Home / Photos
ಸಿದ್ದರಾಮಯ್ಯ ರಾಜೀನಾಮೆಗಾಗಿ ಬಿಜೆಪಿ ನಾಯಕರ ಬೃಹತ್ ಹೋರಾಟ
By Gururaj S
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ರಾಜೀನಾಮೆಗೆ ಆಗ್ರಹಿಸಿ ಕರ್ನಾಟಕ ಬಿಜೆಪಿ ನಾಯಕರು ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ನೇತೃತ್ವದಲ್ಲಿ ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿದರು.
1/6
Share
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ಬಿಜೆಪಿ ನಾಯಕರು ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದರು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ.
2/6
Share
ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಸೋಮವಾರ ನಡೆದ ಪ್ರತಿಭಟನೆಯಲ್ಲಿ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ, ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಶಾಸಕರು, ವಿಧಾನ ಪರಿಷತ್ ಸದಸ್ಯರು ಪಾಲ್ಗೊಂಡಿದ್ದರು.
3/6
Share
ಬಡವರ ನಿವೇಶನಗಳನ್ನು ಅಕ್ರಮವಾಗಿ ಕಬಳಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಆಗ್ರಹಿಸಿದರು. ಮಾಜಿ ಸಚಿವ ಜನಾರ್ದನ ರೆಡ್ಡಿ ಸೇರಿದಂತೆ ವಿವಿಧ ನಾಯಕರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
4/6
Share
ಮುಡಾ ಹಗರಣದಲ್ಲಿ ಮುಖ್ಯಮಂತ್ರಿಗಳ ಸ್ವಜನ ಪಕ್ಷಪಾತ ಹಾಗೂ ಅಕ್ರಮಗಳಿಗೆ ದೊರೆತಿರುವ ಸಾಕ್ಷಿ ಪುರಾವೆಗಳ ಆಧಾರದ ಮೇಲೆ ಗೌರವಾನ್ವಿತ ರಾಜ್ಯಪಾಲರು ಮುಖ್ಯಮಂತ್ರಿಗಳ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿಸಿದರೂ ರಾಜ್ಯಪಾಲರ ವಿರುದ್ಧವೇ ಸಮರಕ್ಕೆ ಮುಂದಾಗಿ ಭಂಡತನ ಪ್ರದರ್ಶನ ಮಾಡುತ್ತಿರುವ ಸಿಎಂ ಹಾಗೂ ಕಾಂಗ್ರೆಸ್ ಸರ್ಕಾರದ ನಡೆಯನ್ನು ಖಂಡಿಸಲಾಯಿತು.
5/6
Share
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಪ್ರತಿಪಕ್ಷ ಬಿಜೆಪಿ ನಡೆಸಿದ ಪ್ರತಿಭಟನೆಯಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ ಮಾತನಾಡಿದರು. ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿ, ತನಿಖೆಗೆ ಸಹಕಾರ ನೀಡಬೇಕು ಎಂದು ಅಶೋಕ ಒತ್ತಾಯಿಸಿದರು.
6/6
Share
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ಬಿಜೆಪಿ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿತು. ಬಿಜೆಪಿ ಮತ್ತು ಜೆಡಿಎಸ್ನ ಶಾಸಕರು, ವಿಧಾನ ಪರಿಷತ್ ಸದಸ್ಯರು ಪಾಲ್ಗೊಂಡಿದ್ದರು.


Click it and Unblock the Notifications