ಅರೆಬೈಲ್ ಶಿವರಾಮ್ ಹೆಬ್ಬಾರ್

ಅರೆಬೈಲ್ ಶಿವರಾಮ್ ಹೆಬ್ಬಾರ್
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕರು ಶಿವರಾಮ ಹೆಬ್ಬಾರ್. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಕಾರ್ಮಿಕ ಸಚಿವರು.
By Moumi Majumdar | Friday, September 2, 2022, 05:18:06 PM [IST]

ಅರೆಬೈಲ್ ಶಿವರಾಮ್ ಹೆಬ್ಬಾರ್ ಜೀವನ ಚರಿತ್ರೆ

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕರು ಶಿವರಾಮ ಹೆಬ್ಬಾರ್. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಕಾರ್ಮಿಕ ಸಚಿವರು.

ಬ್ರಾಹ್ಮಣ (ಹವ್ಯಾಕ) ಸಮುದಾಯಕ್ಕೆ ಸೇರಿದ ಶಿವರಾಮ ಹೆಬ್ಬಾರ್ ಪೂರ್ಣ ಹೆಸರು ಅರೆಬೈಲು ಶಿವರಾಮ ಹೆಬ್ಬಾರ್. ಎಸ್ಎಸ್‌ಎಲ್‌ಸಿ ವ್ಯಾಸಂಗ ಮಾಡಿದ್ದಾರೆ.

4 ಬಾರಿ ಶಾಸಕರಾಗಿರುವ ಇವರು ಮೂರು ಬಾರಿ ಕಾಂಗ್ರೆಸ್‌ನಿಂದ ಕಣಕ್ಕಿಳಿದು ಗೆಲುವು ಸಾಧಿಸಿದ್ದಾರೆ. ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ವೇಳೆ ರಾಜೀನಾಮೆ ನೀಡಿದ ಕಾಂಗ್ರೆಸ್ ಶಾಸಕರಲ್ಲಿ ಶಿವರಾಮ ಹೆಬ್ಬಾರ್ ಸಹ ಒಬ್ಬರು.

2019ರಲ್ಲಿ ಬಿಜೆಪಿ ಸೇರಿ, ಡಿಸೆಂಬರ್‌ನಲ್ಲಿ ನಡೆದ ಉಪ ಚುನಾವಣೆಯಲ್ಲಿ ಗೆದ್ದು ಯಡಿಯೂರಪ್ಪ ಸಂಪುಟದಲ್ಲಿ ಸಕ್ಕರೆ ಮತ್ತು ಕಾರ್ಮಿಕ ಸಚಿವರಾದರು. ಬಳಿಕ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿಯೂ ಕಾರ್ಮಿಕ ಖಾತೆ ಸಚಿವರಾಗಿದ್ದಾರೆ.

1983ರಲ್ಲಿ ಪ್ರಥಮವಾಗಿ ಯಲ್ಲಾಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಆಯ್ಕೆಗೊಂಡರು. ಕೃಷಿ ಉತ್ಪನ್ನ ಮಾರುಕಟ್ಟೆ ಅಧ್ಯಕ್ಷರಾಗಿ ಹಲವು ವರ್ಷ ಕಾರ್ಯ ನಿರ್ವಹಣೆ ಮಾಡಿದ್ದಾರೆ.

2013ರಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡಿದರು. 58,025 ಮತಗಳನ್ನು ಪಡೆದು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದರು.

2018ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು 2ನೇ ಬಾರಿಗೆ ಶಾಸಕರಾಗಿ ಆಯ್ಕೆಗೊಂಡರು. ಬಳಿಕ ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷರಾಗಿ ಕಾರ್ಯ ನಿರ್ವಹಣೆ ಮಾಡಿದರು.

ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದರು. 2019ರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು ಪುನಃ ಶಾಸಕರಾಗಿ ಆಯ್ಕೆಗೊಂಡರು. ಬಳಿಕ ಯಡಿಯೂರಪ್ಪ ಸಂಪುಟ ಸೇರಿದರು.

ಶಿವರಾಮ್ ಹೆಬ್ಬಾರ್ ಕೃಷಿ ಮತ್ತು ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಕರ್ನಾಟಕ ರಾಜ್ಯ ಸಹಕಾರಿ (ಅಪೆಕ್ಸ್) ಬ್ಯಾಂಕ್‌ನ ನಿರ್ದೇಶಕರಾಗಿ, ಕೆನರಾ ಡಿಸ್ಟ್ರಿಕ್ಟ್ ಸೆಂಟ್ರಲ್ ಕೋ ಆಪರೇಟಿವ್ ಬ್ಯಾಂಕ್ (ಕೆಡಿಸಿಸಿ), ಉತ್ತರ ಕನ್ನಡ ಜಿಲ್ಲೆ ಅಧ್ಯಕ್ಷರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ. ರಾಜಕೀಯ ಕ್ಷೇತ್ರವಲ್ಲದೇ ಉದ್ಯಮಿಯಾಗಿಯೂ ಅವರು ಗುರುತಿಸಿಕೊಂಡಿದ್ದಾರೆ.

