Home / Photos
ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ಕಛೇರಿ ಉದ್ಘಾಟನೆ
By Gururaj S
ಕಾಂಗ್ರೆಸ್ ನಾಯಕಿ, ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ತಮ್ಮ ಕಛೇರಿಯನ್ನು ಪೂಜೆ ಸಲ್ಲಿಸುವ ಮೂಲಕ ಭಾನುವಾರ ಉದ್ಘಾಟಿಸಿದರು.
1/6
Share
ದಾವಣಗೆರೆ ಜಿಲ್ಲಾಧಿಕಾರಿ ಕಛೇರಿ ಆವರಣದಲ್ಲಿ ಕಾಂಗ್ರೆಸ್ ನಾಯಕಿ, ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ಅವರ ನೂತನ ಕಛೇರಿಯನ್ನು ಭಾನುವಾರ ವಿಶೇಷ ಪೂಜೆ ಸಲ್ಲಿಸುವ ಮೂಲಕ ಉದ್ಘಾಟನೆ ಮಾಡಲಾಯಿತು. ನೂರಾರು ಕಾಂಗ್ರೆಸ್ ಕಾರ್ಯಕರ್ತರು ಕಛೇರಿ ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದರು.
2/6
Share
ದಾವಣಗೆರೆ ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ಅವರ ನೂತನ ಕಛೇರಿಯನ್ನು ಉದ್ಘಾಟಿಸಲಾಯಿತು. ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ಪುತ್ರಿ ಮತ್ತು ಕಾಂಗ್ರೆಸ್ನ ನೂರಾರು ಕಾರ್ಯಕರ್ತರ ಜೊತೆ ಕಛೇರಿ ಉದ್ಘಾಟನೆಗೆ ಮುನ್ನ ವಿಶೇಷ ಪೂಜೆಯನ್ನು ಸಲ್ಲಿಸಿದರು.
3/6
Share
ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ಅವರ ನೂತನ ಕಛೇರಿಯನ್ನು ಭಾನುವಾರ ದಾವಣಗೆರೆಯಲ್ಲಿ ಉದ್ಘಾಟಿಸಲಾಯಿತು. 2024ರ ಲೋಕಸಭೆ ಚುನಾವಣೆಯಲ್ಲಿ ಡಾ. ಪ್ರಭಾ ಮಲ್ಲಿಕಾರ್ಜುನ 6,33,059 ಮತಗಳನ್ನು ಪಡೆದು ದಾವಣಗೆರೆ ಕ್ಷೇತ್ರದಿಂದ ಮೊದಲ ಬಾರಿಗೆ ಸಂಸದೆಯಾಗಿ ಆಯ್ಕೆಯಾಗಿದ್ದಾರೆ.
4/6
Share
ನೂತನ ಕಛೇರಿ ಉದ್ಘಾಟನೆ ಬಳಿಕ ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ಆತ್ಮೀಯವಾಗಿ ಅಭಿನಂದಿಸಿ, ಶುಭ ಕೋರಿದರು. ಕಾಂಗ್ರೆಸ್ ಪಕ್ಷದ ನೂರಾರು ಕಾರ್ಯಕರ್ತರು, ಮಹಿಳಾ ಕಾಂಗ್ರೆಸ್ನ ಪದಾಧಿಕಾರಿಗಳು ಕಛೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
5/6
Share
ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ಕಾಂಗ್ರೆಸ್ನ ಹಿರಿಯ ನಾಯಕ ಡಾ. ಶಾಮನೂರು ಶಿವಶಂಕರಪ್ಪ ಸೊಸೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾದ ಎಸ್. ಎಸ್. ಮಲ್ಲಿಕಾರ್ಜುನ ಅವರ ಪತ್ನಿ. ಮೊದಲ ಬಾರಿಗೆ ಲೋಕಸಭೆ ಚುನಾವಣೆ ಎದುರಿಸಿದ ಡಾ. ಪ್ರಭಾ ಮಲ್ಲಿಕಾರ್ಜುನ ಚುನಾವಣೆಯಲ್ಲಿ ಗೆಲುವು ಸಾಧಿಸಿ ಸಂಸದರಾಗಿ ಆಯ್ಕೆಯಾಗಿದ್ದಾರೆ.
6/6
Share
ಕಾಂಗ್ರೆಸ್ ಕಾರ್ಯಕರ್ತರು ಭಾನುವಾರ ನೂತನ ಕಛೇರಿ ಉದ್ಘಾಟನೆ ಬಳಿಕ ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ಅವರನ್ನು ಸನ್ಮಾನಿಸಿದರು. ದಾವಣಗೆರೆ ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ಅವರ ಕಛೇರಿ ಇದೆ.


Click it and Unblock the Notifications