Home / Photos
ಚನ್ನಪಟ್ಟಣ ಉಪ ಚುನಾವಣೆ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ
By Gururaj S
ನವೆಂಬರ್ 13ರಂದು ನಡೆಯುವ ಚನ್ನಪಟ್ಟಣ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ. ಪಿ. ಯೋಗೇಶ್ವರ ಗುರುವಾರ ನಾಮಪತ್ರ ಸಲ್ಲಿಕೆ ಮಾಡಿದರು.
1/6
Share
ನವೆಂಬರ್ 13ರಂದು ನಡೆಯುವ ಚನ್ನಪಟ್ಟಣ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ. ಪಿ. ಯೋಗೇಶ್ವರ ಗುರುವಾರ ನಾಮಪತ್ರ ಸಲ್ಲಿಕೆ ಮಾಡಿದರು. ಇದಕ್ಕೂ ಮೊದಲು ಅವರು ಶ್ರೀ ಅಪ್ರಮೇಯ ಸ್ವಾಮಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆಯನ್ನು ಸಲ್ಲಿಕೆ ಮಾಡಿದರು.
2/6
Share
ಚನ್ನಪಟ್ಟಣ ವಿಧಾನಸಭಾ ಚುನಾವಣಾಧಿಕಾರಿಗಳ ಕಛೇರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ. ಪಿ. ಯೋಗೇಶ್ವರ ನಾಮಪತ್ರ ಸಲ್ಲಿಕೆ ಮಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ. ಕೆ. ಸುರೇಶ್, ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಉಪಸ್ಥಿತರಿದ್ದರು.
3/6
Share
ಸಿ. ಪಿ. ಯೋಗೇಶ್ವರ ನಾಮಮಪತ್ರ ಸಲ್ಲಿಕೆಗೂ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ಮಾಜಿ ಸಂಸದ ಡಿ. ಕೆ. ಸುರೇಶ್ ಸೇರಿದಂತೆ ಹಲವು ನಾಯಕರ ಜೊತೆ ರೋಡ್ ಶೋ ನಡೆಸಿದರು.
4/6
Share
ಕಾಂಗ್ರೆಸ್ ಅಭ್ಯರ್ಥಿ ಸಿ. ಪಿ. ಯೋಗೇಶ್ವರ ನಾಮಪತ್ರ ಸಲ್ಲಿಕೆಗೂ ಮೊದಲು ಬೃಹತ್ ರೋಡ್ ಶೋನದಲ್ಲಿ ಪಾಲ್ಗೊಂಡರು. ಡಿ. ಕೆ. ಸುರೇಶ್ ಸೇರಿದಂತೆ ಹಲವಾರು ನಾಯಕರು ಪಾಲ್ಗೊಂಡಿದ್ದರು.
5/6
Share
ಡಿ. ಕೆ. ಶಿವಕುಮಾರ್ ಮಾತನಾಡಿ ಇಂದು ಸೇರಿದ ಜನ ಸಾಗರವೇ ಫಲಿತಾಂಶ ಏನೆಂದು ಹೇಳುತ್ತಿದೆ. ಬಡವರ ಶ್ರೇಯೋಭಿವೃದ್ಧಿಗಾಗಿ ಕೆಲಸ ಮಾಡುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಸಾಥ್ ನೀಡಲು ಯೋಗೇಶ್ವರ ಅವರು ಕೈ ಜೋಡಿಸಿದ್ದಾರೆ ಎಂದರು.
6/6
Share
ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಚನ್ನಪಟ್ಟಣದ ಜನತೆ ಇಡೀ ದೇಶಕ್ಕೆ ಒಂದು ಸಂದೇಶ ನೀಡಲಿದೆ ಎನ್ನುವ ಆತ್ಮವಿಶ್ವಾಸ ನನಗಿದೆ ಎಂದು ಹೇಳಿದರು. ನವೆಂಬರ್ 13ರಂದು ಉಪ ಚುನಾವಣೆ ನಡೆಯಲಿದ್ದು, ನವೆಂಬರ್ 23ರಂದು ಫಲಿತಾಂಶ ಪ್ರಕಟವಾಗಲಿದೆ.


Click it and Unblock the Notifications