Home / Photos
ಲೋಕಸಭೆ ಚುನಾವಣೆ, ಚಿಕ್ಕಮಗಳೂರಿಗೆ ಕೋಟ ಶ್ರೀನಿವಾಸ ಪೂಜಾರಿ ಮೊದಲ ಭೇಟಿ
By Gururaj S
2024ರ ಲೋಕಸಭೆ ಚುನಾವಣೆಗೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಚಿಕ್ಕಮಗಳೂರಿಗೆ ಮೊದಲ ಬಾರಿಗೆ ಭೇಟಿ ನೀಡಿದರು.
1/6
Share
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಚಿಕ್ಕಮಗಳೂರಿಗೆ ಕೋಟ ಶ್ರೀನಿವಾಸ್ ಪೂಜಾರಿ ಆಗಮಿಸಿದರು. ಮಾಜಿ ಸಚಿವ ಸಿ. ಟಿ. ರವಿ ಅವರನ್ನು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಎಂ. ಕೆ. ಪ್ರಾಣೇಶ್, ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ, ಮಾಜಿ ಶಾಸಕ ಡಿ. ಎನ್. ಜೀವರಾಜ್, ರೈತಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಕಲ್ಮರಡಪ್ಪ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
2/6
Share
ಚಿಕ್ಕಮಗಳೂರು ಜಿಲ್ಲೆಗೆ ಮೊದಲ ಬಾರಿಗೆ ಭೇಟಿ ನೀಡಿದ ಕೋಟ ಶ್ರೀನಿವಾಸ ಪೂಜಾರಿ ಬೀದಿ ಬದಿಯ ಟೀ ಅಂಗಡಿಗೆ ಭೇಟಿ ನೀಡಿದರು. ನಿತಿನ್ ಕುಲಾಲ್ ಈ ಅಂಗಡಿಯ ಮಾಲೀಕರು. ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿರುವ ಈತ ತನ್ನ ಜೀವನ ಹಾಗೂ ಶಿಕ್ಷಣಕ್ಕಾಗಿ ಬೆಳಗ್ಗೆ ಬೀದಿ ಬದಿ ಅಂಗಡಿ ಇಟ್ಟು ವ್ಯಾಪಾರ ಮಾಡುತ್ತಿದ್ದಾರೆ. ಪ್ರಧಾನಮಂತ್ರಿ ಸ್ವ-ನಿಧಿ ಯೋಜನೆ ಮೂಲಕ ಸಾಲ ಪಡೆದು ಅಂಗಡಿ ನಡೆಸಿ ಜೀವನ ಸಾಗಿಸುತ್ತಿದ್ದಾರೆ.
3/6
Share
ಕೋಟ ಶ್ರೀನಿವಾಸ ಪೂಜಾರಿ ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿರುವ ದತ್ತಪೀಠಕ್ಕೆ ತೆರಳಿ ಶ್ರೀ ಗುರು ದತ್ತಾತ್ರೇಯ ದೇವರ ಪಾದುಕೆಯ ದರ್ಶನ ಪಡೆದರು. ಹಿಂದೂಗಳ ಪವಿತ್ರ ಪುಣ್ಯಕ್ಷೇತ್ರದ ರಕ್ಷಣೆಗಾಗಿ ಶ್ರಮಿಸಿದ ಎಲ್ಲಾ ಮಹನೀಯರಿಗೆ ನಮನಗಳನ್ನು ಸಲ್ಲಿಸಿದರು. ಈಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ದೇವರಾಜ್ ಶೆಟ್ಟಿ, ರಾಜ್ಯ ರೈತಮೋರ್ಚಾದ ಪ್ರಧಾನ ಕಾರ್ಯದರ್ಶಿ ಕಲ್ಮರುಡಪ್ಪ, ರಾಜ್ಯ ಓಬಿಸಿ ಮೋರ್ಚಾ ಕಾರ್ಯದರ್ಶಿ ರಾಜಪ್ಪ ಮುಂತಾದವರು ಉಪಸ್ಥಿತರಿದ್ದರು.
4/6
Share
ಕೋಟ ಶ್ರೀನಿವಾಸ ಪೂಜಾರಿ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಮಂಡಲದ ಬಿಜೆಪಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ತರೀಕೆರೆಯ ಮಾಜಿ ಶಾಸಕ ಸುರೇಶ್, ಮಾಜಿ ಗೃಹ ಮಂತ್ರಿ ಆರಗ ಜ್ಞಾನೇಂದ್ರ, ಹಿರಿಯ ಮುಖಂಡ ಭಾನುಪ್ರಕಾಶ್ ಸ್ಥಳೀಯ ನಾಯಕರುಗಳು ಉಪಸ್ಥಿತರಿದ್ದರು.
5/6
Share
ಶುಕ್ರವಾರ ಲೋಕಸಭೆ ಚುನಾವಣೆ 2024ಕ್ಕೆ ಬಿಜೆಪಿ ಅಭ್ಯರ್ಥಿಗಳನ್ನು ಪಟ್ಟಿ ಬಿಡುಗಡೆ ಮಾಡಲಾಗಿದೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಬದಲಿಗೆ ಕೋಟ ಶ್ರೀನಿವಾಸ ಪೂಜಾರಿ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದು, ಅವರು ಕ್ಷೇತ್ರದ ಸಂಚಾರ ಆರಂಭಿಸಿದ್ದಾರೆ.
6/6
Share
ಕೋಟ ಶ್ರೀನಿವಾಸ ಪೂಜಾರಿ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಸುರೇಶ್ ಅವರ ಮನೆಗೆ ಭೇಟಿ ನೀಡಿ ಲೋಕಸಭಾ ಚುನಾವಭೆ ಬಗ್ಗೆ ಚರ್ಚಿಸಿದರು. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ.


Click it and Unblock the Notifications