Home / Photos
ಕನ್ನಡ ಸಾಹಿತ್ಯ ಪರಿಷತ್ತಿನ ನವೀಕೃತ ಕುವೆಂಪು ಸಭಾಂಗಣ ಉದ್ಘಾಟಿಸಿದ ಬಸವರಾಜ ಬೊಮ್ಮಾಯಿ
ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ಕೇಂದ್ರ ಕಚೇರಿಯಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರಕವಿ ಕುವೆಂಪು ಅವರ ನವೀಕೃತ ಸಭಾಂಗಣ ಹಾಗೂ ಕುವೆಂಪು ಜನ್ಮದಿನಾಚರಣೆ ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು.
1/6
Share
ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ಕೇಂದ್ರ ಕಚೇರಿಯಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರಕವಿ ಕುವೆಂಪು ಅವರ ನವೀಕೃತ ಸಭಾಂಗಣ ಹಾಗೂ ಕುವೆಂಪು ಜನ್ಮದಿನಾಚರಣೆ ಕಾರ್ಯಕ್ರಮವನ್ನು ಶುಕ್ರವಾರ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು.
2/6
Share
ವೈಚಾರಿಕತೆಯಲ್ಲಿ ಕುವೆಂಪು ಜಗಜ್ಯೋತಿ ಬಸವಣ್ಣನವರ ವಿಚಾರಗಳನ್ನು ವಿಮರ್ಶೆ ಮಾಡಿದ್ದಾರೆ. ಎಲ್ಲಿ ನೋಡಿದರೂ ಅವರ ಚಿಂತನೆ ಮತ್ತು ಸಾಹಿತ್ಯ ಇದೆ. ಈ ಕಾರಣದಿಂದ ಈಗಲೂ ಕುವೆಂಪು ನಮ್ಮ ನಡುವೆ ಜೀವಂತವಾಗಿದ್ದಾರೆ. ಅವರ ಸಾಹಿತ್ಯದಲ್ಲಿ ಎಲ್ಲದಕ್ಕೂ ಪರಿಹಾರ ಇದೆ ಎಂದು ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.
3/6
Share
ಕಸಾಪ ವೇದಿಕೆ ಮೇಲೆ ಭಾಷಣ ಬಸವರಾಜ ಬೊಮ್ಮಾಯಿ ಅವರು, ಆರಂಭಿಸಿ ನಾನು ಮುಖ್ಯಮಂತ್ರಿ ಆಗಿದ್ದ ವೇಳೆ ಸುಮಾರು ಎರಡು ಸಾವಿರ ಕನ್ನಡ ಹೋರಾಟಗಾರರ ಪ್ರಕರಣಗಳನ್ನು ವಾಪಸ್ ಪಡೆದಿದ್ದೇವು. ನಾಮಪಲಕಗಳಲ್ಲಿ ಕಡ್ಡಾಯ ಕನ್ನಡ ಅನುಷ್ಠಾನ ಮಾಡದ ಪರಿಣಾಮವಾಗಿ ಈ ಪರಿಸ್ಥಿತಿ ಬಂದಿದೆ. ಆಡಳಿತಗಾರರಿಗೆ ಸೂಕ್ಷ್ಮತೆ ಇರಬೇಕು ಎಂದು ಪರೋಕ್ಷವಾಗಿ ಕಾಂಗ್ರೆಸ್ ರಾಜ್ಯ ಸರ್ಕಾರಕ್ಕೆ ಟಾಂಗ ನೀಡಿದರು.
4/6
Share
ಕುವೆಂಪು ಅವರು ಅಪರೂಪದ ವ್ಯಕ್ತಿತ್ವ ಒಂದು ರೀತಿಯಲ್ಲಿ ಅವರು ಯುಗಪುರುಷರು. ಕುವೆಂಪು ಆಳವಾಗಿ ನೋಡಿದಾಗ ಅತ್ಯಂತ ಮಾನವೀಯ ಗುಣಗಳಿರುವ ವ್ಯಕ್ತಿ. ವಿಸ್ತಾರವಾಗಿ ನೋಡಿದಾಗ ವಿಶ್ವ ಮಾನವರಾಗಿ ಕಾಣುತ್ತಾರೆ ಎಂದು ಬಸವರಾಜ ಬೊಮ್ಮಾಯಿ ಅವರು ರಾಷ್ಟ್ರಕವಿಯನ್ನು ಹಾಡಿ ಹೊಗಳಿದರು.
5/6
Share
ಕನ್ನಡ ಕಡ್ಡಾಯ ಕುರಿತು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ಕನ್ನಡ ಪರ ಹೋರಾಟಗಾರರನ್ನು ಜೈಲಿಗೆ ಹಾಕಿರುವುದು ದುಖವಾಗಿದ್ದು. ಕನ್ನಡ ಹೋರಾಟಗಾರರಿಗೆ ನಾವು ಬೆಂಬಲಿಸಬೇಕು. ಸರ್ಕಾರ ಸರಿಯಾಗಿ ಕಾನೂನು ಅನುಷ್ಠಾನ ಮಾಡದಿರುವುದಕ್ಕೆ ಕನ್ನಡಪರ ಸಂಘಟನೆಗಳು ಹೋರಾಟದ ಹಾದಿ ಹಿಡಿಯಬೇಕಾಗಿದೆ ಎಂದು ಬಸವರಾಜ ಬೊಮ್ಮಾಯಿ ಸರ್ಕಾರ ನಡೆ ಖಂಡಿಸಿದರು.
6/6
Share
ಸ್ವಾತಂತ್ರ್ಯ ಬಂದು ಎಪ್ಪತೈದು ವರ್ಷಗಳಾಗಿವೆ. ಕನ್ನಡ ನಾಡಿನಲ್ಲಿ ಕನ್ನಡದ ಅನುಷ್ಟಾನಕ್ಕಾಗಿ ಕಾನೂನು ಮಾಡುವ ಅನಿವಾರ್ಯತೆ ಬಂದಿರುವುದು ಬೇಸರದ ಸಂಗತಿ. ಆದರೆ, ಈಗ ಕಾನೂನೂ ಮಾಡದಿದ್ದರೆ ನಮ್ಮ ಮಕ್ಕಳಿಗೆ ಕಷ್ಟವಾಗಲಿದೆ. ಈಗಲೇ ಕನ್ನಡ ಬಳಿಕೆಯ ಕಡ್ಡಾಯ ಅನುಷ್ಠಾನವಾಗಬೇಕು ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.


Click it and Unblock the Notifications