ಸುರೇಶ್ ಶ್ಯಾಮ್ ರಾವ್ ನೇರಂಬಳ್ಳಿಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ

ಕುವೈತ್, ಜುಲೈ 10 : ಕನ್ನಡ ನಾಡು, ನುಡಿ, ಸಂಸ್ಕೃತಿ ಹಾಗೂ ವಿಶೇಷವಾಗಿ ಸಾಮಾಜಿಕ ಕ್ಷೇತ್ರದಲ್ಲಿ ಸಲ್ಲಿಸಿದ ಅನುಪಮ ಸೇವೆಗಾಗಿ ಈ ಸಾಲಿನ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ಸುರೇಶ್ ಶ್ಯಾಮ್ ರಾವ್ ನೇರಂಬಳ್ಳಿ ಅವರಿಗೆ ಪ್ರದಾನ ಮಾಡಿ ಗೌರವಿಸಲಾಯಿತು.

ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆ, ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಇತ್ತೀಚೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ 44ನೆಯ ವಾರ್ಷಿಕ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಸುರೇಶ್ ಶ್ಯಾಮ್ ರಾವ್ ನೇರಂಬಳ್ಳಿ ಕಳೆದ 17 ವರ್ಷಗಳಿಂದ ಕುವೈತ್ ನಲ್ಲಿ ಹಲವಾರು ಸಂಘ-ಸಂಸ್ಥೆಗಳ ಕಾರ್ಯಕಾರಿ ಸಮಿತಿಯ ಸದಸ್ಯರಾಗಿಯೂ, ಕುವೈತ್‍ನಲ್ಲಿ ಕನ್ನಡ ಚಲನಚಿತ್ರ ವಿತರಕರಾಗಿಯೂ, ಸಾಹಿತ್ಯ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

Aryabhata international award to Suresh Shyam Rao Neramballi

ಕರ್ನಾಟಕ ಹೈಕೋರ್ಟ್ ನ ವಿಶ್ರಾಂತ ನ್ಯಾಯಮೂರ್ತಿ ನಾಗಮೋಹನ ದಾಸ್, ಡಾ|ಮಹೇಶ್ ಜೋಷಿ, ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಸ್. ಎ. ಚನ್ನೇಗೌಡ, ಆರ್ಯಭಟ ಸಾಂಸ್ಕೃತಿಕ ಸಂಸ್ಥೆ ಸ್ಥಾಪಕಾಧ್ಯಕ್ಷ ಡಾ|ಎಚ್.ಎಲ್.ಎನ್. ರಾವ್ ರವರು ಉಪಸ್ಥಿತರಿದ್ದು ಪ್ರಶಸ್ತಿ ಪ್ರದಾನ ನೆರವೇರಿಸಿದರು.

ಸುರೇಶ್ ಶ್ಯಾಮ್ ರಾವ್ ನೇರಂಬಳ್ಳಿ ಇವರು ಹಲವಾರು ದಿನಪತ್ರಿಕೆ, ಒನ್ಇಂಡಿಯಾ ಕನ್ನಡ ಸೇರಿದಂತೆ ಹಲವಾರು ವೆಬ್ ನ್ಯೂಸ್ ಪೋರ್ಟಲ್‌ಗಳು, ವಿದ್ಯುನ್ಮಾನ ಮಾಧ್ಯಮಗಳಿಗೆ ಕುವೈತ್ ನಿಂದ ಹವ್ಯಾಸಿ ವರದಿಗಾರರಾಗಿಯೂ, ಸುದ್ದಿ ಅನುವಾದಕರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+