Home / Photos
ರಾಹುಲ್ ಗಾಂಧಿ, ಸಿದ್ದರಾಮಯ್ಯ ಭೇಟಿಯಾದ ಸಾಗರ್ ಖಂಡ್ರೆ
By Gururaj S
ಲೋಕಸಭೆ ಚುನಾವಣೆ 2024ರಲ್ಲಿ ಗೆಲುವು ಸಾಧಿಸಿ ಬೀದರ್ ಸಂಸದರಾದ ಸಾಗರ್ ಖಂಡ್ರೆ ವಿವಿಧ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದರು.
1/6
Share
ಬೀದರ್ ಸಂಸದ ಸಾಗರ್ ಖಂಡ್ರೆ ಕಾಂಗ್ರೆಸ್ ಪಕ್ಷದ ರಾಷ್ಟೀಯ ನಾಯಕ ರಾಹುಲ್ ಗಾಂಧಿಯನ್ನು ಕೆಪಿಸಿಸಿ ಕಛೇರಿಯಲ್ಲಿ ಭೇಟಿ ಮಾಡಿದರು. ಲೋಕಸಭಾ ಚುನಾವಣೆಯಲ್ಲಿ ಜಯಗಳಿಸಿದ ಸಾಗರ್ ಖಂಡ್ರೆ ಅವರನ್ನು ರಾಹುಲ್ ಗಾಂಧಿ, ಅಭಿನಂದಿಸಿ ಶುಭ ಹಾರೈಸಿದರು.
2/6
Share
ಬೀದರ್ ಲೋಕಸಭಾ ಚುನಾವಣೆ 2024ರಲ್ಲಿ ಜಯಗಳಿಸಿದ ನಂತರ ಸಾಗರ್ ಖಂಡ್ರೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿ ಆಶೀರ್ವಾದ ಪಡೆದರು. ಈ ಸಂಧರ್ಭದಲ್ಲಿ ಸಚಿವ ಈಶ್ವರ ಖಂಡ್ರೆ, ಮಾಜಿ ಸಚಿವ ರಾಜಶೇಖರ್ ಪಾಟೀಲ್, ಮಾಜಿ ಶಾಸಕ ಅಶೋಕ್ ಖೇಣಿ ಮುಂತಾದವರು ಇದ್ದರು.
3/6
Share
ಬೀದರ್ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಜಯಗಳಿಸಿದ ನಂತರ ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಸಾಗರ್ ಖಂಡ್ರೆ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಭೇಟಿಯಾಗಿ ಆಶೀರ್ವಾದವನ್ನು ಪಡೆದರು.
4/6
Share
ಬೀದರ್ ಲೋಕಸಭಾ ಕ್ಷೇತ್ರದ ಸಂಸದನಾಗಿ ಆಯ್ಕೆಯಾದ ಬಳಿಕ ಸಾಗರ್ ಖಂಡ್ರೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಡಾ. ಅಜಯ ಸಿಂಗ್, ವಿಜಯ ಸಿಂಗ್ ಸೇರಿದಂತೆ ಹಲವು ನಾಯಕರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
5/6
Share
ಬೀದರ್ ಸಂಸದ ಸಾಗರ್ ಖಂಡ್ರೆ ಕಾಂಗ್ರೆಸ್ ಪಕ್ಷದ ನಾಯಕ, ಬೀದರ್ ದಕ್ಷಿಣ ಕ್ಷೇತ್ರದ ಮಾಜಿ ಶಾಸಕ ಅಶೋಖ್ ಖೇಣಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
6/6
Share
ಬೀದರ್ ಸಂಸದ ಸಾಗರ್ ಖಂಡ್ರೆ ರಾಹುಲ್ ಗಾಂಧಿ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ನಡೆದ ನೂತನ ಸಂಸದರು ಹಾಗೂ ಪರಾಜಿತ ಕಾಂಗ್ರೆಸ್ ಅಭ್ಯರ್ಥಿಗಳ ಸಭೆಯಲ್ಲಿ ಭಾಗವಹಿಸಿದ್ದರು. ರಾಜ್ಯ ಹಾಗೂ ದೇಶದ ಅಭಿವೃದ್ಧಿ ದೃಷ್ಟಿಕೋನದಿಂದ ಕಾಂಗ್ರೆಸ್ ಪಕ್ಷದ ವತಿಯಿಂದ ಮುಂದೆ ಕೈಗೊಳ್ಳಬೇಕಿರುವ ನಿರ್ಣಯಗಳ ಕುರಿತು ರಾಹುಲ್ ಗಾಂಧಿ ಸಲಹೆ, ಸೂಚನೆಗಳನ್ನು ನೀಡಿದರು.


Click it and Unblock the Notifications