ಕನ್ನಡ ಸಾಹಿತ್ಯ ರ೦ಗದ 8ನೇ ವಸಂತ ಸಾಹಿತ್ಯೋತ್ಸವ

By: ಮೀರಾ ಪಿ.ಆರ್. ಮತ್ತು ವೈಶಾಲಿ ಹೆಗಡೆ
Subscribe to Oneindia Kannada

ಅಮೆರಿಕದ ಏಕೈಕ ರಾಷ್ಟ್ರೀಯ ಕನ್ನಡ ಸಾಹಿತ್ಯ ಸ೦ಸ್ಥೆ ಕನ್ನಡ ಸಾಹಿತ್ಯ ರ೦ಗ' ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಸುವ 'ವಸಂತ ಸಾಹಿತ್ಯೋತ್ಸವ' ಅಮೆರಿಕಾದಲ್ಲಿ ನೆಲೆಸಿರುವ ಕನ್ನಡ ಸಾಹಿತ್ಯಾಸಕ್ತರಿಗೆಲ್ಲ ಚಿರಪರಿಚಿತ. ಕಸಾರಂ ಈಗಾಗಲೇ ಏಳು ಸಾಹಿತ್ಯ ಸಮ್ಮೇಳನಗಳನ್ನು ಅಮೆರಿಕಾದ ವಿವಿಧೆಡೆಗಳಲ್ಲಿ ಯಶಸ್ವಿಯಾಗಿ ನಡೆಸಿ ಈ ವರ್ಷ ಎಂಟನೆಯ ಸಮ್ಮೇಳನವನ್ನು ನಡೆಸಲು ಸಿದ್ಧವಾಗಿದೆ.

ಇದೇ ಏಪ್ರಿಲ್ 29 ಮತ್ತು 30, 2017ರ೦ದು ನ್ಯೂ ಇಂಗ್ಲೆಂಡ್ ಕನ್ನಡ ಕೂಟ 'ಮಂದಾರ'ದ ಸಹಯೋಗ ಮತ್ತು ಆಶ್ರಯದಲ್ಲಿ ಬಾಸ್ಟನ್ ನಗರದ ಬಳಿ ಇರುವ ಫ್ರೇಮಿಂಘ್ಯಾಮ್ನಲ್ಲಿ ಸಮ್ಮೇಳನ ನಡೆಯಲಿದೆ. ಕನ್ನಡದ ವಿಶಿಷ್ಟ ಲೇಖಕ, ಚಿಂತಕ, ವಾಗ್ಮಿ, ಶ್ರೀ ಲಕ್ಷ್ಮೀಶ ತೋಳ್ಪಾಡಿ ಅವರು ಈ ಸಮ್ಮೇಳನದ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ.

ಈ ಸಮ್ಮೇಳನದಲ್ಲಿ ಪ್ರತಿಬಾರಿಯಂತೆ ಈ ಸಲವೂ ಅಮೆರಿಕದ ಕನ್ನಡ ಬರಹಗಾರರನ್ನು ಮತ್ತು ಅವರ ಇತ್ತೀಚಿನ ಕೃತಿಗಳನ್ನು 'ನಮ್ಮ ಹೆಮ್ಮೆಯ ಬರಹಗಾರರು' ಕಾರ್ಯಕ್ರಮದಲ್ಲಿ ಸಾಹಿತ್ಯಪ್ರಿಯರಿಗೆ ಪರಿಚಯ ಮಾಡಿಕೊಡಲು ನಾವು ಉತ್ಸುಕರಾಗಿದ್ದೇವೆ. ಲೇಖಕರು ತಮ್ಮ ಹೊಸ ಪುಸ್ತಕಗಳನ್ನು ಇಲ್ಲಿ ಬಿಡುಗಡೆ ಮಾಡುವ ಅವಕಾಶವೂ ಉಂಟು.

