Home / Photos
ಜೈಲಿನಿಂದ ಮನೆಗೆ ಬಂದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್
By Gururaj S
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜೈಲಿನಿಂದ ಬಿಡುಗಡೆ ಆಗಿದ್ದಾರೆ. ಅಬಕಾರಿ ನೀತಿ ಹಗರಣದಲ್ಲಿ ಅವರಿಗೆ ಸುಪ್ರೀಂಕೋರ್ಟ್ನಿಂದ ಜಾಮೀನು ನೀಡಿದೆ. ಮನೆಗೆ ಆಗಮಿಸಿದ ಅವರು ತಂದೆ-ತಾಯಿ ಆಶೀರ್ವಾದ ಪಡೆದರು.
1/6
Share
ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ಸುಪ್ರೀಂಕೋರ್ಟ್ನಿಂದ ಜಾಮೀನು ಪಡೆದು ಜೈಲಿನಿಂದ ಮನೆಗೆ ಆಗಮಿಸಿದರು. ಮನೆಯಲ್ಲಿ ತಾಯಿ ಆರತಿ ಬೆಳಗುವ ಮೂಲಕ ಅರವಿಂದ್ ಕೇಜ್ರಿವಾಲ್ ಸ್ವಾಗತಿಸಿದರು. ಸುಮಾರು 6 ತಿಂಗಳು ಅರವಿಂದ್ ಕೇಜ್ರಿವಾಲ್ ಜೈಲುವಾಸ ಅನುಭವಿಸಿದ್ದಾರೆ.
2/6
Share
ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜೈಲಿನಿಂದ ಮನೆಗೆ ಬಂದ ತಕ್ಷಣ ತಂದೆ-ತಾಯಿ ಅಪ್ಪಿಕೊಂಡು ಸಂಭ್ರಮಿಸಿದರು. ಸಿಬಿಐನಿಂದ ತಮ್ಮ ಬಂಧನವನ್ನು ಪ್ರಶ್ನಿಸಿ ಕೇಜ್ರಿವಾಲ್ ಮಾಡಿದ ಮನವಿಯನ್ನು ಪರಿಗಣಿಸಿ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು.
3/6
Share
ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಹಾರ್ ಜೈಲಿನಿಂದ ಮನೆಗೆ ಬಂದ ತಕ್ಷಣ ತಾಯಿಯ ಆಶೀರ್ವಾದ ಪಡೆದುಕೊಂಡರು. ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಅರವಿಂದ್ ಕೇಜ್ರಿವಾಲ್ ಬಂಧಿಸಲಾಗಿತ್ತು, ಸುಪ್ರೀಂಕೋರ್ಟ್ ಅವರಿಗೆ ಜಾಮೀನು ನೀಡಿತ್ತು.
4/6
Share
ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮನೆಯಲ್ಲಿ ಪತ್ನಿ ಹೂವಿನ ಹಾರ ಹಾಕಿ ಸ್ವಾಗತಿಸಿದರು. ಎಎಪಿ ಪಕ್ಷದ ಪ್ರಮುಖ ನಾಯಕರು, ಕುಟುಂಬದವರು ಅರವಿಂದ್ ಕೇಜ್ರಿವಾಲ್ ಅವರನ್ನು ಮನೆಯಲ್ಲಿ ಬರಮಾಡಿಕೊಂಡರು.
5/6
Share
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮನೆಯಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಬರಮಾಡಿಕೊಂಡರು. ಕೆಲವು ದಿನಗಳ ಹಿಂದೆ ಇದೇ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಸಹ ಜಾಮೀನು ಪಡೆದು ಜೈಲಿನಿಂದ ಹೊರ ಬಂದಿದ್ದಾರೆ.
6/6
Share
ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ದೆಹಲಿಯ ನಿವಾಸದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬರಮಾಡಿಕೊಂಡರು. ದೆಹಲಿ ಪಂಜಾಬ್ ಎರಡು ರಾಜ್ಯದಲ್ಲಿ ಎಎಪಿ ಸರ್ಕಾರ ಆಡಳಿತವನ್ನು ನಡೆಸುತ್ತಿದೆ.


Click it and Unblock the Notifications