Home / Photos
7th pay commission; ಸರ್ಕಾರಿ ನೌಕರರ 7ನೇ ವೇತನ ಆಯೋಗದ ಮಾಹಿತಿ
By Gururaj S
ಕರ್ನಾಟಕ ಸರ್ಕಾರ ಸರ್ಕಾರಿ ನೌಕರರ ಬೇಡಿಕೆಯಂತೆ ಕೆ. ಸುಧಾಕರ್ ನೇತೃತ್ವದ 7ನೇ ವೇತನ ಆಯೋಗ ರಚನೆ ಮಾಡಿದೆ. ಆಯೋಗದ ಮಾಹಿತಿ ಇಲ್ಲಿದೆ.
1/6
Share
ಕರ್ನಾಟಕ ಸರ್ಕಾರ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆ ಮುಂತಾದ ಅಂಶಗಳನ್ನು ಪರಿಷ್ಕರಣೆ ಮಾಡಲು ಕೆ. ಸುಧಾಕರ್ ನೇತೃತ್ವದ 7ನೇ ರಾಜ್ಯ ವೇತನ ಆಯೋಗವನ್ನು ರಚನೆ ಮಾಡಿದೆ. ತ್ರಿ ಸದಸ್ಯರ ಆಯೋಗದಲ್ಲಿ ಸದಸ್ಯರಾಗಿ ರಾಮಮೂರ್ತಿ, ಶ್ರೀಕಾಂತ್ ವನವಳ್ಳಿ, ಸದಸ್ಯ ಕಾರ್ಯದರ್ಶಿಯಾಗಿ ಹೆಬ್ಸಿಬರಾಣಿ ಕೊರ್ಲಾಪಾಟಿ ಇದ್ದಾರೆ. ರಾಜ್ಯ ಸರ್ಕಾರಿ ನೌಕರರ ವಿವಿಧ ಸಂಘಗಳ ಮೂಲಕ ಪ್ರಸ್ತಾವನೆ, ಪ್ರಶ್ನಾವಳಿಗಳ ಮೂಲಕ ವೇತನ, ಭತ್ಯೆಗಳ ಮಾಹಿತಿಯನ್ನು ಆಯೋಗ ಸಂಗ್ರಹ ಮಾಡಿ ವರದಿಯನ್ನು ತಯಾರು ಮಾಡುತ್ತಿದೆ.
2/6
Share
ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಇದ್ದಾಗ, ಬಸವರಾಜ ಬೊಮ್ಮಾಯಿ ಹಣಕಾಸು ಸಚಿವರು, ಮುಖ್ಯಮಂತ್ರಿಯಾಗಿದ್ದಾಗ ಸರ್ಕಾರಿ ನೌಕರರ ಬೇಡಿಕೆಯಂತೆ 7ನೇ ರಾಜ್ಯ ವೇತನ ಆಯೋಗ ರಚನೆ ಮಾಡಿ 19 ನವೆಂಬರ್ 2022ರಲ್ಲಿ ಕರ್ನಾಟಕ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿಯಾದ ಕೆ. ಸುಧಾಕರ್ ರಾವ್ ನೇತೃತ್ವದಲ್ಲಿ 7ನೇ ರಾಜ್ಯ ವೇತನ ಆಯೋಗವನ್ನು ರಚನೆ ಮಾಡಿದೆ.
3/6
Share
ಕರ್ನಾಟಕ ಸರ್ಕಾರ 15/3/2023ರಲ್ಲಿ ಆದೇಶವೊಂದನ್ನು ಹೊರಡಿಸಿ ಕರ್ನಾಟಕ ರಾಜ್ಯ 7ನೇ ವೇತನ ಆಯೋಗವು ತನ್ನ ಕಾರ್ಯಕಲಾಪಗಳನ್ನು ಪೂರ್ಣಗೊಳಿಸಿ ಸರ್ಕಾರಕ್ಕೆ ವರದಿಯನ್ನು ಸಲ್ಲಿಕೆ ಮಾಡಲು ಅನುಕೂಲವಾಗುವಂತೆ 7ನೇ ರಾಜ್ಯ ವೇತನ ಆಯೋಗದ ಅವಧಿಯನ್ನು 19/5/2023ರಿಂದ 6 ತಿಂಗಳ ಕಾಲ ವಿಸ್ತರಣೆ ಮಾಡಿತ್ತು. ಅಂದರೆ ನವೆಂಬರ್ 2023ಕ್ಕೆ ಅವಧಿ ಪೂರ್ಣಗೊಳ್ಳಬೇಕಿತ್ತು.
4/6
Share
ಕರ್ನಾಟಕ ಸರ್ಕಾರ 16/11/2023ರಂದು ಮತ್ತೊಂದು ಆದೇಶವನ್ನು ಹೊರಡಸಿತು. ಅದಕ್ಕೂ ಮುನ್ನ 7ನೇ ವೇತನ ಆಯೋಗದ ಜೊತೆ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿದ್ದರು. ವೇತನ ಆಯೋಗದ ವರದಿ ಸ್ವೀಕಾರ ಮಾಡದ ಸರ್ಕಾರ ಆಯೋಗದ ಅವಧಿಯನ್ನು 15/3/2023ರ ತನಕ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.
5/6
Share
ಫೆಬ್ರವರಿ 16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಿದರು. ಆದರೆ ಅದಕ್ಕೂ ಮೊದಲು ಫೆಬ್ರವರಿ 12ರಂದು ಕೆ. ಸುಧಾಕರ್ ನೇತೃತ್ವದ 7ನೇ ವೇತನ ಆಯೋಗದ ಜೊತೆ ಮಹತ್ವದ ಸಭೆಯನ್ನು ನಡೆಸಿದರು. ಆದರೆ ಬಜೆಟ್ನಲ್ಲಿ ವೇತನ ಆಯೋಗದ ವರದಿ ಅನುಷ್ಠಾನಕ್ಕಾಗಿ ಯಾವುದೇ ಅನುದಾನವನ್ನು ಮೀಸಲಿಟ್ಟಿಲ್ಲ.
6/6
Share
2023-24ನೇ ಸಾಲಿನ ಬಜೆಟ್ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆ. ಸುಧಾಕರ್ ನೇತೃತ್ವದಲ್ಲಿ ರಾಜ್ಯ 7ನೇ ವೇತನ ಆಯೋಗದ ಕುರಿತು ಪ್ರಸ್ತಾಪಿಸಿದರು. ಭಾಷಣದಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ 7ನೇ ವೇತನ ಆಯೋಗವನ್ನು ರಚಿಸಲಾಗಿದ್ದು, ಆಯೋಗದ ವರದಿ ಸ್ವೀಕರಿಸಿದ ನಂತರ ಪರಿಶೀಲಿಸಿ ಕ್ರಮವಹಿಸಲಾಗುತ್ತದೆ ಎಂದು ಹೇಳಿದರು.


Click it and Unblock the Notifications