Home / Photos
ಭಾರೀ ಮಳೆ ತುಂಗಾ ನದಿ ಪ್ರವಾಹದಲ್ಲಿ ಜಲಾವೃತವಾದ ಗ್ರಾಮಗಳು
By Gururaj S
ಮಲೆನಾಡಲ್ಲಿ ಭಾರೀ ಮಳೆಯಾಗುತ್ತಿದೆ. ತುಂಗಾ ನದಿ ಅಪಾಯವ ಮಟ್ಟವನ್ನು ಮೀರಿ ಹರಿಯುತ್ತಿದ್ದು, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.
1/6
Share
ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ತುಂಗಾ ನದಿ ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದೆ. ಶೃಂಗೇರಿಯಲ್ಲಿ ತುಂಗಾ ನದಿ ಪ್ರವಾಹ ಕ್ಯಾಮರಾ ಕಣ್ಣಲ್ಲಿ ಕಂಡಿದ್ದು, ಹೀಗೆ.
2/6
Share
ಶೃಂಗೇರಿಯಲ್ಲಿ ತುಂಗಾ ನದಿ ಪ್ರವಾಹದಿಂದ ಪಟ್ಟಣದಲ್ಲಿ ಹಲವಾರು ರಸ್ತೆಯಗಳು ಜಲಾವೃತವಾಗಿವೆ. ಗಾಂಧಿ ಮೈದಾನ, ಭಾರತಿ ತೀರ್ಥ ರಸ್ತೆಯಲ್ಲಿ ಪ್ರವಾಹದ ನೀರು ಎರಡು ದಿನದಿಂದ ನಿಂತಿದೆ.
3/6
Share
ಪಶ್ಚಿಮಘಟ್ಟದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಕಾರಣ ತುಂಗಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ. ಇದರಿಂದಾಗಿ ನದಿ ಅಪಾಯವ ಮಟ್ಟವನ್ನು ಮೀರಿ ಹರಿಯುತ್ತಿದ್ದು, ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಬಂದ್ ಆಗಿವೆ.
4/6
Share
ಮುಂಗಾರು ಮಳೆಯ ಅಬ್ಬರರಿಂದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ತುಂಗಾ ನದಿ ಅಪಾಯದ ಮಟ್ಟದಲ್ಲಿ ಹರಿಯಿತ್ತಿದೆ. ಜಿಲ್ಲೆಗೆ ಗುರುವಾರವೂ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಆದ್ದರಿಂದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
5/6
Share
ಮಲೆನಾಡಿನಲ್ಲಿ ಸುರಿಯುತ್ತಿರುವ ಮಳೆಗೆ ತುಂಗಾ ನದಿಗೆ ಸೇರುವ ಹಳ್ಳ-ಕೊಳ್ಳಗಳು ತುಂಬಿವೆ. ಹಲವು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಹಳ್ಳಗಳ ನೀರು ರಸ್ತೆಯ ಮೇಲೆ ಹರಿಯುತ್ತಿರುವ ಕಾರಣ ವಾಹನ ಸಂಚಾರ ಬಂದ್ ಆಗಿದೆ.
6/6
Share
ತುಂಗಾ ನದಿಗೆ ಅಪಾರ ಪ್ರಮಾಣದ ನೀರು ಹರಿದುಬರುತ್ತಿದೆ. ಶಿವಮೊಗ್ಗದ ಗಾಜನೂರಿನಲ್ಲಿರುವ ತುಂಗಾ ಜಲಾಶಯ ಭರ್ತಿಯಾಗಿದೆ. ಜಲಾಶಯದಿಂದ ಸುಮಾರು 71 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ.


Click it and Unblock the Notifications