Home / Photos
Photos: ಬಾರಾಮತಿಯಲ್ಲಿ ವಿಮಾನ ಪತನ, ಅಜಿತ್ ಪವಾರ್ ನಿಧನ
By Reshma P
ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನವು ಬಾರಾಮತಿಯಲ್ಲಿ ಅಪಘಾತಕ್ಕೀಡಾಗಿದೆ.
1/8
Share
ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನದ ಅಪಘಾತ ಅತ್ಯಂತ ಭೀಕರವಾಗಿದ್ದು, ಏರ್ಪೋರ್ಟ್ ಸಮೀಪ ವಿಮಾನದ ಅವಶೇಷಗಳು ಚಿಲ್ಲಾಪಿಲ್ಲಿಯಾಗಿ ಬಿದ್ದ ದೃಶ್ಯ ಎದೆ ನಡುಗಿಸುವಂತಿತ್ತು.
2/8
Share
66 ವರ್ಷದ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರೊಂದಿಗೆ ಅಂಗರಕ್ಷಕರೂ ಪ್ರಯಾಣಿಸುತ್ತಿದ್ದರು. ಪೈಲಟ್ ಸೇರಿದಂತೆ ಒಟ್ಟು ಐದು ಮಂದಿ ಮೃತಪಟ್ಟಿದ್ದಾರೆ.
3/8
Share
ವಿಮಾನಕ್ಕೆ ಬೆಂಕಿ ಹೊತ್ತಿಕೊಂಡು ಉರಿದಿದೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಪರದಾಡಿದ್ದಾರೆ.
4/8
Share
ವಿಮಾನ ಅಪಘಾತದ ವೇಳೆ ದೊಡ್ಡ ಮಟ್ಟದಲ್ಲಿ ಸದ್ದು ಕೂಡ ಕೇಳಿಬಂದಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಪವಾರ್ ಖಾಸಗಿ ವಿಮಾನದಲ್ಲಿ ಪ್ರಯಾಣ ಮಾಡುತ್ತಿದ್ದರು.
5/8
Share
ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ 'ಲಿಯರ್ಜೆಟ್ 45' ವಿಮಾನವು ಲ್ಯಾಂಡಿಂಗ್ಗೆ ಇನ್ನೇನು ಕೆಲವೇ ನಿಮಿಷಗಳಿರುವಾಗ ತಾಂತ್ರಿಕ ದೋಷವನ್ನು ಎದುರಿಸಿದೆ.
6/8
Share
ಅಜಿತ್ ಪವಾರ್ ಮಂಗಳವಾರ ಮುಂಬೈನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಿದ್ದರು. ಅದಾದ ಬಳಿಕ ಇಂದು ಮುಂಬೈ ನಗರದಿಂದ ಪುಣೆ ಕಡೆಗೆ ಅವರು ಪ್ರಯಾಣಿಸುತ್ತಿದ್ದರು.
7/8
Share
ವಿಮಾನದ ಅವಶೇಷ ತೆರವು ಕಾರ್ಯ ಕೂಡ ಆರಂಭವಾಗಿದ್ದು ಸ್ಥಳದಲ್ಲಿ ತನಿಖಾಧಿಕಾರಿಗಳು ಬೀಡು ಬಿಟ್ಟಿದ್ದಾರೆ.
8/8
Share
ಪುಣೆಯಲ್ಲಿ ನಡೆಯಲಿರುವ ಚುನಾವಣೆ ಸಿದ್ಧತಾ ಸಭೆಗಳಲ್ಲಿ ಪಾಲ್ಗೊಳ್ಳಲು ಖಾಸಗಿ ವಿಮಾನದಲ್ಲಿ ಪ್ರಯಾಣ ಮಾಡುತ್ತಿದ್ದರು


Click it and Unblock the Notifications