ಈ ಕಾರ್ಯಕ್ರಮಕ್ಕೆ ಸಂಬಂಧಿಸಿದ ಕೆಲವು ನಿಯಮಗಳು ಹೀಗಿವೆ:

- ಕನ್ನಡದ ಪುಸ್ತಕಗಳನ್ನು ಮಾತ್ರ ಪರಿಗಣಿಸಲಾಗುವುದು. ಬೇರೆ ಭಾಷೆಯಿಂದ ಕನ್ನಡಕ್ಕೆ ಅನುವಾದಗೊಂಡಿರುವ ಪುಸ್ತಕಗಳೂ ಆಗಬಹುದು. ಪುಸ್ತಕವು ಸಾಹಿತ್ಯ, ವಿಜ್ಞಾನ, ಪರಿಸರ, ಆರೋಗ್ಯ, ಅನುವಾದ, ಮಕ್ಕಳ ಸಾಹಿತ್ಯ... ಹೀಗೆ ಯಾವುದೇ ಪ್ರಕಾರಕ್ಕೂ ಸೇರಿದ್ದಾಗಿರಬಹುದು.

- ಪುಸ್ತಕಗಳು 2015ರ ಮೇ ತಿಂಗಳ ನಂತರ ಪ್ರಕಟಗೊಂಡಿದ್ದಾಗಿರಬೇಕು.

- ಈ ಮೊದಲು ಅಮೆರಿಕದಲ್ಲಿ ಎಲ್ಲಿಯೂ ಬಿಡುಗಡೆಯಾಗಿರದ ಪುಸ್ತಕಗಳನ್ನು ಮಾತ್ರ ಸಮ್ಮೇಳನದಲ್ಲಿ ಬಿಡುಗಡೆಗೆ ಮಾಡುವ ಅವಕಾಶ ಒದಗಿಸಲಾಗುವುದು.

- ಪುಸ್ತಕಗಳ ಬಿಡುಗಡೆ ಮತ್ತು ಪರಿಚಯವನ್ನು ಅಪೇಕ್ಷಿಸುವ ಲೇಖಕರು ಸಮ್ಮೇಳನದಲ್ಲಿ ಉಪಸ್ಥಿತರಾಗಿರಬೇಕು.

- ಪುಸ್ತಕ ಬಿಡುಗಡೆ/ಪರಿಚಯದ ಆಯ್ಕೆಯಲ್ಲಿ ಕಸಾರಂ ತೀರ್ಮಾನ ಅಂತಿಮ.

- ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ಲೇಖಕರು ಮಾರ್ಚ್ 5ರ ಒಳಗೆ ನಮ್ಮನ್ನು ಸಂಪರ್ಕಿಸಿ, ನಿಮ್ಮ ಕೃತಿಗಳನ್ನು ಕಳಿಸಬೇಕು.

- ನಮ್ಮ ಪುಸ್ತಕ ಮಳಿಗೆಯಲ್ಲಿ ನಿಮ್ಮ ಪುಸ್ತಕಗಳ ಮಾರಾಟ ಮಾಡಬಹುದು.

- ಸಂಪರ್ಕ ವಿಳಾಸ bhameera@gmail.com, vaishalimadhu@gmail.com

ಕನ್ನಡ ಸಾಹಿತ್ಯಾಸಕ್ತರು ಹೆಚ್ಚಿನ ಸ೦ಖ್ಯೆಯಲ್ಲಿ 'ವಸಂತ ಸಾಹಿತ್ಯೋತ್ಸವ'ದಲ್ಲಿ ಪಾಲ್ಗೊಂಡು ಸಮ್ಮೇಳನದ ಸಂಭ್ರಮ ಹೆಚ್ಚಿಸಬೇಕೆಂದು ಕೋರುತ್ತಿದ್ದೇವೆ.

ಈ ಕುರಿತಂತೆ ಹೆಚ್ಚಿನ ಮಾಹಿತಿ ಬೇಕಿದ್ದರೆ ದಯವಿಟ್ಟು ನಮ್ಮನ್ನು ಸ೦ಪರ್ಕಿಸಿ. ಹೆಚ್ಚಿನ ವಿವರಗಳಿಗೆ ಕನ್ನಡ ಸಾಹಿತ್ಯ ರಂಗದ ತಾಣವನ್ನು ನೋಡಿ.

ವಿಶ್ವಾಸಪೂರ್ವಕವಾಗಿ,

ಮೀರಾ ಪಿ.ಆರ್. ಮತ್ತು ವೈಶಾಲಿ ಹೆಗಡೆ

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Kannada literary organization in America Kannada Sahitya Ranga has organized 8th Vasanta Sahityotsava on April 29 and 30 at New England Kannada Koota in Boston, USA. The Kannada writers can release their book at this Kannada literary festival. Poet Lakshmeesha Tolpadi will be the chief guest.
Please Wait while comments are loading...