Home / Photos
ಸಚಿವ ಬೈರತಿ ಸುರೇಶ್ ಪುತ್ರ, ಶಾಸಕ ವಿಶ್ವನಾಥ್ ಪುತ್ರಿ ವಿವಾಹ, ನಿಶ್ಚಿತಾರ್ಥದಲ್ಲಿ ಗಣ್ಯರ ದಂಡು
By Gururaj S
ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಪುತ್ರ ಮತ್ತು ಶಾಸಕ ಎಸ್. ಆರ್. ವಿಶ್ವನಾಥ್ ಪುತ್ರಿ ವಿವಾಹವಾಗುತ್ತಿದ್ದಾರೆ. ನಿಶ್ಚಿತಾರ್ಥ ಬೆಂಗಳೂರಿನಲ್ಲಿ ನಡೆದಿದೆ.
1/6
Share
ಕರ್ನಾಟಕದ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಪುತ್ರ ಸಂಜಯ್ ಮತ್ತು ಯಲಹಂಕ ಕ್ಷೇತ್ರದ ಬಿಜೆಪಿ ಶಾಸಕ ಎಸ್. ಆರ್. ವಿಶ್ವನಾಥ್ ಪುತ್ರಿ ಅಪೂರ್ವ ವಿವಾಹವಾಗುತ್ತಿದ್ದಾರೆ. ನವ ಜೋಡಿಯ ನಿಶ್ಚಿತಾರ್ಥ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಮಂಗಳವಾರ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಹಲವಾರು ಗಣ್ಯರು ಪಾಲ್ಗೊಂಡಿದ್ದರು.
2/6
Share
ಸಂಜಯ್ ಮತ್ತು ಅಪೂರ್ವ ಅವರರದ್ದು ಲವ್ ಕಮ್ ಅರೇಂಜ್ ಮ್ಯಾರೇಜ್. ಇಬ್ಬರೂ ನಾಯಕರ ರಾಜಕೀಯ ಪಕ್ಷಗಳು ಬೇರೆ ಬೇರೆ. ಆದರೆ ಎರಡೂ ಕುಟುಂಬದವರು ಒಪ್ಪಿ ವಿವಾಹ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನಿಶ್ಚಿತಾರ್ಥದಲ್ಲಿ ಪಾಲ್ಗೊಂಡು ಶುಭ ಹಾರೈಸಿದರು.
3/6
Share
ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಪತ್ನಿ ಉಷಾ ಜೊತೆಗೆ ಸಚಿವ ಬೈರತಿ ಸುರೇಶ್ ಪುತ್ರ ಸಂಜಯ್ ಮತ್ತು ಯಲಹಂಕ ಕ್ಷೇತ್ರದ ಬಿಜೆಪಿ ಶಾಸಕ ಎಸ್. ಆರ್. ವಿಶ್ವನಾಥ್ ಪುತ್ರಿ ಅಪೂರ್ವ ನಿಶ್ಚಿತಾರ್ಥದಲ್ಲಿ ಪಾಲ್ಗೊಂಡು ಶುಭ ಕೋರಿದರು.
4/6
Share
ಸಚಿವ ಬೈರತಿ ಸುರೇಶ್ ಮತ್ತು ಯಲಹಂಕ ಬಿಜೆಪಿ ಶಾಸಕ ಎಸ್. ಆರ್. ವಿಶ್ವನಾಥ್ ಕುಟುಂಬದವರು ನಿಶ್ಚಿತಾರ್ಥದಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಫೋಟೋ ತೆಗೆಸಿಕೊಂಡರು. ಸಚಿವ ಬೈರತಿ ಸುರೇಶ್ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಮಾಪ್ತರಲ್ಲಿ ಒಬ್ಬರು.
5/6
Share
ಸಚಿವರಾದ ರಾಮಲಿಂಗಾ ರೆಡ್ಡಿ, ಡಾ. ಎಂ. ಸಿ. ಸುಧಾಕರ್ ಸೇರಿದಂತೆ ಹಲವು ಕಾಂಗ್ರೆಸ್ ಪಕ್ಷದ ನಾಯಕರು ಸಚಿವ ಬೈರತಿ ಸುರೇಶ್ ಪುತ್ರ ಸಂಜಯ್ ಮತ್ತು ಯಲಹಂಕ ಕ್ಷೇತ್ರದ ಬಿಜೆಪಿ ಶಾಸಕ ಎಸ್. ಆರ್. ವಿಶ್ವನಾಥ್ ಪುತ್ರಿ ಅಪೂರ್ವ ನಿಶ್ಚಿತಾರ್ಥದಲ್ಲಿ ಪಾಲ್ಗೊಂಡಿದ್ದರು.
6/6
Share
ಗೃಹ ಸಚಿವ ಡಾ. ಪರಮೇಶ್ವರ, ನೆಲಮಂಗಲದ ಮಾಜಿ ಶಾಸಕ ಸುರೇಶ್ ಗೌಡ ಸೇರಿದಂತೆ ಬಿಜೆಪಿ, ಕಾಂಗ್ರೆಸ್ನ ಹಲವು ನಾಯಕರು ಸಚಿವ ಬೈರತಿ ಸುರೇಶ್ ಪುತ್ರ ಸಂಜಯ್ ಮತ್ತು ಯಲಹಂಕ ಕ್ಷೇತ್ರದ ಬಿಜೆಪಿ ಶಾಸಕ ಎಸ್. ಆರ್. ವಿಶ್ವನಾಥ್ ಪುತ್ರಿ ಅಪೂರ್ವ ನಿಶ್ಚಿತಾರ್ಥದಲ್ಲಿ ಪಾಲ್ಗೊಂಡು ಶುಭ ಕೋರಿದರು.


Click it and Unblock the Notifications