Home / Photos
Independence Day 2024 celebration: ಕರ್ನಾಟಕದಾದ್ಯಂತ ಇಂದು 78ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ
By Sunitha B
ಕರ್ನಾಟಕದಾದ್ಯಂತ ಇಂದು 78ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು. ಚಿಕ್ಕಮಗಳೂರು, ಚಿತ್ರದುರ್ಗ, ಬೆಂಗಳೂರು, ಬಳ್ಳಾರಿ, ಚಾಮರಾಜನಗರ, ಶಿವಮೊಗ್ಗ ಹೀಗೆ ರಾಜ್ಯದ ಹಲವೆಡೆ ರಾಜಕೀಯ ಗಣ್ಯರು ಧ್ವಜಾರೋಹಣ ಮಾಡಿದರು.
1/8
Share
ಚಿಕ್ಕಮಗಳೂರು: ಕಾಫಿನಾಡಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಗರದ ಸುಭಾಷ್ ಚಂದ್ರಬೋಸ್ ಆಟದ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಧ್ವಜಾರೋಹಣ ಮಾಡಿದರು. ಪೊಲೀಸ್, ಹೋಂಗಾರ್ಡ್, ನಿವೃತ್ತ ಯೋಧರು, ವಿಧ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಈ ವೇಳೆ ಉಪಸಭಾಪತಿ ಎಂ.ಕೆ. ಪ್ರಾಣೇಶ್, ಶಾಸಕ ತಮ್ಮಯ್ಯ, ಸಿ.ಟಿ.ರವಿ, ಭೋಜೇಗೌಡ, ಜಿಲ್ಲಾಧಿಕಾರಿ, ಎಸ್ಪಿ ಸೇರಿದಂತೆ ಹಲವರು ಭಾಗಿಯಾಗಿದ್ದರು. (15 ಆಗಸ್ಟ್ 2024)
2/8
Share
ಚಿತ್ರದುರ್ಗ : ದೇಶಾದ್ಯಂತ 78ನೇ ಭಾರತೀಯ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಇತ್ತ ಕೋಟೆ ನಾಡು ಚಿತ್ರದುರ್ಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಅವರು ಧ್ವಜಾರೋಹಣ ನೆರವೇರಿಸಿದರು. (15 ಆಗಸ್ಟ್ 2024)
3/8
Share
ಬಳ್ಳಾರಿ: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಬಳ್ಳಾರಿಯ ರಾಜ್ ಕುಮಾರ್ ಉದ್ಯಾನ ಹಾಗೂ ವೈದ್ಯಕೀಯ ಕಾಲೇಜು ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಗೆ ಸಚಿವ ಕೃಷ್ಣಬೈರೇಗೌಡ ಅವರು ಮಾಲಾರ್ಪಣೆ ಮಾಡಿದರು. ಅಲ್ಲದೆ, ಹೆಚ್.ಆರ್. ಗವಿಯಪ್ಪ ವೃತ್ತದಲ್ಲಿರುವ 150 ಅಡಿ ಎತ್ತರದ ರಾಷ್ಟ್ರಧ್ವಜವನ್ನು ಯಾಂತ್ರೀಕರಣದ ಸಹಾಯದೊಂದಿಗೆ ರಾಷ್ಟ್ರಧ್ವಜಾರೋಹಣ ನೆರವೇರಿಸಲಾಯಿತು. ನಂತರ ವಿಮ್ಸ್ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸಲಾಯಿತು. ಅಲ್ಲದೆ, ಬಳ್ಳಾರಿ ಜಿಲ್ಲೆಯ ವಿವಿಧ ಕವಾಯಿತು ತಂಡಗಳ ಗೌರವ ಸ್ವೀಕರಿಸಲಾಯಿತು. ಕಾರ್ಯಕ್ರಮದಲ್ಲಿ ವಿವಿಧ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. (15 ಆಗಸ್ಟ್ 2024)
4/8
Share
