Home / Photos
Narendra Modi: ವಯನಾಡಿಗೆ ನರೇಂದ್ರ ಮೋದಿ ಭೇಟಿ ದೃಶ್ಯಗಳು ಇಲ್ಲಿದೆ
By Sunitha B
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಯನಾಡ್ ಜಿಲ್ಲೆಯ ಭೂಕುಸಿತ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆಯನ್ನು ನಡೆಸಿದರು. ಜುಲೈ 30 ರಂದು ದೇವರನಾಡು ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ಇಲ್ಲಿಯವರೆಗೆ ಸುಮಾರು 230 ಜನರು ಬಲಿಯಾಗಿದ್ದಾರೆ.
1/7
Share
ಕಣ್ಣೂರು: ವಯನಾಡಿಗೆ ನರೇಂದ್ರ ಮೋದಿ ಭೇಟಿ ನೀಡಿದರು. ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಮತ್ತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ (ಆಗಸ್ಟ್ 10) ಕಣ್ಣೂರು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು.
2/7
Share
ವಯನಾಡ್: ಜುಲೈ 30 ರಂದು ದೇವರನಾಡು ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ಇಲ್ಲಿಯವರೆಗೆ ಸುಮಾರು 230 ಜನರು ಬಲಿಯಾಗಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಯನಾಡ್ ಜಿಲ್ಲೆಯ ಭೂಕುಸಿತ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆಯನ್ನು ನಡೆಸಿದರು.
3/7
Share
ವಯನಾಡ್: ವಿನಾಶಕಾರಿ ಭೂಕುಸಿತಕ್ಕೆ ತುತ್ತಾಗಿರುವ ಕೇರಳದ ವಯನಾಡಿನಲ್ಲಿ 11 ದಿನಗಳ ಬಳಿಕ ನಾಲ್ವರ ಮೃತದೇಹಗಳು ಪತ್ತೆಯಾಗಿವೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ವಯನಾಡ್ ಜಿಲ್ಲೆಯ ಭೂಕುಸಿತ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆಯನ್ನು ನಡೆಸಿದರು.
4/7
Share
ವಯನಾಡ್: ಸೇನೆ ಶೋಧ ಕಾರ್ಯ ಮುಗಿಸಿ ವಾಪಸ್ಸಾಗಿದೆ. ಆದರೆ ಅಗ್ನಿಶಾಮಕ ಮತ್ತು ರಕ್ಷಣಾ ಸೇವೆ, ಪೊಲೀಸರು ಮತ್ತು ಸ್ವಯಂಸೇವಕರು ಭೂ ಕುಸಿತ ಪೀಡಿತ ಪ್ರದೇಶದಲ್ಲಿ ಶೋಧವನ್ನು ಮುಂದುವರೆಸಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವೈಮಾನಿಕ ಸಮೀಕ್ಷೆಯನ್ನು ನಡೆಸುತ್ತಿರುವಾಗ ಭೂಕುಸಿತ ಪೀಡಿತ ಪ್ರದೇಶಗಳ ನೋಟ (ಆಗಸ್ಟ್ 10)
5/7
Share
ವಯನಾಡ್: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಚಿವ ಸುರೇಶ್ ಗೋಪಿ, ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಮತ್ತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ವಯನಾಡ್ ಜಿಲ್ಲೆಯಲ್ಲಿ ಇಂದು (ಆಗಸ್ಟ್ 10) ಭೂಕುಸಿತ ಪೀಡಿತ ಪ್ರದೇಶಗಳ ಪರಿಶೀಲನೆ ನಡೆಸಿದರು.
6/7
Share
ವಯನಾಡ್: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಯನಾಡ್ ಜಿಲ್ಲೆಯಲ್ಲಿ ಭೂಕುಸಿತ ಪೀಡಿತ ಪ್ರದೇಶಗಳನ್ನು ಇಂದು (ಆಗಸ್ಟ್ 10) ಪರಿಶೀಲಿಸಿದರು. ಕೇರಳದ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಿಂದ ಧ್ವಂಸಗೊಂಡ ಮನೆಗಳನ್ನು ತೊರೆದು ಸಂತ್ರಸ್ತರು ಬೇರೆಡೆ ಆಶ್ರಯ ಪಡೆದಿದ್ದಾರೆ.
7/7
Share
ವಯನಾಡ್: ವಯನಾಡ್ನಲ್ಲಿ ಮಣ್ಣಿನಲ್ಲಿ ಮನೆಗಳೊಂದಿಗೆ ಹೂತುಹೋಗಿರುವ ಹಣ, ಚಿನ್ನಾಭರಣ ಹಾಗೂ ಬೆಲೆ ಬಾಳುವ ವಸ್ತುಗಳ ಬಗ್ಗೆ ನಿರಾಶ್ರಿತರು ಚಿಂತಿತರಾಗಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಯನಾಡ್ ಜಿಲ್ಲೆಯಲ್ಲಿ ಭೂಕುಸಿತ ಪೀಡಿತ ಪ್ರದೇಶಗಳ ಪರಿಶೀಲನೆಯ ಸಂದರ್ಭದಲ್ಲಿ ಸುರೇಶ್ ಗೋಪಿ ಮತ್ತು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರೊಂದಿಗೆ ಇದ್ದರು.


Click it and Unblock the Notifications