ಮತ್ತಷ್ಟು ಓದು

ಅರೆಬೈಲ್ ಶಿವರಾಮ್ ಹೆಬ್ಬಾರ್ ವಯಕ್ತಿಕ ಜೀವನ

ಪೂರ್ಣ ಹೆಸರು ಅರೆಬೈಲ್ ಶಿವರಾಮ್ ಹೆಬ್ಬಾರ್
ಜನ್ಮ ದಿನಾಂಕ 04 Jun 1956 (ವಯಸ್ಸು 70)
ಹುಟ್ಟಿದ ಸ್ಥಳ ಯಲ್ಲಾಪುರ
ಪಕ್ಷದ ಹೆಸರು Bharatiya Janata Party
ವಿದ್ಯಾರ್ಹತೆ Secondary School Leaving Certificate from Kadatoka, Tq. Honnavara
ಉದ್ಯೋಗ ಕೃಷಿ, ಉದ್ಯಮಿ
ತಂದೆಯ ಹೆಸರು ಮಹಾಬಲೇಶ್ವರ ಸಬ್ರಾಯ ಹೆಬ್ಬಾರ್
ತಾಯಿಯ ಹೆಸರು Not Known
ಅವಲಂಬಿತರ ಹೆಸರು ವನಜಾಕ್ಷಿ ಹೆಬ್ಬಾರ್
ಅವಲಂಬಿತರ ಉದ್ಯೋಗ ಕೃಷಿಕರು, ಗೃಹಿಣಿ
ಮಕ್ಕಳು 1 ಪುತ್ರ(ರು) 1 ಪುತ್ರಿ(ಯರು)
ಧರ್ಮ ಹಿಂದು
ಜಾತಿ ಬ್ರಾಹ್ಮಣ
ವೆಬ್‌ಸೈಟ್ shivaramhebbar.com

ಅರೆಬೈಲ್ ಶಿವರಾಮ್ ಹೆಬ್ಬಾರ್ ಒಟ್ಟು ಆಸ್ತಿ

ಒಟ್ಟು ಆಸ್ತಿ
₹18.96 CRORE
ಆಸ್ತಿ
₹21.28 CRORE
ಸಾಲಸೋಲ
₹2.32 CRORE

ಅರೆಬೈಲ್ ಶಿವರಾಮ್ ಹೆಬ್ಬಾರ್ ಕುರಿತು ಆಸಕ್ತಿದಾಯಕ ಸಂಗತಿಗಳು

ಎರಡು ಬಾರಿ ಕಾಂಗ್ರೆಸ್ ಶಾಸಕರಾಗಿ ಆಯ್ಕೆ

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆ

ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಗೆದ್ದು ಸಚಿವರಾದರು

ಅರೆಬೈಲ್ ಶಿವರಾಮ್ ಹೆಬ್ಬಾರ್ ರಾಜಕೀಯ ಟೈಮ್‌ಲೈನ್

  • 2021: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟ ಸೇರ್ಪಡೆ. ಕಾರ್ಮಿಕ ಖಾತೆ ಹೊಣೆ.
  • 2019: ಬಿಜೆಪಿ ಸೇರ್ಪಡೆ, ಡಿಸೆಂಬರ್‌ನಲ್ಲಿ ನಡೆದ ಉಪ ಚುನಾವಣೆಯಲ್ಲಿ ಕಣಕ್ಕೆ, ಗೆಲುವು. ಬಿ. ಎಸ್. ಯಡಿಯೂರಪ್ಪ ಸಂಪುಟ ಸೇರ್ಪಡೆ.
  • 2018: ಕಾಂಗ್ರೆಸ್‌ನಿಂದ 2ನೇ ಬಾರಿಗೆ ಶಾಸಕರಾಗಿ ಆಯ್ಕೆ. ಶಾಸಕ ಸ್ಥಾನಕ್ಕೆ ರಾಜೀನಾಮೆ
  • 2013: ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಶಾಸಕರಾಗಿ ಆಯ್ಕೆ

Disclaimer:The information provided on this page is sourced from various publicly available platforms including https://en.wikipedia.org/, https://sansad.in/ls, https://sansad.in/rs, https://pib.gov.in/, https://affidavit.eci.gov.in/ and the official websites of state assemblies respectively. While we make every effort to maintain the accuracy, comprehensiveness and timeliness of the information provided, we cannot guarantee the absolute accuracy or reliability of the content. The data presented here has been compiled without consideration of the objectives or opinions of individuals who may access it.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+