ಚಾಮರಾಜನಗರ ಜಿಲ್ಲಾಡಳಿತ ವತಿಯಿಂದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಸಂಭ್ರಮ- ಸಡಗರದಿಂದ 78 ನೇ ಸ್ವಾತಂತ್ರ್ಯ ದಿನ ಆಚರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಧ್ವಜಾರೋಹಣ ನೆರವೇರಿಸಿ ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು. ಪೊಲೀಸರ ವಿವಿಧ ತುಕಡಿ ಸೇರಿದಂತೆ ವಿವಿಧ ಶಾಲಾ ಮಕ್ಕಳಿಂದ ಆಕರ್ಷಕ ಪಥಸಂಚಲನ ನಡೆಯಿತು. (15 ಆಗಸ್ಟ್ 2024)
5/8
Share
ಚಿಕ್ಕಮಗಳೂರಿನಲ್ಲಿ ರಂಭಾಪುರಿ ಶ್ರೀಗಳಿಂದ ಧ್ವಜಾರೋಹಣ: ಚಿಕ್ಕಮಗಳೂರು ಜಿಲ್ಲೆ ಎನ್ ಆರ್ ಪುರ ತಾಲೂಕಿನ ಬಾಳೆಹೊನ್ನೂರು ಮಠದಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ರಂಭಾಪುರಿ ಶ್ರೀಗಳಿಂದ ಧ್ವಜಾರೋಹಣ ಮಾಡಲಾಯಿತು. ಧ್ವಜಾರೋಹಣ ನೆರವೇರಿಸಿದ ರಂಭಾಪುರಿ ಶ್ರೀಗಳು,'ಸ್ವಾಭಿಮಾನ, ಜಾತ್ಯತೀತ ಮನೋಭಾವ ಬೆಳಗಲಿ. ಎಲ್ಲರೂ ಒಟ್ಟಾಗಿ ಉತ್ತಮ ದೇಶ ಕಟ್ಟುವತ್ತ ತೊಡಗೋಣ. ಸಮಾಜದಲ್ಲಿ ಸೌಹಾರ್ದ ಮನೋಭಾವ ಬೆಳೆಯಲಿ ಎಂದು ಸಂದೇಶ ನೀಡಿದರು. (15 ಆಗಸ್ಟ್ 2024)
6/8
Share
ಶಿವಮೊಗ್ಗ : ಮಲೆನಾಡು ಶಿವಮೊಗ್ಗದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ಸಚಿವ ಮಧು ಬಂಗಾರಪ್ಪ ನೆರವೇರಿಸಿದರು. ಜಿಲ್ಲಾಡಳಿತದಿಂದ ವತಿಯಿಂದ ಶಿವಮೊಗ್ಗದ ಡಿಎಆರ್ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಸಲಾಯಿತು.ಈ ವೇಳೆ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಶಾಸಕ ಚನ್ನಬಸಪ್ಪ, ಎಂಎಲ್ಸಿ ಡಾ.ಧನಂಜಯ ಸರ್ಜಿ ಭಾಗಿಯಾಗಿದ್ದರು. ಜೊತೆಗೆ ಈ ಸಂದರ್ಭದಲ್ಲಿ ಪಂಥ ಸಂಚಲನ ಗಮನ ಸೆಳೆಯಿತು. (15 ಆಗಸ್ಟ್ 2024)
7/8
Share
ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಧ್ವಜಾರೋಹಣ ಮಾಡಿದರು. (15 ಆಗಸ್ಟ್ 2024)
8/8
Share
ಬೆಂಗಳೂರು: ನಮ್ಮ ದೇಶಕ್ಕೆ ಸ್ವಾತಂತ್ರ ಬಂದು 78 ವರ್ಷ ತುಂಬಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ನೆರವೇರಿಸಿದ ಬಳಿಕ ಮುಖ್ಯಮಂತ್ರಿಗಳು ತೆರೆದ ಜೀಪ್ ನಲ್ಲಿ ಪರೇಡ್ ವೀಕ್ಷಣೆ ಮಾಡಿದರು. ಇದಕ್ಕೂ ಮೊದಲು ಕೆಪಿಸಿಸಿ ಕಚೇರಿಯಲ್ಲಿ ನಡೆದ ಧ್ವಜಾರೋಹಣದಲ್ಲಿ ಮುಖ್ಯಮಂತ್ರಿಗಳು ಭಾಗಿಯಾಗಿದ್ದರು. (15 ಆಗಸ್ಟ್ 2024)


Click it and Unblock the Notifications