Home / Photos
ಶುಕ್ರವಾರ ಬೆಳ್ಳಂಬೆಳಗ್ಗೆ ಕೆಆರ್ಎಸ್ಗೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ
By Gururaj S
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕೆಆರ್ಎಸ್ನಲ್ಲಿ ಡಿಸ್ನಿಲ್ಯಾಂಡ್ ಮಾದರಿ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಚಿಂತನೆ ನಡೆಸಿದೆ. ಡಿ. ಕೆ. ಶಿವಕುಮಾರ್ ಈ ಕುರಿತು ಪರಿಶೀಲಿಸಿದರು.
1/6
Share
ಕರ್ನಾಟಕದ ಉಪ ಮುಖ್ಯಮಂತ್ರಿ, ಜಲಸಂಪನ್ಮೂಲ ಖಾತೆ ಸಚಿವ ಡಿ. ಕೆ. ಶಿವಕುಮಾರ್ ಶುಕ್ರವಾರ ಬೆಳ್ಳಂಬೆಳಗ್ಗೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಕೆಆರ್ಎಸ್ ಜಲಾಶಯಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
2/6
Share
ಕೃಷ್ಣರಾಜ ಸಾಗರ ಬೃಂದಾವನ ಗಾರ್ಡನ್ ಅನ್ನು ಡಿಸ್ನಿಲ್ಯಾಂಡ್ ಮಾದರಿಯ ಅಮ್ಯೂಸ್ಮೆಂಟ್ ಮಾದರಿಯಲ್ಲಿ ಅಭಿವೃದ್ಧಿಗೊಳಿಸಲಾಗುತ್ತಿದೆ. ಡಿ. ಕೆ. ಶಿವಕುಮಾರ್ ಈ ಕುರಿತು ಶುಕ್ರವಾರ ಅಧಿಕಾರಿಗಳ ಜೊತೆ ಚರ್ಚಿಸಿದರು.
3/6
Share
ಶುಕ್ರವಾರ ಬೆಳಗ್ಗೆ ಕೆಆರ್ಎಸ್ ಜಲಾಶಯಕ್ಕೆ ಭೇಟಿ ನೀಡಿದ ಜಲಸಂಪನ್ಮೂಲ ಖಾತೆ ಸಚಿವ ಡಿ. ಕೆ. ಶಿವಕುಮಾರ್ ಅವರಿಗೆ ಅಧಿಕಾರಿಗಳು ಡಿಸ್ನಿಲ್ಯಾಂಡ್ ಮಾದರಿ ಮಹತ್ವಾಕಾಂಕ್ಷೆಯ ಯೋಜನೆಯ ನೀಲನಕ್ಷೆಯನ್ನು ವಿವರಿಸಿದರು. ಡಿ. ಕೆ. ಶಿವಕುಮಾರ್ ಅಧಿಕಾರಿಗಳಿಗೆ ಅಗತ್ಯ ಸಲಹೆ, ಸೂಚನೆಗಳನ್ನು ನೀಡಿದರು.
4/6
Share
ಕೆಆರ್ಎಸ್ ಜಲಾಶಯ ಈಗಾಗಲೇ ಸಂಪೂರ್ಣ ಭರ್ತಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಬಾಗಿನ ಅರ್ಪಣೆ ಮಾಡಿದ್ದಾರೆ. ಡಿ. ಕೆ. ಶಿವಕುಮಾರ್ ಶುಕ್ರವಾರ ಡಿಸ್ನಿಲ್ಯಾಂಡ್ ಮಾದರಿ ಯೋಜನೆಯ ಕುರಿತು ಪರಿಶೀಲನೆ ನಡೆಸಿದರು.
5/6
Share
ಗುರುವಾರ ಡಿ. ಕೆ. ಶಿವಕುಮಾರ್ ಕೆಆರ್ಎಸ್ ಬೃಂದಾವನ ಗಾರ್ಡನ್ ಅನ್ನು ಡಿಸ್ನಿಲ್ಯಾಂಡ್ ಮಾದರಿಯ ಅಮ್ಯೂಸ್ಮೆಂಟ್ ಮಾದರಿಯಲ್ಲಿ ಅಭಿವೃದ್ಧಿಗೊಳಿಸುವ ಮಹತ್ವಾಕಾಂಕ್ಷೆಯ ಯೋಜನೆಗೆ ಸಂಬಂಧಿಸಿದಂತೆ ಅಧಿಕಾರಿಗಳ ಸಭೆ ನಡೆಸಿದ್ದರು. ಶುಕ್ರವಾರ ಕೆಆರ್ಎಸ್ಗೆ ಭೇಟಿ ನೀಡಿದ್ದಾರೆ.
6/6
Share
ಮೈಸೂರಿನಲ್ಲಿ ಶುಕ್ರವಾರ ಕಾಂಗ್ರೆಸ್ ಪಕ್ಷದ ಜನಾಂದೋಲನ ಸಮಾವೇಶವಿದೆ. ಇದರಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ತೆರಳುವ ಮುನ್ನ ಡಿ. ಕೆ. ಶಿವಕುಮಾರ್ ಕೆಆರ್ಎಸ್ ಜಲಾಶಯಕ್ಕೆ ಭೇಟಿ ನೀಡಿ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು.


Click it and Unblock the Notifications