Home / Photos
ಶರಾವತಿ ವಿದ್ಯುತ್ ಕೇಂದ್ರಕ್ಕೆ ಸಚಿವ ಕೆ. ಜೆ. ಜಾರ್ಜ್ ಭೇಟಿ
By Gururaj S
ಕರ್ನಾಟಕದ ಇಂಧನ ಸಚಿವ ಕೆ. ಜೆ. ಜಾರ್ಜ್ ಶಿವಮೊಗ್ಗ ಪ್ರವಾಸ ಕೈಗೊಂಡಿದ್ದರು. ಅವರು ಸಾಗರದಲ್ಲಿರುವ ಶರಾವತಿ ವಿದ್ಯುತ್ ಕೇಂದ್ರಕ್ಕೆ ಭೇಟಿ ನೀಡಿ ಸಂಸ್ಥೆಯ ಕಾರ್ಯಚಟುವಟಿಕೆಯನ್ನು ಪರಿಶೀಲಿಸಿದರು.
1/6
Share
ಕರ್ನಾಟಕದ ಇಂಧನ ಸಚಿವ ಕೆ. ಜೆ. ಜಾರ್ಜ್ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದರು. ಅವರು ಕರ್ನಾಟಕದಲ್ಲಿ ಜಲವಿದ್ಯುತ್ ಉತ್ಪಾದನೆ ಪ್ರಮುಖ ಕೇಂದ್ರವಾದ ಸಾಗರ ತಾಲೂಕಿನಲ್ಲಿರುವ ಶರಾವತಿ ವಿದ್ಯುತ್ ಕೇಂದ್ರಕ್ಕೆ ಭೇಟಿ ನೀಡಿ ಸಂಸ್ಥೆಯ ಕಾರ್ಯಚಟುವಟಿಕೆಯನ್ನು ಪರಿಶೀಲಿಸಿದರು. ಅಧಿಕಾರಿಗಳ ಜೊತೆ ಸಭೆಯನ್ನು ನಡೆಸಿದರು.
2/6
Share
ಇಂಧನ ಸಚಿವ ಕೆ. ಜೆ. ಜಾರ್ಜ್ ಮಾತನಾಡಿ ರಾಜ್ಯದಲ್ಲಿ ಕೆಪಿಸಿಎಲ್ ವತಿಯಿಂದ ಪಂಪ್ ಸ್ಟೋರೇಜ್ ಪ್ಲಾಂಟ್ ನಿರ್ಮಾಣಕ್ಕೆ ಸುಮಾರು 8500 ಕೋಟಿ ರೂ. ಯೋಜನೆ ರೂಪಿಸಲಾಗಿದ್ದು, ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಹೇಳಿದರು.
3/6
Share
ಸಾಗರ ತಾಲೂಕಿನಲ್ಲಿರುವ ಶರಾವತಿ ವಿದ್ಯುತ್ ಕೇಂದ್ರಕ್ಕೆ ಭೇಟಿ ನೀಡಿದ ಸಚಿವ ಕೆ. ಜೆ. ಜಾರ್ಜ್ ಸಂಸ್ಥೆಯ ದಕ್ಷತೆಯನ್ನು ಹೆಚ್ಚಿಸುವ ಮಾರ್ಗಗಳ ಬಗ್ಗೆ ಚರ್ಚೆ ನಡೆಸಿದರು. ಸಭೆಯಲ್ಲಿ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರಾದ ಪಂಕಜ್ ಕುಮಾರ್ ಪಾಂಡೆ ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
4/6
Share
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿರುವ ಶರಾವತಿ ವಿದ್ಯುತ್ ಕೇಂದ್ರದಲ್ಲಿ ಈಗ ವಿದ್ಯುತ್ ಉತ್ಪಾದನೆ ಮಾಡಿದ ನೀರನ್ನು ನದಿಗೆ ಬಿಡಲಾಗುತ್ತಿದೆ. ಹೊಸ ಪಂಪ್ ಸ್ಟೋರೇಜ್ ಯೋಜನೆಯಂತೆ ನೀರನ್ನು ನದಿಗೆ ಬಿಡದೇ ಮರು ಬಳಕೆ ಮಾಡಲಾಗುತ್ತದೆ. ಇದರಿಂದಾಗಿ 24 ಗಂಟೆಗಳ ಕಾಲ ವಿದ್ಯುತ್ ಉತ್ಪಾದನೆ ಮಾಡಬಹುದಾಗಿದೆ ಎಂದು ಸಚಿವ ಕೆ. ಜೆ. ಜಾರ್ಜ್ ಹೇಳಿದರು.
5/6
Share
ಶರಾವತಿ ವಿದ್ಯುತ್ ಕೇಂದ್ರಕ್ಕೆ ಭೇಟಿ ನೀಡಿದ ಇಂಧನ ಸಚಿವ ಕೆ. ಜೆ. ಜಾರ್ಜ್ ಶರಾವತಿ ನದಿಯ ನೀರನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗುವ ಯಾವುದೇ ಪ್ರಸ್ತಾಪವಿಲ್ಲ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಹಲವು ದಿನಗಳಿಂದ ನಡೆಯುತ್ತಿದ್ದ ಚರ್ಚೆಗೆ ಪೂರ್ಣ ವಿರಾಮ ಹಾಕಿದರು.
6/6
Share
ಇಂಧನ ಸಚಿವ ಕೆ. ಜೆ. ಜಾರ್ಜ್ ಸದ್ಯ ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ. ದೇಶದ ಬೇರೆ-ಬೇರೆ ರಾಜ್ಯಗಳಿಂದ ವಿದ್ಯುತ್ ಅನ್ನು ಖರೀದಿಸಿ ರಾಜ್ಯದ ಜನರ ಅನುಕೂಲಕ್ಕೆ ತಕ್ಕಂತೆ ಸರಬರಾಜು ಮಾಡಲಾಗುತ್ತಿದೆ. ಪ್ರಸಕ್ತ ಮುಂಗಾರು ಕೈಕೊಟ್ಟ ಹಿನ್ನೆಲೆಯಲ್ಲಿ ವಿದ್ಯುತ್ ಉತ್ಪಾದನೆಯಲ್ಲಿ ಕುಂಠಿತಗೊಂಡಿದೆ. ಇರುವ ವಿದ್ಯುತ್ ಹಂಚಿಕೆ ಮಾಡುವ ನಿಟ್ಟಿನಲ್ಲಿ ಕೃಷಿ ಚಟುವಟಿಕೆಗಳಿಗೆ ನೀಡಲಾಗುತ್ತಿದ್ದ ವಿದ್ಯುತ್ ಅನ್ನು 7ಗಂಟೆಗಳಿಂದ 5ಗಂಟೆಗೆ ಮಿತಿಗೊಳಿಸಲಾಗಿದೆ ಎಂದರು.


Click it and Unblock the Notifications