ಭಾರತ 1947ರ ಆಗಸ್ಟ್ 15ರಂದು ಸ್ವಾತಂತ್ರ್ಯ ಪಡೆದನಂತರ ವಿಶ್ವದ ಅತೀದೊಡ್ಡ ಪ್ರಜಾಪ್ರಭುತ್ವ ಹೊಂದಿರುವ ರಾಷ್ಟ್ರದಲ್ಲಿ 200 ರಾಜಕೀಯ ಪಕ್ಷಗಳ ಜನ್ಮತಳೆದಿವೆ. ಇತರ ರಾಷ್ಟ್ರಗಳ ಪ್ರಜಾಪ್ರಭುತ್ವಕ್ಕೆ ಹೋಲಿಸಿದರೆ ಭಾರತದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ರಾಜಕೀಯ ಪಕ್ಷಗಳು ಆಯಾ ಪಕ್ಷದ ನಾಯಕನ ಸುತ್ತ ಕೇಂದ್ರೀಕೃತವಾಗಿವೆ. ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪ್ರಮುಖ ಪಕ್ಷಗಳಾಗಿವೆ. ಆಧುನಿಕ ಭಾರತದ ನಿರ್ಮಾತೃ ಎಂದು ಜನಜನಿತರಾಗಿರುವ, ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರು ಇಡೀ ಭಾರತದ ರಾಜಕೀಯ ಚಟುವಟಿಕೆಯ ಕೇಂದ್ರಬಿಂದುವಾಗಿದ್ದರು. ಅವರ ಮಗಳು ಇಂದಿರಾ ಗಾಂಧಿ, ಭಾರತದ ಮೊದಲ ಮಹಿಳಾ ಪ್ರಧಾನಿಯಾಗಿ ಇತಿಹಾಸ ನಿರ್ಮಿಸಿದರು. ಹಲವಾರು ದಶಕಗಳ ಕಾಲ ಕಾಂಗ್ರೆಸ್ ಪಕ್ಷ ಭಾರತದ ರಾಜಕೀಯವನ್ನು ಆಳಿದರೆ, ಇತ್ತೀಚಿನ ವರ್ಷಗಳಲ್ಲಿ ಬಿಜೆಪಿಯ ಉನ್ನತಮಟ್ಟದ ನಾಯಕರಾದ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಮತ್ತು ಮತ್ತು ಪ್ರಸ್ತುತ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅವರು ಪ್ರಭುತ್ವ ಸಾಧಿಸಿದ್ದು, ಭಾರತದ ರಾಜಕೀಯ ನಕ್ಷೆಯನ್ನೇ ಬದಲಿಸಿದ್ದಾರೆ.
Disclaimer:The information provided on this page is sourced from various publicly available platforms including https://en.wikipedia.org/, https://sansad.in/ls, https://sansad.in/rs, https://pib.gov.in/, https://affidavit.eci.gov.in/ and the official websites of state assemblies respectively. While we make every effort to maintain the accuracy, comprehensiveness and timeliness of the information provided, we cannot guarantee the absolute accuracy or reliability of the content. The data presented here has been compiled without consideration of the objectives or opinions of individuals who may access it.