ಕೂಡಲಸಂಗಮ: ಬಸವ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ರಾಹುಲ್ ಗಾಂಧಿ
ಕೂಡಲ ಸಂಗಮದಲ್ಲಿ ರಾಹುಲ್ ಗಾಂಧಿಗೆ ಅದ್ಧೂರಿ ಸ್ವಾಗತ ಕೋರಲಾಯಿತು. ಶಾಲು ಹೊದಿಸಿ, ಬಸವಣ್ಣ ಅವರ ಮೂರ್ತಿ ನೀಡುವ ಮೂಲಕ ಗೌರವಿಸಲಾಯಿತು.
ಕೂಡಲಸಂಗಮದಲ್ಲಿ ಭಾನುವಾರ(ಏಪ್ರಿಲ್ 23)ದಂದು ನಡೆದ ಬಸವ ಜಯಂತಿ ಆಚರಣೆಯಲ್ಲಿ ರಾಹುಲ್ ಗಾಂಧಿ ಮಾತನಾಡಿ, 'ಬಸವಣ್ಣ ಸಮಾಜಕ್ಕೆ ಬೆಳಕು' ಹೇಳಿದರು.
ಇಂದು ಭಾನುವಾರ (ಏ.23) ಬಸವ ಭವನದಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಧ್ಯಾಹ್ನ 12ಕ್ಕೆ ಆಗಮಿಸಿ ಐಕ್ಯ ಮಂಟಪದ ದರ್ಶನ ಪಡೆದರು.
ದೆಹಲಿಯಿಂದ ಹುಬ್ಬಳಿಗೆ ಆಗಮಿಸಿದ ರಾಹುಲ್ ಗಾಂಧಿ ಅರ್ಧಗಂಟೆಗೂ ಹೆಚ್ಚು ಕಾಲ ಮಾಜಿ ಸಿಎಂ ಜಗದೀಶ ಶೆಟ್ಟರ್ ಜೊತೆ ಚರ್ಚೆ ನಡೆಸಿದರು. ಬಳಿಕ ಕೂಡಲ ಸಂಗಮಕ್ಕೆ ತೆರಳಿ ಬಸವ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಬಸವಣ್ಣನವರ ಐಕ್ಯ ಸ್ಥಳ ಜಿಲ್ಲೆಯ ಕೂಡಲಸಂಗಮದಲ್ಲಿ ಭಾನುವಾರ(ಏಪ್ರಿಲ್ 23)ದಂದು ನಡೆದ ಬಸವ ಜಯಂತಿ ಆಚರಣೆಯಲ್ಲಿ ರಾಹುಲ್ ಗಾಂಧಿ ಭಾಗವಹಿಸಿದರು.
ರಾಜ್ಯ ವಿಧಾನಸಭಾ ಚುನಾವಣೆ ಬೆನ್ನಲ್ಲೆ ಕರ್ನಾಟಕಕ್ಕೆ ಭೇಟಿ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಕೂಡಲ ಸಂಗಮದಲ್ಲಿ ಬಸವ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.


Click it and Unblock the Notifications