Home / Photos
Lok Sabha Election 2024: ಮೈದುನನ ಪರ ಪ್ರಚಾರಕ್ಕೆ ಇಳಿದ ಡಿಕೆ ಶಿವಕುಮಾರ್ ಪತ್ನಿ ಉಷಾ
By Mamatha M
ಲೋಕಸಬಾ ಚುನಾವಣೆಗಾಗಿ ರಾಜ್ಯ ಸಿದ್ಧವಾಗುತ್ತಿದ್ದು, ಡಿಕೆ ಸುರೇಶ್ ಅವರ ಪರ ಡಿಕೆ ಶಿವಕುಮಾರ್ ಅವರ ಪತ್ನಿ ಉಷಾ ಚುನಾವಣಾ ಪ್ರಚಾರ ನಡೆಸಿದ್ದಾರೆ.
1/7
Photo Credit: facebook@DK Shivakumar
Share
ಲೋಕಸಭಾ ಚುನಾವಣೆಗೆ ಕರುನಾಡು ಸಿದ್ಧವಾಗುತ್ತಿದೆ. ರಾಜ್ಯದ ಏಕೈಕ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಮತ್ತೆ ಕಣಕ್ಕಿಳಿದ್ದಿದ್ದಾರೆ. ಅವರನ್ನು ಸೋಲಿಸಲು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಸಕತ್ ಸಿದ್ಧತೆ ಮಾಡಿಕೊಂಡಿವೆ. ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರ ಅಳಿಯ ಡಾ ಸಿ ಎನ್ ಮಂಜುನಾಥ್ ಸವಾಲು ಹಾಕಿದ್ದಾರೆ.
2/7
Photo Credit: facebook@DK Shivakumar
Share
ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಾಂಗ್ರೆಸ್ ಹಾಲಿ ಸಂಸದ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಸಹೋದರ ಡಿ ಕೆ ಸುರೇಶ್ ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಸಾವಿರಾರು ಕಾರ್ಯಕರ್ತರು ಸಂಸದ ಡಿಕೆ ಸುರೇಶ್ ಅವರ ಹೆಸರು ಕೂಗುತ್ತಾ ಜೈಕಾರ ಹಾಕಿದ್ದಾರೆ.
3/7
Photo Credit: facebook@DK Shivakumar
Share
ಈಗ ತಮ್ಮ ಮೈದುನನ ಗೆಲುವಿಗಾಗಿ ಡಿಕೆ ಶಿವಕುಮಾರ್ ಅವರ ಪತ್ನಿ ಉಷಾ ಅವರು ಚುನಾವಣಾ ಪ್ರಚಾರಕ್ಕೆ ಇಳಿದಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ರಾಜರಾಜೇಶ್ವರಿ ನಗರದಲ್ಲಿ ಉಷಾ ಅವರು ಮನೆ ಮನೆಗೆ ಭೇಟಿ ನೀಡಿ ಮತ ಯಾಚನೆ ಮಾಡಿದ್ದಾರೆ.
4/7
Photo Credit: facebook@DK Shivakumar
Share
ಈ ಬಗ್ಗೆ ಡಿಕೆ ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. "ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ರಾಜರಾಜೇಶ್ವರಿ ನಗರದಲ್ಲಿ ಇಂದು ನನ್ನ ಧರ್ಮಪತ್ನಿ ಶ್ರೀಮತಿ ಉಷಾ ಅವರು ಮನೆ ಮನೆಗೆ ಭೇಟಿ ನೀಡಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರ ಪರ ಮತ ಯಾಚಿಸಿದರು. ಕ್ಷೇತ್ರದ ಜನತೆ ಈ ಬಾರಿ ನಮ್ಮ ಅಭ್ಯರ್ಥಿಯನ್ನು ಹಿಂದಿಗಿಂತ ಹೆಚ್ಚಿನ ಮತಗಳ ಅಂತರದಲ್ಲಿ ಗೆಲ್ಲಿಸಲಿದ್ದಾರೆ ಎನ್ನುವ ವಿಶ್ವಾಸ ನನಗಿದೆ" ಎಂದಿದ್ದಾರೆ.
5/7
Photo Credit: facebook@DK Shivakumar
Share
ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದ ಡಿಕೆ ಶಿವಕುಮಾರ್ ಅವರ ಪತ್ನಿ ಉಷಾ ಅವರ ಜೊತೆಗೆ ಕಾಂಗ್ರೆಸ್ ನಾಯಕಿ ಕುಸುಮಾ ಹನುಮಂತರಾಯಪ್ಪ ಕೂಡ ಸಾಥ್ ನೀಡಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ಹೀಗಾಗಿ ಪ್ರಚಾರ ನಡೆಸಲಾಗುತ್ತಿದೆ.
6/7
Photo Credit: facebook@DK Shivakumar
Share
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಸ್ಥಳೀಯ ಮಹಿಳಾ ನಾಯಕಿಯರ ಜೊತೆಗೆ ಸೇರಿಕೊಂಡು ಭರ್ಜರಿ ಪ್ರಚಾರ ನಡೆಸಿದ್ದಾರೆ.ಮನೆ ಮನೆಗೆ ಹೋಗಿ ಅರಿಷಿನ ಕುಂಕುಮ ತೆಗೆದುಕೊಂಡು ಮತಯಾಚನೆ ಮಾಡಿದ್ದಾರೆ. ಮೈದುನನ ಗೆಲುವಿಗಾಗಿ ಶ್ರಮಿಸುತ್ತಿದ್ದಾರೆ.
7/7
Photo Credit: facebook@DK Shivakumar
Share
ಇನ್ನು ಮೂರು ವಾರಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಾಂಗ್ರೆಸ್ ಹಾಲಿ ಸಂಸದ ಡಿ ಕೆ ಸುರೇಶ್ ಕಣಕ್ಕೆ ಇಳಿದಿದ್ದಾರೆ. ಇವರ ವಿರುದ್ಧ ಬಿಜೆಪಿಯಿಂದ ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರ ಅಳಿಯ ಡಾ ಸಿ.ಎನ್ ಮಂಜುನಾಥ್ ಸ್ಪರ್ಧಿಸಿದ್ದಾರೆ.


Click it and Unblock the Notifications