Home / Photos
ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಿದ ವಿಜಯೇಂದ್ರ
By Gururaj S
ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ 'ಹರ್ ಘರ್ ತಿರಂಗಾ ಅಭಿಯಾನ'ವನ್ನು ಉದ್ಘಾಟಿಸಿದರು. ಅಭಿಯಾನದ ಸಂದರ್ಭದಲ್ಲಿ ಮನೆಗಳ ಮೇಲೆ ರಾಷ್ಟ್ರಧ್ವಜವನ್ನು ಹಾರಿಸಬೇಕು.
1/6
Share
78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಮಂಗಳವಾರ ಬೆಂಗಳೂರು ನಗರದಲ್ಲಿ ಮಂಗಳವಾರ ಮನೆಗಳ ಮೇಲೆ ರಾಷ್ಟ್ರಧ್ವಜವನ್ನು ಹಾರಿಸುವ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಿದರು. ಪ್ರಧಾನಿ ನರೇಂದ್ರ ಮೋದಿ ಕರೆಯಂತೆ ಈ ಅಭಿಯಾನವನ್ನು ನಡೆಸಲಾಗುತ್ತಿದೆ.
2/6
Share
ಪ್ರತಿ ಮನೆಯಲ್ಲೂ ಭಾರತದ ತ್ರಿವರ್ಣ ಧ್ವಜ ರಾರಾಜಿಸಬೇಕೆಂದು ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಿದ್ದೇವೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ತಿರಂಗಾ ಯಾತ್ರೆ ಕೂಡ ಆಯೋಜಿಸಲಾಗಿದೆ ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿದರು.
3/6
Share
ಬೆಂಗಳೂರಿನ ಚಿಕ್ಕಪೇಟೆಯ ಬಿಜೆಪಿ ಶಾಸಕ ಉದಯ್ ಗರುಡಚಾರ್ ತಮ್ಮ ನಿವಾಸದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮನೆಗಳ ಮೇಲೆ ರಾಷ್ಟ್ರಧ್ವಜವನ್ನು ಹಾರಿಸುವ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ರಾಷ್ಟ್ರಧ್ವಜವನ್ನು ಹಾರಿಸಿದರು.
4/6
Share
ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ ಶಿವಮೊಗ್ಗದ ನಿವಾಸದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮನೆಗಳ ಮೇಲೆ ರಾಷ್ಟ್ರಧ್ವಜವನ್ನು ಹಾರಿಸುವ ಹರ್ ಘರ್ ತಿರಂಗಾ ಅಭಿಯಾನವನ್ನು ಆರಂಭಿಸಿದರು. ಮನೆಯ ಮೇಲೆ ರಾಷ್ಟ್ರಧ್ವಜವನ್ನು ಹಾರಿಸಿದರು.
5/6
Share
ಶಿವಮೊಗ್ಗ ನಗರದ ಬಿಜೆಪಿ ಶಾಸಕ ಎಸ್. ಎನ್. ಚನ್ನಬಸಪ್ಪ 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮನೆಗಳ ಮೇಲೆ ರಾಷ್ಟ್ರಧ್ವಜವನ್ನು ಹಾರಿಸುವ ಹರ್ ಘರ್ ತಿರಂಗಾ ಅಭಿಯಾನವನ್ನು ಆರಂಭಿಸಿದರು. ಮನೆಯ ಮೇಲೆ ರಾಷ್ಟ್ರಧ್ವಜವನ್ನು ಹಾರಿಸಿದರು.
6/6
Share
ಪ್ರಧಾನಿ ನರೇಂದ್ರ ಮೋದಿ ಕರೆಯಂತೆ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಬೆಂಗಳೂರಿನ ಶಿವಾಜಿನಗರದ ವಸಂತನಗರ ವಾರ್ಡ್ನ ಬೂತ್ ಸಂಖ್ಯೆ 44ರ ಅಧ್ಯಕ್ಷ ಎಂ. ಸಾಗರ್ ಅವರ ನಿವಾಸದಲ್ಲಿ ಬಿ. ವೈ. ವಿಜಯೇಂದ್ರ ರಾಷ್ಟ್ರಧ್ವಜ ಹಾರಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.


Click it and Unblock the Notifications