Home / Photos
ಚನ್ನಪಟ್ಟಣ ಉಪ ಚುನಾವಣೆ, ಕಾಂಗ್ರೆಸ್ ಸೇರಿದ 'ಸೈನಿಕ' ಸಿಪಿ ಯೋಗೇಶ್ವರ
By Gururaj S
ಬಿಜೆಪಿ ನಾಯಕ, ಮಾಜಿ ಸಚಿವ ಸಿ. ಪಿ. ಯೋಗೇಶ್ವರ ಕಾಂಗ್ರೆಸ್ ಪಕ್ಷವನ್ನು ಸೇರಿದರು. ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಗೆ ಅವರು ಕಾಂಗ್ರೆಸ್ ಅಭ್ಯರ್ಥಿಯಾಗುವ ನಿರೀಕ್ಷೆ ಇದೆ.
1/6
Share
ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಸಿ. ಪಿ. ಯೋಗೇಶ್ವರ ಕೆಪಿಸಿಸಿ ಕಛೇರಿಯಲ್ಲಿ ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಪಕ್ಷದ ಧ್ವಜವನ್ನು ನೀಡುವ ಮೂಲ ಸಿ. ಪಿ. ಯೋಗೇಶ್ವರ ಮತ್ತು ಅವರ ಬೆಂಬಲಿಗರನ್ನು ಪಕ್ಷಕ್ಕೆ ಬರಮಾಡಿಕೊಂಡರು.
2/6
Share
ಕೆಪಿಸಿಸಿ ಕಛೇರಿಯಲ್ಲಿ ಕಾಂಗ್ರೆಸ್ ಸೇರುವ ಮೊದಲು ಸಿ. ಪಿ. ಯೋಗೇಶ್ವರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೃಹ ಕಛೇರಿಯಲ್ಲಿ ಭೇಟಿ ಮಾಡಿದರು. ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಮತ್ತು ಹಲವು ಸಚಿವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
3/6
Share
ಮಾಜಿ ಸಚಿವ ಹಾಗೂ ಬಿಜೆಪಿಯ ನಾಯಕ ಸಿ. ಪಿ. ಯೋಗೇಶ್ವರ ಕಾಂಗ್ರೆಸ್ ತತ್ವ, ಸಿದ್ಧಾಂತಗಳ ಮೇಲೆ ನಂಬಿಕೆಯಿಟ್ಟು ಇಂದು ಕೆಪಿಸಿಸಿ ಕಚೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಯೋಗೇಶ್ವರ ಅವರನ್ನು ಅಭಿನಂದಿಸಿ ಪಕ್ಷಕ್ಕೆ ಆತ್ಮೀಯವಾಗಿ ಸ್ವಾಗತಿಸಿ, ಬರಮಾಡಿಕೊಂಡರು.
4/6
Share
ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಯೋಗೇಶ್ವರ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರಿದರು. ಅದಕ್ಕೂ ಮೊದಲು ಅವರು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಪಡೆದುಕೊಂಡರು. ಯೋಗೇಶ್ವರ ಯಾವುದೇ ಷರತ್ತಿಲ್ಲದೆ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಈಗಾಗಲೇ ನಾವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಈ ಬಗ್ಗೆ ಚರ್ಚಿಸಿದ್ದೇವೆ ಎಂದು ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.
5/6
Share
ಸಿ. ಪಿ. ಯೋಗೇಶ್ವರ ರಾಜಕಾರಣ ಆರಂಭಿಸಿದ್ದೇ ಕಾಂಗ್ರೆಸ್ ಪಕ್ಷದಿಂದ, ಹೀಗಾಗಿ ಮರಳಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ನಾಯಕತ್ವದಲ್ಲಿ ನಾನೂ ಕೂಡ ಕಾಂಗ್ರೆಸ್ ಪಕ್ಷದಲ್ಲಿರಬೇಕು ಎಂದು ಬಯಸಿದ್ದಾರೆ. ಎಲ್ಲ ಪಕ್ಷಗಳನ್ನೂ ಅವರು ನೋಡಿದ್ದಾರೆ. ಪಕ್ಷೇತರರಾಗಿಯೂ ಗೆದ್ದಿದ್ದಾರೆ. ಕೆಪಿಸಿಸಿ ಅಧ್ಯಕ್ಷನಾಗಿ ತುಂಬು ಹೃದಯದಿಂದ ಅವರನ್ನು ಸ್ವಾಗತಿಸುತ್ತೇನೆ ಎಂದು ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.
6/6
Share
ನವೆಂಬರ್ 13ರಂದು ಚನ್ನಪಟ್ಟಣದ ಉಪ ಚುನಾವಣೆ ನಡೆಯಲಿದೆ. ಇದಕ್ಕೂ ಮೊದಲು ಸಿ. ಪಿ. ಯೋಗೇಶ್ವರ ಕಾಂಗ್ರೆಸ್ ಸೇರಿದ್ದಾರೆ. ಕೆಪಿಸಿಸಿ ಕಛೇರಿಯಲ್ಲಿ ಕಾಂಗ್ರೆಸ್ ಸೇರಿದ ಬಳಿಕ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.


Click it and Unblock the Notifications