Home / Photos
ಧಾರವಾಡ ನಗರ ಸಾರಿಗೆ ಬಸ್ ನಿಲ್ದಾಣ ನಿರ್ಮಾಣಕ್ಕೆ ಗುದ್ದಲಿಪೂಜೆ
By Mallika P
ಧಾರವಾಡ ನಗರ ಸಾರಿಗೆ ಬಸ್ ನಿಲ್ದಾಣ ನಿರ್ಮಾಣ ಚಾಲನೆ ನೀಡಲಾಗಿದೆ.
1/7
Share
ಧಾರವಾಡ ನಗರ ಸಾರಿಗೆ ಬಸ್ ನಿಲ್ದಾಣ ನಿರ್ಮಾಣಕ್ಕೆ ಇಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಗುದ್ದಲಿಪೂಜೆ ನೆರವೇರಿಸಿದರು. ಸಚಿವರಾದ ಸಂತೋಷ್ ಲಾಡ್, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
2/7
Share
ಶಕ್ತಿ ಯೋಜನೆಯಿಂದ ಮಹಿಳಾ ಪ್ರಯಾಣಿಕರಿಗೆ ಅನುಕೂಲವಾಗಿದೆ. ಉತ್ತರ ಕರ್ನಾಟಕ ಭಾಗದ ಪ್ರಯಾಣಿಕರಿಗೆ 884 ಹೊಸ ಬಸ್ ಖರೀದಿಸಲಾಗುವುದು. ಈಗಾಗಲೇ 375 ಬಸ್ ಗಳ ಖರೀದಿಗೆ ಟೆಂಡರ್ ಕರೆಯಲಾಗಿದೆ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಹೇಳಿದರು.
3/7
Share
ಇಂದು ಐಷಾರಾಮಿ ವ್ಯವಸ್ಥೆ ಇರುವ ಬಿಎಸ್-6 ನಾನ್ ಎಸಿ-ಸ್ಲೀಪರ್ 4 ಪಲ್ಲಕ್ಕಿ ವಾಹನಗಳನ್ನು ಲೋಕಾರ್ಪಣೆ ಮಾಡಲಾಯಿತು. ಈ ಬಸ್ಸುಗಳು 30 ಬರ್ಥ್ ಹೊಂದಿರುತ್ತದೆ. ಪ್ರತಿ ವಾಹನದ ಬೆಲೆ 45 ಲಕ್ಷ ರೂಪಾಯಿಗಳಾಗಿದ್ದು, ಇನ್ನೂ 6 ವಾಹನಗಳು ಈ ತಿಂಗಳ ಅಂತ್ಯದ ಒಳಗೆ ಬರಲಿವೆ ಹಾಗೂ ಇನ್ನೂ 10 ವಾಹನಗಳ ಖರೀದಿಗೆ ಸಂಬಂಧಿಸಿದಂತೆ ಟೆಂಡರ್ ಪ್ರಕ್ರಿಯೆ ಜಾರಿಯಲ್ಲಿದೆ.
4/7
Share
13 ಕೋಟಿ ರೂ. ವೆಚ್ಚದಲ್ಲಿ ಧಾರವಾಡ ನಗರ ಸಾರಿಗೆ ಬಸ್ ನಿಲ್ದಾಣ ನಿರ್ಮಾಣ, 23 ಕೋಟಿ ರೂ. ವೆಚ್ಚದಲ್ಲಿ ಹುಬ್ಬಳ್ಳಿ ಹೊಸ ಬಸ್ ನಿಲ್ದಾಣವನ್ನು ನವೀಕರಣಗೊಳಿಸಿ ಮೇಲ್ದರ್ಜೆಗೆ ಏರಿಸುವ ಬಗ್ಗೆ ಹಾಗೂ 884 ಹೊಸ ಬಸ್ಗಳನ್ನು ಉತ್ತರ ಕರ್ನಾಟಕಕ್ಕೆ ನೀಡುವ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದರು.
5/7
Share
ಧಾರವಾಡ ಬಸ್ ನಿಲ್ದಾಣದ ನಿವೇಶನದ ವಿಸ್ತೀರ್ಣ 26 ಗುಂಟೆ, 44 ಆಣೆ ಇದೆ. ಕಟ್ಟಡದ ವಿಸ್ತೀರ್ಣ ನೆಲಮಹಡಿ 1935.57 ಚ.ಮೀ., ಮೆಜನೈನ್ ಮಹಡಿ 607 ಚ.ಮೀ., ಮೊದಲನೇ ಮಹಡಿ 1949 ಚ.ಮೀ., ಮೇಲ್ಮಹಡಿ 153.40 ಚ.ಮೀ. ಸೇರಿದಂತೆ ಒಟ್ಟು 4037.97 ಚ.ಮೀ. ಹೊಂದಿದೆ. ಯೋಜನೆಯ ಮೊತ್ತ ರೂ.13.11 ಕೋಟಿ ಆಗಿದೆ. ಮಳೆಗಾಲ ಹೊರತುಪಡಿಸಿ 12 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ.
6/7
Share
ಧಾರವಾಡ ಬಸ್ ನಿಲ್ದಾಣದಲ್ಲಿ ಬಸ್ ನಿಲ್ದಾಣದ ಮುಖ್ಯ ಕಟ್ಟಡ ಪ್ರಯಾಣಿಕರಿಗೆ ಕುಳಿತುಕೊಳ್ಳುವ ಆಸನದ ವ್ಯವಸ್ಥೆ, ಮಹಿಳೆಯರ ವಿಶ್ರಾಂತಿ ಗೃಹ, ಮಹಿಳೆಯರಿಗೆ ಹಾಗೂ ಪುರುಷರಿಗೆ ಪ್ರತ್ಯೇಕ ಶೌಚಾಲಯಗಳು, ಆವರಣದ ಕಾಂಕ್ರೀಟ್ ಮಾಡುವುದು, 4 ಬಸ್ ಗಳ ನಿಲುಗಡೆ ಅಂಕಣಗಳು, ಶುದ್ದ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಇತರ ವ್ಯವಸ್ಥೆ ಇರಲಿದೆ.
7/7
Share
ಗೋಕುಲ್ ರಸ್ತೆಯ ಬಸ್ ನಿಲ್ದಾಣದಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವತಿಯಿಂದ ಧಾರವಾಡ ನಗರ ಸಾರಿಗೆ ಬಸ್ ನಿಲ್ದಾಣ ನಿರ್ಮಾಣ, ಶಂಕು ಸ್ಥಾಪನೆ, ಹುಬ್ಬಳ್ಳಿ ಗೋಕುಲ್ ರಸ್ತೆಯ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಪಲ್ಲಕ್ಕಿ ಬಸ್ಗಳ ಲೋಕಾರ್ಪಣೆ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.


Click it and Unblock the Notifications