Home / Photos
ದೆಹಲಿಯಲ್ಲಿ ಎಲೆಕ್ಟ್ರಿಕ್ ವಾಹನ ಓಡಿಸಿದ ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ
By Gururaj S
ನವದೆಹಲಿಯಲ್ಲಿ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್. ಡಿ. ಕುಮಾರಸ್ವಾಮಿ ಎಲೆಕ್ಟ್ರಿಕ್ ವಾಹನಗಳ ರ್ಯಾಲಿ ಉದ್ಘಾಟಿಸಿ, ಎಲೆಕ್ಟ್ರಿಕ್ ವಾಹನ ಓಡಿಸಿದರು.
1/6
Share
ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್. ಡಿ. ಕುಮಾರಸ್ವಾಮಿ ನವದೆಹಲಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ರ್ಯಾಲಿಯನ್ನು ಉದ್ಘಾಟಿಸಿದರು. ಬಳಿಕ ಭಾರತ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಲೆಕ್ಟ್ರಿಕ್ ವಾಹನಗಳ ಕುರಿತು ಮಾಹಿತಿ ಪಡೆದರು, ವಾಹನ ಓಡಿಸಿ ಗಮನ ಸೆಳೆದರು.
2/6
Share
ನವದೆಹಲಿಯ ಭಾರತ ಮಂಟಪದಲ್ಲಿ ಎಚ್. ಡಿ. ಕುಮಾರಸ್ವಾಮಿ ಎಸ್ಐಎಂ ಇಂಡಿಯಾ ಗ್ರೀನ್ ಪ್ಲೇಟ್ ಇವಿ ರ್ಯಾಲಿಯನ್ನು ಉದ್ಘಾಟಿಸಿದರು. 2ನೇ ಆವೃತ್ತಿಯ ರ್ಯಾಲಿಗೆ ಹಸಿರು ನಿಶಾನೆಯನ್ನು ತೋರಿಸಿದರು. ಎಸ್ಐಎಂಎ ಅಧ್ಯಕ್ಷ ವಿನೋದ್ ಅಗರವಾಲ್, ಉಪಾಧ್ಯಕ್ಷ ಶೈಲೇಶ್ ಚಂದ್ರ ಮತ್ತು ಇತರ ಉದ್ಯಮಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
3/6
Share
ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್. ಡಿ. ಕುಮಾರಸ್ವಾಮಿ ನವದೆಹಲಿಯಲ್ಲಿ ಎಸ್ಐಎಂ ಇಂಡಿಯಾ ಗ್ರೀನ್ ಪ್ಲೇಟ್ ಇವಿ ರ್ಯಾಲಿಯನ್ನು ಉದ್ಘಾಟಿಸಿದರು. ಬಳಿಕ ವಿವಿಧ ಮಾದರಿಯ ಎಲೆಕ್ಟ್ರಿಕ್ ವಾಹನಗಳ ಕುರಿತು ಮಾಹಿತಿಯನ್ನು ಪಡೆದುಕೊಂಡರು.
4/6
Share
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತದ ವಾಹನೋದ್ಯಮವು ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ. ಈಗ ವಿಶ್ವದ 3ನೇ ಅತಿದೊಡ್ಡ ವಾಹನ ಮಾರುಕಟ್ಟೆಯಾಗಿ ಹೆಮ್ಮೆಪಡುವಂತಾಗಿದೆ. 2030ರೊಳಗೆ ಹೊಸ ವಾಹನ ಮಾರಾಟದ ಶೇ 30ರಷ್ಟು ವಿದ್ಯುತ್ ವಾಹನಗಳಾಗಬೇಕೆಂಬ ಮಹತ್ವಾಕಾಂಕ್ಷಿ ಗುರಿಯನ್ನು ಪ್ರಧಾನಿಗಳು ಹೊಂದಿದ್ದಾರೆ ಎಂದು ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.
5/6
Share
ಭಾರೀ ಕೈಗಾರಿಕೆ ಸಚಿವಾಲಯವು ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯನ್ನು ಸಾಧಿಸಲು ತನ್ನ ನೀತಿಗಳು, ಉಪಕ್ರಮಗಳು ಮತ್ತು ಯೋಜನೆಗಳ ಮೂಲಕ ಸಂಪೂರ್ಣವಾಗಿ ಬದ್ಧವಾಗಿದೆ ಎಂದು ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
6/6
Share
2024ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ ಮಂಡ್ಯ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಎಚ್. ಡಿ. ಕುಮಾರಸ್ವಾಮಿ ಪ್ರಧಾನಿ ನರೇಂದ್ರ ಮೋದಿ 3.0 ಸಂಪುಟದಲ್ಲಿ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರು. ಜೆಡಿಎಸ್ ಪಕ್ಷದ ಕರ್ನಾಟಕ ಘಟಕದ ಅಧ್ಯಕ್ಷರಾದ ಕುಮಾರಸ್ವಾಮಿಗೆ ಸಚಿವ ಸ್ಥಾನ ನೀಡಲಾಗಿದೆ. ಎನ್ಡಿಎ ಮೈತ್ರಿಕೂಟದ ಅಂಗ ಪಕ್ಷದಲ್ಲಿ ಜೆಡಿಎಸ್ ಸಹ ಒಂದು.


Click it and Unblock the Notifications