Home / Photos
ಮಂಡ್ಯದ ನಾಗಮಂಗಲದಲ್ಲಿ ಘರ್ಷಣೆ, ಸಚಿವ ಚಲುವರಾಯಸ್ವಾಮಿ ಭೇಟಿ
By Gururaj S
ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಮಂಡ್ಯದ ನಾಗಮಂಗಲದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಘರ್ಷಣೆ ನಡೆದ ಸ್ಥಳಕ್ಕೆ ಭೇಟಿ ನೀಡಿದರು.
1/6
Share
ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ಬುಧವಾರ ಸಂಜೆ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಘರ್ಷಣೆ ನಡೆದಿದೆ. ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ. ಕೃಷಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ನಾಗಮಂಗಲದಲ್ಲಿ ಘರ್ಷಣೆ ನಡೆದ ಸ್ಥಳಕ್ಕೆ ಭೇಟಿ ನೀಡಿದರು.
2/6
Share
ನಾಗಮಂಗಲ ಪಟ್ಟಣದಲ್ಲಿ ಬುಧವಾರ ಸಂಜೆ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಡಿಜೆ ಹಾಕುವ ವಿಚಾರಕ್ಕೆ ಉಂಟಾದ ವಿವಾದ ಘರ್ಷಣೆಯ ಸ್ವರೂಪ ಪಡೆದಿದೆ. ಅಂಗಡಿಗಳು, ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಪೊಲೀಸರು ಮತ್ತು ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.
3/6
Share
ಬುಧವಾರ ನಾಗಮಂಗಲದ ಮಾಜಿ ಶಾಸಕ ಸುರೇಶ್ ಗೌಡ, ಕೃಷಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಘರ್ಷಣೆ ನಡೆದ ಸ್ಥಳಕ್ಕೆ ಭೇಟಿ ನೀಡಿದರು. ಪರಿಸ್ಥಿತಿಯನ್ನು ಅವಲೋಕಿಸಿದರು.
4/6
Share
ನಾಗಮಂಗಲ ಪಟ್ಟಣದಲ್ಲಿ ಘರ್ಷಣೆ ನಡೆದ ಸ್ಥಳದಲ್ಲಿ ಅಂಗಡಿಗಳಿಗೆ ಬೆಂಕಿ ಹಚ್ಚಿದ ಕಾರಣ ವ್ಯಾಪಾರಿಗಳಿಗೆ ಅಪಾರ ನಷ್ಟ ಉಂಟಾಗಿದೆ. ಅಂಗಡಿಗಳಲ್ಲಿ ಇದ್ದ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ. ವ್ಯಾಪಾರಿಗಳು ಪರಿಹಾರ ನೀಡುವಂತೆ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.
5/6
Share
ನಾಗಮಂಗಲದಲ್ಲಿ ಗಣೇಶನ ಮೆರವಣಿಗೆಯ ಸಂದರ್ಭದಲ್ಲಿ ನಡೆದಿರುವ ಅಹಿತಕರ ಘಟನೆಯ ಬಗ್ಗೆ ಪೊಲೀಸ್ ಅಧಿಕಾರಿಗಳು ಹಾಗೂ ಜಿಲ್ಲಾಡಳಿತದೊಂದಿಗೆ ಚರ್ಚಿಸಿ, ಪರಿಸ್ಥಿತಿಯನ್ನು ತಿಳಿಗೊಳಿಸಲಾಗಿದೆ. ಘಟನೆಯ ಸಂದರ್ಭದಲ್ಲಿ ಕೆಲವು ಅಂಗಡಿ ಮುಂಗಟ್ಟುಗಳಿಗೆ ಹಾನಿಯಾಗಿದ್ದು ಅವನ್ನು ಪರಿಶೀಲನೆ ನಡೆಸಲಾಗುವುದು ಎಂದು ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ.
6/6
Share
ಸಚಿವ ಎನ್. ಚಲುವರಾಯಸ್ವಾಮಿ ನಾಗಮಂಗಲದಲ್ಲಿ ನಡೆದ ಘಟನೆಯ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಸಭೆ ನಡೆಸಿ, ಮಾಹಿತಿ ಪಡೆದರು. ಸಾರ್ವಜನಿಕರು ಯಾವುದೇ ಊಹಾಪೋಹಗಳಿಗೆ ಕಿವಿಗೊಡದೇ ಶಾಂತಿ ಸೌಹಾರ್ದತೆ ನೆಲೆಸಲು ಸಹಕರಿಸಬೇಕಾಗಿ ಮನವಿ ಮಾಡಿದ್ದಾರೆ. ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಯುತ್ತಿದ್ದು, ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.


Click it and Unblock the Notifications