ನಾವಿಕದಿಂದ ಬೆಂಗಳೂರಿನಲ್ಲಿ 'ನಮ್ಮ ವಿಶ್ವ ಕನ್ನಡ' ಉತ್ಸವ
ಬೆಂಗಳೂರು, ಜನವರಿ 04 : ನಾರ್ಥ್ ಅಮೆರಿಕ ವಿಶ್ವ ಕನ್ನಡ ಅಸೋಸಿಯೇಷನ್ (ನಾವಿಕ) ಸಂಘಟನೆಯು ನಮ್ಮ ವಿಶ್ವ ಕನ್ನಡ ಉತ್ಸವ ಹೆಸರಲ್ಲಿ ಬೆಂಗಳೂರಿನಲ್ಲಿ 2016ರ ಜುಲೈ ತಿಂಗಳಲ್ಲಿ ನಾವಿಕೋತ್ಸವ ಹಮ್ಮಿಕೊಳ್ಳಲಿದೆ.
ನಾವಿಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಅಮೆರಿಕದ ಫ್ಲಾರಿಡಾದ ಖ್ಯಾತ ಪ್ರಸೂತಿ ತಜ್ಞೆ ಡಾ.ರೇಣುಕಾ ರಾಮಪ್ಪ ಅವರಿಗೆ ಭಾನುವಾರ ಸನ್ಮಾನ ಸಮಾರಂಭ ಏರ್ಪಡಿಸಿದ್ದ ವೇಳೆ ಈ ವಿಷಯ ಪ್ರಕಟಿಸಿದರು.
ಇದೊಂದು ಬಹುದೊಡ್ಡ ಸಮಾವೇಶವಾಗಿರಲಿದ್ದು, ರಾಜ್ಯ ಸರ್ಕಾರ, ವಿವಿಧ ಸರ್ಕಾರಿ ಸಂಸ್ಥೆಗಳು, ಕನ್ನಡ ಸಂಘಟನೆಗಳು, ಸಾಹಿತಿಗಳ ಸಹಿತ ಹಲವರೊಂದಿಗೆ ಚರ್ಚಿಸಿ ದಿನಾಂಕ ಮತ್ತು ಸ್ಥಳವನ್ನು ಅಂತಿಮಗೊಳಿಸಲಾಗುವುದು ಎಂದು ಡಾ.ರೇಣುಕಾ ರಾಮಪ್ಪ ಹೇಳಿದರು. ['ನಾವಿಕ' ಸಮ್ಮೇಳನ ಹೈಲೈಟ್ಸ್ ಮತ್ತು ಸೈಡ್ ಲೈಟ್ಸ್]

ಅಮೆರಿಕದಲ್ಲಿ ಈ ಮೊದಲು ನಾವಿಕದ ವತಿಯಿಂದ ಹಲವಾರು ಕನ್ನಡ ಸಂಬಂಧಿತ ಸಮಾವೇಶಗಳು, ಕಾರ್ಯಕ್ರಮಗಳು ನಡೆದಿವೆ. ಇದೀಗ ನಾವಿಕವು ಬೆಂಗಳೂರು ನಗರದಲ್ಲಿ ಕನ್ನಡಿಗರ ವಿಶ್ವ ಸಮಾವೇಶ ಹಮ್ಮಿಕೊಳ್ಳುತ್ತಿದೆ ಎಂದು ಅವರು ಹೇಳಿದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಎಲ್.ಹನುಮಂತಯ್ಯ ಅವರು ಡಾ.ರೇಣುಕಾ ರಾಮಪ್ಪ ಅವರನ್ನು ಸನ್ಮಾನಿಸಿದರು. ಉದ್ದೇಶಿತ ವಿಶ್ವ ಕನ್ನಡ ಸಮಾವೇಶಕ್ಕೆ ಎಲ್ಲ ನೆರವು ನೀಡುವುದಾಗಿ ಹನುಮಂತಯ್ಯ ಅವರು ಭರವಸೆ ನೀಡಿದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು, ರಂಗಕರ್ಮಿ ಬಿ.ವಿ.ರಾಜಾರಾಂ, ನಟ, ನಿರ್ದೇಶಕ ಯಶವಂತ ಸರ್‌ದೇಶಪಾಂಡೆ ಇತರರು ಇದ್ದರು.
ಮನವಿ : ಈ ಸಮಾವೇಶದಲ್ಲಿ ಭಾಗವಹಿಸುವ ಆಸಕ್ತಿ ಹೊಂದಿರುವ ಕನ್ನಡ ಸಂಘಟನೆಗಳು, ಸಾಹಿತಿಗಳು, ಬರಹಗಾರರು, ಕಲಾವಿದರು ತಮ್ಮನ್ನು ತಕ್ಷಣ ಸಂಪರ್ಕಿಸುವಂತೆ ಯಶವಂತ ಸರ್‌ದೇಶಪಾಂಡೆ ಅವರು ಮನವಿ ಮಾಡಿದ್ದಾರೆ. ಮಾಹಿತಿಗೆ [email protected] ಅಥವಾ 9845217869 ಸಂಪರ್ಕಿಸಬಹುದು.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ












Click it and Unblock the Notifications