bredcrumb

ಡಿ.11 ರಂದು 6ನೇ ವಂದೇ ಭಾರತ್ ಎಕ್ಸ್‌ಪ್ರೆಸ್ ಸಂಚಾರ ಆರಂಭ

By Sunitha B
| Published: Monday, December 5, 2022, 12:10 [IST]
ಡಿ.11 ರಂದು 6ನೇ ವಂದೇ ಭಾರತ್ ಎಕ್ಸ್‌ಪ್ರೆಸ್ ಸಂಚಾರ ಆರಂಭ
1/10
ಛತ್ತೀಸ್‌ಗಢ ಬಿಲಾಸ್‌ಪುರದಿಂದ ನಾಗ್ಪುರ (ಮಹಾರಾಷ್ಟ್ರ)ವನ್ನು ತಲುಪಲಿರುವ ದೇಶದ ಆರನೇ ಸೆಮಿ ಹೈಸ್ಪೀಡ್ ವಂದೇ ಭಾರತ್ ರೈಲನ್ನು ಡಿಸೆಂಬರ್ 11 ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ ಎಂದು ಭಾರತೀಯ ರೈಲ್ವೇ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಡಿ.11 ರಂದು 6ನೇ ವಂದೇ ಭಾರತ್ ಎಕ್ಸ್‌ಪ್ರೆಸ್ ಸಂಚಾರ ಆರಂಭ
2/10
ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಫೆಬ್ರವರಿ 15, 2019 ರಂದು ನವದೆಹಲಿ-ಕಾನ್ಪುರ-ಅಲಹಾಬಾದ್-ವಾರಣಾಸಿ ಮಾರ್ಗದಲ್ಲಿ ಚಾಲನೆ ನೀಡಲಾಯಿತು.
ಡಿ.11 ರಂದು 6ನೇ ವಂದೇ ಭಾರತ್ ಎಕ್ಸ್‌ಪ್ರೆಸ್ ಸಂಚಾರ ಆರಂಭ
3/10
ಸೆಮಿ-ಹೈ-ಸ್ಪೀಡ್ ವಂದೇ ಭಾರತ್ ರೈಲಿನ ಎಲ್ಲಾ ಕೋಚ್‌ಗಳು ಸ್ವಯಂಚಾಲಿತ ಬಾಗಿಲುಗಳು, ಜಿಪಿಎಸ್-ಆಧಾರಿತ ಆಡಿಯೊ-ವಿಶುವಲ್ ಪ್ಯಾಸೆಂಜರ್ ಮಾಹಿತಿ ವ್ಯವಸ್ಥೆ, ಮನರಂಜನಾ ಉದ್ದೇಶಗಳಿಗಾಗಿ ಆನ್‌ಬೋರ್ಡ್ ಹಾಟ್‌ಸ್ಪಾಟ್ ವೈ-ಫೈ ಮತ್ತು ಆರಾಮದಾಯಕ ಆಸನಗಳನ್ನು ಹೊಂದಿವೆ.
ಡಿ.11 ರಂದು 6ನೇ ವಂದೇ ಭಾರತ್ ಎಕ್ಸ್‌ಪ್ರೆಸ್ ಸಂಚಾರ ಆರಂಭ
4/10
ಮುಂದಿನ ವರ್ಷ ಆಗಸ್ಟ್ ವೇಳೆಗೆ 75 ವಂದೇ ಭಾರತ್ ರೈಲುಗಳನ್ನು ಉದ್ಘಾಟಿಸುವ ಗುರಿಯನ್ನು ರೈಲ್ವೇ ಹೊಂದಿದೆ.
ಡಿ.11 ರಂದು 6ನೇ ವಂದೇ ಭಾರತ್ ಎಕ್ಸ್‌ಪ್ರೆಸ್ ಸಂಚಾರ ಆರಂಭ
5/10
ವಂದೇ ಭಾರತ್ ರೈಲು ಈ ವರ್ಷದ ಅಕ್ಟೋಬರ್‌ನಲ್ಲಿ ಮುಂಬೈ-ಅಹಮದಾಬಾದ್ ಮಾರ್ಗದಲ್ಲಿ ಮೊದಲ ಬಾರಿಗೆ ಉದ್ಘಾಟನೆಗೊಂಡಿತು.
ಡಿ.11 ರಂದು 6ನೇ ವಂದೇ ಭಾರತ್ ಎಕ್ಸ್‌ಪ್ರೆಸ್ ಸಂಚಾರ ಆರಂಭ
6/10
ಜೊತೆಗೆ 2023 ರಲ್ಲಿ ಸಿಕಂದರಾಬಾದ್ ಮತ್ತು ವಿಜಯವಾಡ ನಡುವೆ ಮತ್ತೊಂದು ವಂದೇ ಭಾರತ್ ರೈಲು ಪ್ರಾರಂಭಿಸುವ ಸಾಧ್ಯತೆಯಿದೆ ಎಂದು ಅಧಿಕಾರಿ ಹೇಳಿದರು.
ಡಿ.11 ರಂದು 6ನೇ ವಂದೇ ಭಾರತ್ ಎಕ್ಸ್‌ಪ್ರೆಸ್ ಸಂಚಾರ ಆರಂಭ
7/10
ಪ್ರಸ್ತುತ ಸೂಪರ್‌ಫಾಸ್ಟ್ ರೈಲುಗಳು ನಾಗಪುರವನ್ನು ತಲುಪಲು ಸುಮಾರು ಏಳು ಗಂಟೆಗಳನ್ನು ತೆಗೆದುಕೊಳ್ಳುತ್ತದೆ, ಆದರೆ ವಂದೇ ಭಾರತ್ ರೈಲು ಸುಮಾರು ಐದೂವರೆ ಗಂಟೆಗಳಲ್ಲಿ ತಲುಪಲಿದೆ.
ಡಿ.11 ರಂದು 6ನೇ ವಂದೇ ಭಾರತ್ ಎಕ್ಸ್‌ಪ್ರೆಸ್ ಸಂಚಾರ ಆರಂಭ
8/10
ಈ ರೈಲು ಬೆಳಗ್ಗೆ 6.45ಕ್ಕೆ ಬಿಲಾಸ್‌ಪುರದಿಂದ ಹೊರಟು ಮಧ್ಯಾಹ್ನ 12.15ಕ್ಕೆ ನಾಗ್ಪುರ ತಲುಪಲಿದೆ ಎಂದು ರೈಲ್ವೆ ಅಧಿಕಾರಿ ತಿಳಿಸಿದ್ದಾರೆ. ಅದೇ ರೀತಿ ನಾಗ್ಪುರದಿಂದ ಮಧ್ಯಾಹ್ನ 2 ಗಂಟೆಗೆ ಹೊರಟು ರಾತ್ರಿ 7.35ಕ್ಕೆ ಬಿಲಾಸ್ಪುರ ತಲುಪಲಿದೆ.
ಡಿ.11 ರಂದು 6ನೇ ವಂದೇ ಭಾರತ್ ಎಕ್ಸ್‌ಪ್ರೆಸ್ ಸಂಚಾರ ಆರಂಭ
9/10
ರೈಲು ವಾರದಲ್ಲಿ ಆರು ದಿನಗಳು ಚಲಿಸುತ್ತದೆ ಮತ್ತು ಸುಮಾರು ಐದೂವರೆ ಗಂಟೆಗಳಲ್ಲಿ ಪ್ರಯಾಣದ ಒಂದು ಮಾರ್ಗವನ್ನು ಪೂರ್ಣಗೊಳಿಸುತ್ತದೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X