ವಿಧಾನಸಧದ ಮುಂದೆ ಬಸವೇಶ್ವರ, ನಾಡಪ್ರಭು ಕೆಂಪೇಗೌಡರ ಪುತ್ಥಳಿ ನಿರ್ಮಾಣ: ಸಿಎಂ ಬೊಮ್ಮಾಯಿ ಶಂಕುಸ್ಥಾಪನೆ
ಒಟ್ಟು ಎಂಟು ಕೋಟಿ ಅಂದಾಜು ವೆಚ್ಚದಲ್ಲಿ ಬಹುದಿನಗಳ ಬೇಡಿಕೆಯಾಗಿದ್ದ ಬಸವೇಶ್ವರರು ಮತ್ತು ಕೆಂಪೇಗೌಡರ ಪುತ್ಥಳಿ ವಿಧಾನಸೌಧದ ಆವರಣದಲ್ಲಿ ಸ್ಥಾಪಿತಗೊಳ್ಳಲಿವೆ.
ಭೂಮಿ ಪೂಜೆ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಅವರ ಜೊತೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಕಂದಾಯ ಸಚಿವ ಆರ್.ಅಶೋಕ್, ಆದಿಚುಂಚನಗಿರಿ ಸಂಸ್ಥಾನ ಮಠದ ನಿರ್ಮಲಾನಂದನಾಥ ಶ್ರೀ, ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.
ವಿಧಾನಸೌಧದ ಮುಂದೆ ಶ್ರಿ ಜಗಜ್ಯೋತಿ ಬಸವೇಶ್ವರರು ಮತ್ತು ನಾಡಪ್ರಭು ಕೆಂಪೇಗೌಡರ ತಲಾ 24 ಅಡಿ ಎತ್ತರದ ಕಂಚಿನ ಪುತ್ಥಳಿ ಶೀಘ್ರದಲ್ಲೇ ಎತ್ತಲಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ.
ಒಟ್ಟು ಎಂಟು ಕೋಟಿ ಅಂದಾಜು ವೆಚ್ಚದಲ್ಲಿ ಬಹುದಿನಗಳ ಬೇಡಿಕೆಯಾಗಿದ್ದ ಬಸವೇಶ್ವರರು ಮತ್ತು ಕೆಂಪೇಗೌಡರ ಪುತ್ಥಳಿ ವಿಧಾನಸೌಧದ ಆವರಣದಲ್ಲಿ ಸ್ಥಾಪಿತಗೊಳ್ಳಲಿವೆ.


Click it and Unblock the Notifications