Home / Photos
ತುಮಕೂರಿನಲ್ಲಿ ಸಂಸದರ ಕಛೇರಿ ಉದ್ಘಾಟಿಸಿದ ಕೇಂದ್ರ ಸಚಿವ ವಿ. ಸೋಮಣ್ಣ
By Gururaj S
ತುಮಕೂರು ಸಂಸದ, ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತುಮಕೂರು ನಗರದಲ್ಲಿ ಸಂಸದರ ಕಛೇರಿಯನ್ನು ಉದ್ಘಾಟಿಸಿದರು.
1/6
Share
ತುಮಕೂರು ಕ್ಷೇತ್ರದ ಬಿಜೆಪಿ ಸಂಸದ, ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತುಮಕೂರು ನಗರದಲ್ಲಿ ಸಂಸದರ ಕಛೇರಿಯನ್ನು ಉದ್ಘಾಟಿಸಿದರು. ವಿ. ಸೋಮಣ್ಣ ಕಛೇರಿ ತೆರೆಯಲು ಅವಕಾಶ ನೀಡಿ, ಬಳಿಕ ಅದನ್ನು ವಾಪಸ್ ಪಡೆದ ರಾಜ್ಯ ಸರ್ಕಾರದ ಕ್ರಮ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಅಂತಿಮವಾಗಿ ಕಛೇರಿ ಲೋಕಾರ್ಪಣೆಯಾಗಿದೆ.
2/6
Share
ಭಾನುವಾರ ವಿ. ಸೋಮಣ್ಣ ತುಮಕೂರು ಲೋಕಸಭಾ ಕ್ಷೇತ್ರದ ನೂತನ ಜನಸಂಪರ್ಕ ಕಚೇರಿಯನ್ನು ಉದ್ಘಾಟಿಸಿದರು. ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರದ ಶಾಸಕರು, ಮಾಜಿ ಶಾಸಕರು, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
3/6
Share
ಕೇಂದ್ರ ಸಚಿವ ವಿ. ಸೋಮಣ್ಣ ತುಮಕೂರು ಲೋಕಸಭಾ ಕ್ಷೇತ್ರದ ನೂತನ ಜನಸಂಪರ್ಕ ಕಚೇರಿ ಉದ್ಘಾಟನೆಗೂ ಮುನ್ನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ, ಪರಮಪೂಜ್ಯ ಲಿಂಗೈಕ್ಯ ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳ ಗದ್ದುಗೆಯ ಆಶೀರ್ವಾದ ಪಡೆದರು.
4/6
Share
ಕೇಂದ್ರ ಸಚಿವ ವಿ. ಸೋಮಣ್ಣ ತುಮಕೂರು ಲೋಕಸಭಾ ಕ್ಷೇತ್ರದ ನೂತನ ಜನಸಂಪರ್ಕ ಕಚೇರಿ ಉದ್ಘಾಟನೆಯಲ್ಲಿ ಕ್ಷೇತ್ರದ ಮಾಜಿ ಸಂಸದ ಬಸವರಾಜು ಸೇರಿದಂತೆ ಬಿಜೆಪಿ-ಜೆಡಿಎಸ್ ಪಕ್ಷಗಳ ಮುಖಂಡರು ಪಾಲ್ಗೊಂಡಿದ್ದರು.
5/6
Share
ತುಮಕೂರು ಸಂಸದ, ಕೇಂದ್ರ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತುಮಕೂರು ಲೋಕಸಭಾ ಕ್ಷೇತ್ರದ ನೂತನ ಜನಸಂಪರ್ಕ ಕಚೇರಿ ಉದ್ಘಾಟನೆಗೂ ಮುನ್ನ ಪೂಜೆ ಸಲ್ಲಿಸಿದರು.
6/6
Share
ನೂತನ ಜನಸಂಪರ್ಕ ಕಚೇರಿ ಉದ್ಘಾಟನೆಗೂ ಮುನ್ನ ಕೇಂದ್ರ ಸಚಿವ ವಿ. ಸೋಮಣ್ಣ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಪರಮಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ, ನಿಡಸೋಸಿ ಮಠದ ಶ್ರೀ ಶಿವಲಿಂಗ ಮಹಾಸ್ವಾಮೀಜಿಗಳವರ ಆಶೀರ್ವಾದವನ್ನು ಪಡೆದರು.


Click it and Unblock the Notifications