನನ್ನು ಮಾಡಿದ್ದೇವೆ ಯಾ ಮಾಡಿಲ್ಲ! ಈ ಹೊಸ ನೆಲೆಯಿಂದ ನಾವು ಪಡೆದದ್ದೆಷ್ಟು, ನಮ್ಮ ಹೊಸ ಬೇರೂರಲು ಬೆಲೆ ತೆತ್ತದ್ದೆಷ್ಟು! ಎಲ್ಲವನ್ನೂ ಪ್ರಾಮಾಣಿಕವಾಗಿಯೂ ರಸವತ್ತಾಗಿಯೂ ತೆರೆದಿಡೋಣ. ಇದಂತೂ ನಮ್ಮದೇ ಚಾವಡಿ. ಇಲ್ಲಿ ನಮ್ಮದೇ ಕಲರವ. ಹರಟೆ, ಪ್ರಬಂಧ, ಕಥೆ, ಕವನ- ಯಾವ ಪ್ರಕಾರವಾದರೂ ಸರಿಯೇ, ಬರವಣಿಗೆ ಹರಿದು ಬರಲಿ. ಬನ್ನಿ, ಮನದ ಪಟಲ ತೆರೆದು, ನೆನಪ ಖಜಾನೆ ಕೆದಕಿ, ಸುರುಳಿ ಬಿಡಿಸಿ ನಿನ್ನೆಯನ್ನು ಇಂದಿನ ಅಕ್ಷರವಾಗಿಸೋಣ.
ನಿಮ್ಮ ಈ ಜೀವನಚಿತ್ರಗಳ ಕಡತ ಸಂಪಾದಕರ ಕೈಸೇರಲು ಇದೇ ವರ್ಷ- 2012- ನವೆಂಬರ್ 30ನೇ ತಾರೀಕು ಕೊನೆಯ ದಿನಾಂಕ; ಸಾಕಷ್ಟು ಸಮಯವನ್ನೇ ನೀಡುತ್ತಿದ್ದೇವೆ. ಅದಕ್ಕೂ ಮುಂಚಿತವಾಗಿ ಕಳುಹಿಸಿದರೆ ವಿವರಣೆ-ವಿಶ್ಲೇಷಣೆಗಳು ಬೇಕಾದಲ್ಲಿ ಅವಕಾಶವಿರುತ್ತದೆ. ಹಾಗೇ, ಅದರೊಂದಿಗೇ ನಿಮ್ಮ ಪುಟ್ಟ ಪರಿಚಯ ಪತ್ರವನ್ನೂ, ಭಾವಚಿತ್ರವನ್ನೂ ಕಳುಹಿಸಿಕೊಡಿ.
ಮತ್ತೆ ಮತ್ತೆ ಹೇಳಿಸಿಕೊಳ್ಳದೇ ಕೀಲಿಮಣೆಯಲ್ಲಿ ಬೆರಳತುದಿಯಾಡಿಸಿ; ಕಡತ ನಮಗೆ ಕಳಿಸಿ.
* ವಿಷಯ : ಅಮೆರಿಕದ ನೆಲದಲ್ಲಿ ವಲಸಿಗರಾಗಿ ನಮ್ಮ ಬದುಕು
* ಅಕ್ಷರದ ಗಾತ್ರ 14ರಲ್ಲಿ ಸುಮಾರು ಎಂಟು ಹತ್ತು ಪುಟಗಳ ಬರಹ ಅಥವಾ ಎಮ್.ಎಸ್.ವರ್ಡ್ ಕಡತ.
* ನವೆಂಬರ್ 30, 2012 - ಕೊನೆಯ ದಿನಾಂಕ.
* ಸಂಪಾದಕರ ಆಯ್ಕೆಯೇ ಅಂತಿಮ.
* ಕಡತಗಳನ್ನು ಕಳುಹಿಸಬೇಕಾಗಿರುವ ವಿಳಾಸ: [email protected]
* ಹೆಚ್ಚಿನ ಮಾಹಿತಿಗಾಗಿ ಸಂಪರ್ಕ : ಗುರು ಕಾಗಿನೆಲೆ ([email protected]), ತ್ರಿವೇಣಿ ಶ್ರೀನಿವಾಸ ರಾವ್ ([email protected]), ಜ್ಯೋತಿ ಮಹಾದೇವ್ ([email protected])
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications