Home / Photos
V Srinivasa Prasad: ವಿ ಶ್ರೀನಿವಾಸ ಪ್ರಸಾದ್ ಅವರ ಅಪರೂಪದ ದೃಶ್ಯಗಳು ಇಲ್ಲಿದೆ
By Sunitha B
ಹಿರಿಯ ರಾಜಕಾರಣಿ ವಿ ಶ್ರೀನಿವಾಸ ಪ್ರಸಾದ್ ನಿಧನರಾಗಿದ್ದಾರೆ. ಚಾಮರಾಜನಗರ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಬಿಜೆಪಿ ಹಿರಿಯ ರಾಜಕಾರಣಿ ವಿ. ಶ್ರೀನಿವಾಸ ಪ್ರಸಾದ್ (V. Srinivas Prasad) ಅವರು ಆರೋಗ್ಯದಲ್ಲಿ ಏರುಪೇರಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.
1/8
Share
ಹಿರಿಯ ರಾಜಕಾರಣಿ ವಿ ಶ್ರೀನಿವಾಸಪ್ರಸಾದ್ ನಿಧನರಾಗಿದ್ದಾರೆ. ಚಾಮರಾಜನಗರ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಬಿಜೆಪಿ ಹಿರಿಯ ರಾಜಕಾರಣಿ ವಿ. ಶ್ರೀನಿವಾಸ ಪ್ರಸಾದ್ (V. Srinivas Prasad) ಅವರು ಆರೋಗ್ಯದಲ್ಲಿ ಏರುಪೇರಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
2/8
Share
76 ವರ್ಷದ ಹಿರಿಯ ರಾಜಕಾರಣಿ ವಿ.ಶ್ರೀನಿವಾಸ್ ಪ್ರಸಾದ್ ಅವರು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ಈ ಕಾರಣದಿಂದಾಗಿ ಆರೋಗ್ಯ ಸ್ಥಿತಿ ಗಂಭೀರವಾಗಿ ಅವರನ್ನು ಶನಿವಾರ ಮಣಿಪಾಲ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರು ಎಳೆದಿದ್ದಾರೆ.
3/8
Share
ಶ್ರೀನಿವಾಸ್ ಪ್ರಸಾದ್ ಅಳಿಯ ಹರ್ಷವರ್ಧನ್ ಮಾತನಾಡಿ, ಲೋಕಸಭಾ ಸದಸ್ಯರು, ಧೀಮಂತ ನಾಯಕರು ಶ್ರೀನಿವಾಸ್ ಪ್ರಸಾದ್ ಅವರು ರಾತ್ರಿ 1:20ರ ಸುಮಾರಿಗೆ ತೀವ್ರವಾದ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಣಿಪಾಲ್ ಆಸ್ಪತ್ರೆಯ ಎಲ್ಲ ವೈದ್ಯರು ತುಂಬಾ ಪ್ರಯತ್ನ ಪಟ್ಟಿದ್ದಾರೆ. ಆದರೆ ಭಗವಂತ ಈ ರೀತಿಯ ನಿರ್ಧಾರ ತೆಗೆದುಕೊಂಡಿದ್ದಾರೆ. ಇದು ಇಡೀ ದಲಿತ ಸಮುದಾಯಕ್ಕೆ ತುಂಬಲಾರದ ನಷ್ಟ.
4/8
Share
14 ಚುನಾವಣೆ ಎದುರಿಸಿದ್ದ ಅವರ ರಾಜಕೀಯ ಜೀವನ ಸೋಲಿನಿಂದ ಆರಂಭವಾಗಿ ಗೆಲುವಿನಿಂದ ಅಂತ್ಯ ಕಂಡಿದೆ. 14 ಚುನಾವಣೆ ಹಾಗೂ 8 ಚುನಾವಣೆಗಳಲ್ಲಿ ಗೆಲುವು ಸಾಧಿಸಿದ್ದಾರೆ. 6 ಬಾರಿ ಸಂಸದ- 2 ಬಾರಿ ಶಾಸಕರಾಗಿದ್ದ ಪ್ರಸಾದ್ 27 ವರ್ಷಗಳ ಸಂಸತ್ ಅವಧಿಯಲ್ಲಿ 7 ಪ್ರಧಾನಿ ನೋಡಿದ್ದರು.
5/8
Share
1974 ರಲ್ಲಿ ಮೈಸೂರಿನ ಕೃಷ್ಣರಾಜ ಕ್ಷೇತ್ರದಿಂದ ಮೊದಲ ಬಾರಿ ಪಕ್ಷೇತರನಾಗಿ ಕಣಕ್ಕೆ ಇಳಿದರು. 1980 ರಲ್ಲಿ ಕಾಂಗ್ರೆಸ್ ಪಕ್ಷದಿಂದ ಮೊದಲ ಬಾರಿ ಚಾಮರಾಜನಗರ ಕ್ಷೇತ್ರದ ಸಂಸದರಾದರು. 1980, 1984, 1989, 1991 ಹೀಗೆ ಸತತ ನಾಲ್ಕು ಚುನಾವಣೆಗಳಲ್ಲಿ ಜಯ ಸಾಧಿಸಿದರು. ವಾಜಪೇಯಿ ನೇತೃತ್ವದ ಎನ್ಡಿಎ ಸರ್ಕಾರದಲ್ಲಿ ಶ್ರೀನಿವಾಸ ಪ್ರಸಾದ್ ಗೆ ಕೇಂದ್ರ ಮಂತ್ರಿ ಸ್ಥಾನ ಸಿಕ್ಕಿದೆ.
6/8
Share
2013 ರಲ್ಲಿ ನಂಜನಗೂಡು ಕ್ಷೇತ್ರದಿಂದ ಆಯ್ಕೆಯಾಗಿ ಸಿದ್ದರಾಮಯ್ಯ ಸಂಪುಟದಲ್ಲಿ ಕಂದಾಯ ಸಚಿವರಾದರು. 2019 ರಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಮೊದಲ ಬಾರಿ ಕಮಲ ಅರಳಿಸಿದ್ದ ಪ್ರಸಾದ್, ಸ್ವಾಭಿಮಾನಿ ರಾಜಕಾರಣಿ ಎಂಥಲೇ ಜನರಿಂದ ಕರೆಯಿಸಿಕೊಂಡ ದಲಿತ ನಾಯಕರಾಗಿದ್ದಾರೆ.
7/8
Share
ಕಳೆದ ಮಾರ್ಚ್ 17ರಂದು ರಾಜಕೀಯ ನಿವೃತ್ತಿ ಕುರಿತು ಮಾತನಾಡಿದ್ದರು. ಮುಂದಿನ ದಿನಗಳಲ್ಲಿ ರಾಜಕೀಯದಿಂದ ದೂರ ಸರಿಯುವುದಾಗಿ ಅವರು ಘೋಷಿಸಿದ್ದರು. ಇವರು ಲೋಕಸಭಾ ಚುನಾವಣೆ 2019ರ ಲೋಕಸಭಾ ಚುನಾವಣೆ ಬಿಜೆಪಿಯಿಂದ ಸ್ಪರ್ಧಿಸಿದ್ದ ಇವರು 1800ಕ್ಕೂ ಅಧಿಕ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಧ್ರುವನಾರಾಯಣರನ್ನು ಸೋಲಿಸಿದ್ದರು.
8/8
Share
ಸದ್ಯ ಮೈಸೂರಿನ ಜಯಲಕ್ಷ್ಮೀಪುರ ನಿವಾಸಕ್ಕೆ ಪಾರ್ಥಿವ ಶರೀರ ರವಾನೆ ಮಾಡಲಾಗಿದ್ದು, ಇಂದು ಮೈಸೂರಿನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಶ್ರೀನಿವಾಸ್ ಪ್ರಸಾದ್ ಪಾರ್ಥಿವ ಶರೀರವನ್ನು ಮಣಿಪಾಲ್ ಆಸ್ಪತ್ರೆಯಿಂದ ಮೈಸೂರಿಗೆ ಅಂಬ್ಯುಲೆನ್ಸ್ ಮೂಲಕ ರವಾನೆ ಮಾಡಲಾಗಿದೆ. ಮೈಸೂರಿನ ಜಯಲಕ್ಷ್ಮೀ ಪುರಂ ನಿವಾಸಕ್ಕೆ ಕುಟುಂಬಸ್ಥರು ಪಾರ್ಥಿವ ಶರೀರರವನ್ನು ತೆಗೆದುಕೊಂಡ ಹೊರಟ್ಟಿದ್ದಾರೆ.


Click it and Unblock the Notifications