Home / Photos
ಅಮೆರಿಕದಲ್ಲಿ ರಾಹುಲ್ ಗಾಂಧಿ, ಡಿಕೆ ಶಿವಕುಮಾರ್ ಭೇಟಿ
By Gururaj S
ಅಮೆರಿಕ ಪ್ರವಾಸದಲ್ಲಿರುವ ಕರ್ನಾಟಕದ ಉಪ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭೇಟಿಯಾದರು.
1/6
Share
ಕರ್ನಾಟಕದ ಉಪ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅಮೆರಿಕ ಪ್ರವಾಸದಲ್ಲಿದ್ದಾರೆ. ಅಲ್ಲಿ ಅವರು ಲೋಕಸಭೆ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಭೇಟಿ ಮಾಡಿದರು. ಈ ಭೇಟಿ ಕರ್ನಾಟಕದ ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.
2/6
Share
ಡಿ. ಕೆ. ಶಿವಕುಮಾರ್ ಸಾಮಾಜಿಕ ಜಾಲತಾಣದಲ್ಲಿ ನಾನು ಹಾಗೂ ನನ್ನ ಧರ್ಮಪತ್ನಿ ಶ್ರೀಮತಿ ಉಷಾ ಅವರು ಇಂದು ಅಮೆರಿಕದ ವಾಷಿಂಗ್ಟನ್ನಲ್ಲಿ ನಮ್ಮ ಹೆಮ್ಮೆಯ ನಾಯಕರು ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ಶ್ರೀ ರಾಹುಲ್ ಗಾಂಧಿ ಅವರನ್ನು ಭೇಟಿಯಾದೆವು ಎಂದು ಪೋಸ್ಟ್ ಹಾಕಿದ್ದಾರೆ.
3/6
Share
ರಾಹುಲ್ ಗಾಂಧಿ ಆಪ್ತ ನಾಯಕರಲ್ಲಿ ಒಬ್ಬರು ಡಿ. ಕೆ. ಶಿವಕುಮಾರ್ ಒಂದು ವಾರದ ಅಮೆರಿಕ ಪ್ರವಾಸಕ್ಕೆ ಅವರು ಕುಟುಂಬದ ಜೊತೆ ತೆರಳಿದ್ದಾರೆ. ಇದೇ ಸಮಯದಲ್ಲಿ ವಾಷಿಂಗ್ಟನ್ ಪ್ರವಾಸದಲ್ಲಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯನ್ನು ಡಿ. ಕೆ. ಶಿವಕುಮಾರ್ ಭೇಟಿ ಮಾಡಿದರು.
4/6
Share
ಡಿ. ಕೆ. ಶಿವಕುಮಾರ್ ರಾಹುಲ್ ಗಾಂಧಿ, ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಅವರ ಜೊತೆ ಇರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಡಿ. ಕೆ. ಶಿವಕುಮಾರ್ ಸೆಪ್ಟೆಂಬರ್ 14ರಂದು ರಾಜ್ಯಕ್ಕೆ ವಾಪಸ್ ಆಗಲಿದ್ದಾರೆ.
5/6
Share
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ 3 ದಿನಗಳ ಕಾಲ ಅಮೆರಿಕ ಪ್ರವಾಸ ಕೈಗೊಂಡಿದ್ದು, ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಉದ್ಯಮಿಗಳು, ಪತ್ರಕರ್ತರ ಜೊತೆ ಅವರು ಸಂವಾದವನ್ನು ನಡೆಸಿದ್ದಾರೆ. ವಾಷಿಂಗ್ಟನ್ನಲ್ಲಿ ಇರುವ ವೇಳೆ ಡಿ. ಕೆ. ಶಿವಕುಮಾರ್ ರಾಹುಲ್ ಗಾಂಧಿ ಭೇಟಿಯಾಗಿದ್ದಾರೆ.
6/6
Share
ಲೋಕಸಭೆ ಚುನಾವಣೆ 2024 ಮುಗಿದು ರಾಹುಲ್ ಗಾಂಧಿ ಲೋಕಸಭೆ ಕಾಂಗ್ರೆಸ್ ನಾಯಕರಾದ ಬಳಿಕ ಮೊದಲ ಬಾರಿಗೆ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ಭಾರತೀಯ ಸಾಗರೋತ್ತರ ಕಾಂಗ್ರೆಸ್ ಆಹ್ವಾನದಂತೆ ರಾಹುಲ್ ಗಾಂಧಿ ಅಮೆರಿಕ ಪ್ರವಾಸದಲ್ಲಿದ್ದಾರೆ.


Click it and Unblock the Notifications