‘ಮೂವತ್ತು ಮಳೆಗಾಲ’ದ ಕವಿ ಎಚ್.ಎಸ್.ವಿ

ಆದರೆ, ಅವರ ಹೃದಯದಲ್ಲಿದ್ದ ಕನ್ನಡ ಭಾಷೆಯನ್ನು ಅಧ್ಯಯನ ಮಾಡುವ ಮತ್ತು ಬರಹಗಾರನಾಗುವ ಉತ್ಕಟಾಕಾಂಕ್ಷೆ ಅವರನ್ನು ಸುಮ್ಮನಿರಗೊಡಲಿಲ್ಲ. ಧಾರವಾಡ ವಿಶ್ವವಿದ್ಯಾನಿಲಯದಿಂದ ಕನ್ನಡದಲ್ಲಿ ಬಿ.ಎ. ಪದವಿ ಪಡೆದು, ನಂತರ ಬೆಂಗಳೂರಿನ ಸೆಂಟ್ರಲ್ ಕಾಲೇಜಿಗೆ ಸೇರಿ ಬೆಂಗಳೂರು ವಿಶ್ವವಿದ್ಯಾಲಯದ ಎಂ.ಎ. ಪದವಿಯನ್ನು ಪಡೆದರು. 1973ರಲ್ಲಿ ಪ್ರೊ|| ಜಿ.ಎಸ್.ಶಿವರುದ್ರಪ್ಪನವರ ನೇತೃತ್ವದಲ್ಲಿ ಕಥನ ಕವನಗಳು ಎಂಬ ವಿಷಯ ಕುರಿತು ಥೀಸಿಸ್ ಬರೆದು ಬೆಂಗಳೂರು ವಿಶ್ವವಿದ್ಯಾಲಯದ ಪಿ.ಎಚ್.ಡಿ. ಪದವಿಯನ್ನೂ ಗಳಿಸಿದರು. ಸೇಂಟ್ ಜೋಸೆಫ್ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ 27 ವರ್ಷ ಸೇವೆ ಸಲ್ಲಿಸಿ, 2000ರಲ್ಲಿ ನಿವೃತ್ತರಾಗಿರುವ ಎಚ್ಚೆಸ್ವಿಯವರು ಈಗ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.
ಕೃತಿಗಳು : ವೆಂಕಟೇಶಮೂರ್ತಿಯವರು ಕವನಗಳು, ನಾಟಕಗಳು, ಸಣ್ಣ ಕಥೆಗಳು, ಕಾದಂಬರಿಗಳ ಜೊತೆಗೆ ಮಕ್ಕಳ ಸಾಹಿತ್ಯ ಕ್ಷೇತ್ರಕ್ಕೂ ತಮ್ಮ ಕೊಡುಗೆ ಸಲ್ಲಿಸಿದ್ದಾರೆ. ಅವರ ಕೆಲವು ಕೃತಿಗಳೆಂದರೆ : 'ಪರಿವೃತ್ತ"(ಕವಿತೆ), 'ಬಾಗಿಲು ಬಡಿವ ಜನ"(ಕವಿತೆ), 'ಸಿಂದಾಬಾದನ ಆತ್ಮಕಥೆ"(ಕವಿತೆ), 'ಕ್ರಿಯಾಪರ್ವ"(ಕವಿತೆ), ಉತ್ತರಾಯಣ (ಕವಿತೆ), 'ಅಮೆರಿಕದಲ್ಲಿ ಬಿಲ್ಲುಹಬ್ಬ"(ಕವಿತೆ)", 'ತಾಪಿ"(ಕಾದಂಬರಿ), 'ಬಾನಸವಾಡಿಯ ಬೆಂಕಿ"(ಕಥಾ ಸಂಕಲನ), ಹೆಜ್ಜೆಗಳು (ನಾಟಕ), 'ಹಕ್ಕಿಸಾಲು (ಮಕ್ಕಳ ಕವಿತೆ), 'ಅಮಾನುಷರು"(ಮಕ್ಕಳ ಕಾದಂಬರಿ), 'ಸಿಂಗಾರಿ" (ಪ್ರವಾಸ ಕಥನ).... ಇತ್ಯಾದಿಯಾಗಿ ಭಾಷಾಂತರ, ವಿಮರ್ಶೆಗಳನ್ನೊಳಗೊಂಡಂತೆ ಐವತ್ತಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. 'ಚಿನ್ನಾರಿ ಮುತ್ತ", 'ಕ್ರೌರ್ಯ", 'ಮತದಾನ" ಚಿತ್ರಗಳಿಗೆ ಸಾಹಿತ್ಯ ಒದಗಿಸಿರುವುದಲ್ಲದೆ ಕಿರುತೆರೆ ಧಾರಾವಾಹಿಗಳಿಗೂ ಗೀತೆಗಳನ್ನು ರಚಿಸಿದ್ದಾರೆ. ಇವರ ಹಲವಾರು ಭಾವಗೀತೆಗಳು ಧ್ವನಿಸುರುಳಿಗಳಾಗಿ ಕನ್ನಡಿಗರ ಮನ ಸೂರೆಗೊಂಡಿವೆ.
ಪ್ರಶಸ್ತಿಗಳು : ಕನ್ನಡ ಸಾಹಿತ್ಯ ಅಕಾಡೆಮಿ ಬಹುಮಾನ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಆರ್ಯಭಟ ಪ್ರಶಸ್ತಿ, ದೇವರಾಜ್ ಬಹಾದ್ದೂರ್ ಪ್ರಶಸ್ತಿ, ಡಿವಿಜಿ ಪ್ರಶಸ್ತಿ, ಮೈಸೂರು ಅನಂತಸ್ವಾಮಿ ಪ್ರಶಸ್ತಿ ಮುಂತಾದ ನಾಡಿನ ಹಲವಾರು ಗೌರವಗಳು ಎಚ್ಚೆಸ್ವಿಯವರನ್ನು ಅರಸಿ ಬಂದಿವೆ. ಎಚ್ಎಸ್ವಿ ಅವರು 2010ರ ಸೆಪ್ಟೆಂಬರ್ ನಲ್ಲಿ ನ್ಯೂ ಜೆರ್ಸಿಯಲ್ಲಿ ಜರಗಲಿರುವ 6ನೇ ಅಕ್ಕ ವಿಶ್ವ ಕನ್ನಡ ಸಮ್ಮೇಳನದ ಸಾಹಿತ್ಯ ವೇದಿಕೆಯಲ್ಲಿ ಮುಖ್ಯ ಅತಿಥಿಗಳಲ್ಲೊಬ್ಬರಾಗಿ ಭಾಗವಹಿಸುತ್ತಿದ್ದಾರೆ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications