ನಾಗತಿಹಳ್ಳಿ ಚಂದ್ರಶೇಖರ್ ಗೆ ಲಂಡನ್ ನಲ್ಲಿ ಗೌರವ
ಲಂಡನ್, ಸೆಪ್ಟೆಂಬರ್ 25: ಲಂಡನ್ ನ ಲ್ಯಾಂಬೆತ್ ಬಸವೇಶ್ವರ ಫೌಂಡೇಷನ್ ನಿಂದ ಸಾಹಿತಿ, ಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರಿಗೆ ಶುಕ್ರವಾರ ಗೌರವ ನೀಡಲಾಗಿದೆ. ಲ್ಯಾಂಬೆತ್ ನ ಮಾಜಿ ಮೇಯರ್ ಡಾ.ನೀರಜ್ ಪಾಟೀಲ್ ಆಹ್ವಾನಿಸಿ, ಫೌಂಡೇಷನ್ ಪರವಾಗಿ ಗೌರವಿಸಿದ್ದಾರೆ. ಕನ್ನಡ ಸಂಸ್ಕೃತಿ ಹಾಗೂ ಪರಂಪರೆಗೆ ನಾಗತಿಹಳ್ಳಿ ಚಂದ್ರಶೇಖರ್ ನೀಡಿದ ಕೊಡುಗೆ ಪರಿಗಣಿಸಿ ಈ ಗೌರವ ನೀಡಲಾಗಿದೆ.
ಕನ್ನಡಿಗರು ಯುಕೆ ನೇತೃತ್ವದಲ್ಲಿ ಬ್ರಿಟಿಷ್ ಕನ್ನಡ ಸಮುದಾಯದ ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕನ್ನಡಿಗರು ಯುಕೆ ಸಂಘವು ದಶಕಗಳಿಂದ ಕನ್ನಡ ಸಂಸ್ಕೃತಿ ಹಾಗೂ ಪರಂಪರೆಯನ್ನು ಯು.ಕೆಯಲ್ಲಿ ಪ್ರಚಾರ ಮಾಡುತ್ತಿದೆ. ಬಸವೇಶ್ವರ ಮೂರ್ತಿಗೆ ಗೌರವ ಸಲ್ಲಿಸಿದ ನಾಗತಿಹಳ್ಳಿ ಚಂದ್ರಶೇಖರ್, ಪ್ರಜಾಪ್ರಭುತ್ವಕ್ಕೆ ಹಾಗೂ ಸಾಮಾಜಿಕ ನ್ಯಾಯಕ್ಕೆ ಬಸವಣ್ಣ ನೀಡಿದ ಕೊಡುಗೆಯನ್ನು ಸ್ಮರಿಸಿದರು.

ಚಿತ್ರಕಥೆ ಬರಹಗಾರರಾಗಿ ಕಾಡಿನಬೆಂಕಿ ಸಿನಿಮಾ ಮೂಲಕ ಚಿತ್ರರಂಗ ಪ್ರವೇಶಿಸಿದ ನಾಗತಿಹಳ್ಳಿ, ಅನೇಕ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಸ್ವತಃ ನಿರ್ಮಾಣವನ್ನೂ ಮಾಡಿದ್ದಾರೆ. ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ, ಪುಟ್ಟಣ್ಣ ಕಣಗಾಲ್ ಪ್ರಶಸ್ತಿಗೂ ಭಾಜನರಾಗಿದ್ದಾರೆ. 'ಇಷ್ಟ ಕಾಮ್ಯ' ನಾಗತಿಹಳ್ಳಿ ಚಂದ್ರಶೇಖರ್ ಇತ್ತೀಚೆಗೆ ನಿರ್ದೇಶಿಸಿದ ಸಿನಿಮಾ.












Click it and Unblock the Notifications