ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ವಾಗ್ವಾದ
ಸರ್ಕಾರದ ಉತ್ತರಕ್ಕೆ ಅತೃಪ್ತಿಕೊಂಡ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.
ಸರ್ಕಾರದಿಂದ ನಮಗೆ ಸರಿಯಾದ ಉತ್ತರ ಬೇಕು ಎಂದು ಸಭಾಧ್ಯಕ್ಷರ ಬಳಿ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ಮನವಿ ಮಾಡಿದರು.
ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯರ ಪ್ರಶ್ನೆಗೆ ಸಚಿವ ಶ್ರೀರಾಮುಲು ಉತ್ತರಿಸಿದ್ದು ಹೀಗೆ
ಸಚಿವ ಶ್ರೀರಾಮುಲು ಉತ್ತರಕ್ಕೆ ಸರ್ಕಾರದ ವಿರುದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದು ಹೀಗೆ.
ಎಲ್ಲಾ ಹಳ್ಳಿ ಭಾಗದಲ್ಲಿ ಶಾಲಾ ಮಕ್ಕಳಿಗೆ ಅನುಕೂಲವಾಗುವಂತೆ ಬಸ್ ವ್ಯವಸ್ಥೆ ಮಾಡಬೇಕು ಎಂದು ಕಾಂಗ್ರೆಸ್ ಸದಸ್ಯರು ಆಗ್ರಹಿಸಿದರು. ಈ ವೇಳೆ ಸಾರಿಗೆ ಸಚಿವ ಶ್ರೀರಾಮುಲು ಬಸ್ ಬಿಡೋದಕ್ಕೆ ಸಮಸ್ಯೆ ಅಂದರೆ ಹಳ್ಳಿ ಭಾಗದಲ್ಲಿ ರಸ್ತೆಗಳು ಸರಿ ಇಲ್ಲ ಉತ್ತರಿಸಿದರು. ಈ ವೇಳೆ ಶ್ರೀರಾಮುಲು ಉತ್ತರಕ್ಕೆ ಅತೃಪ್ತಿ ವ್ಯಕ್ತಪಡಿಸಿದ ಕೈ ಶಾಸಕರು
ಸದನದ ಬಾವಿಗಳಿದು ಆಕ್ರೋಶ ವ್ಯಕ್ತಪಡಿಸಿದರು.


Click it and Unblock the Notifications