ಸಿ. ಸಿ. ಪಾಟೀಲ್

ಸಿ. ಸಿ. ಪಾಟೀಲ್
ಗದಗ ಜಿಲ್ಲೆಯ ನರಗುಂದ ಕ್ಷೇತ್ರದ ಬಿಜೆಪಿ ಶಾಸಕ ಸಿ. ಸಿ.
By Rashmi | Thursday, September 1, 2022, 12:03:40 PM [IST]

ಸಿ. ಸಿ. ಪಾಟೀಲ್ ಜೀವನ ಚರಿತ್ರೆ

ಗದಗ ಜಿಲ್ಲೆಯ ನರಗುಂದ ಕ್ಷೇತ್ರದ ಬಿಜೆಪಿ ಶಾಸಕ ಸಿ. ಸಿ. ಪಾಟೀಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಲೋಕೋಪಯೋಗಿ ಸಚಿವರು. ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಪರಮಾಪ್ತ ಶಿಷ್ಯರು.

ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಸೇರಿದ ಸಿ. ಸಿ. ಪಾಟೀಲ ಪೂರ್ಣ ಹೆಸರು ಚಂದ್ರಕಾಂತಗೌಡ ಚನ್ನಪ್ಪಗೌಡ ಪಾಟೀಲ. ಪಿಯುಸಿ ವ್ಯಾಸಂಗ ಮಾಡಿರುವ ಇವರು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

2018ರ ಚುನಾವಣೆಯಲ್ಲಿ ಸಿ. ಸಿ. ಪಾಟೀಲ 73,045 ಮತಗಳನ್ನು ಪಡೆದು ಕಾಂಗ್ರೆಸ್‌ನ ಬಿ. ಆರ್. ಯಾವಗಲ್ ಸೋಲಿಸಿ ಶಾಸಕರಾಗಿ ಆಯ್ಕೆಯಾದರು. 2019ರಲ್ಲಿ ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾದಾಗ ಸಂಪುಟ ಸೇರಿದರು. ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವರಾಗಿದ್ದರು.

2004 ರಿಂದ 2007, 2008 ರಿಂದ 2013ರ ತನಕ ಸಹ ಸಿ. ಸಿ. ಪಾಟೀಲ್ ಶಾಸಕರಾಗಿದ್ದರು. 2008ರಲ್ಲಿ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿಯಾಗಿದ್ದರು. 2007ರಲ್ಲಿ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ, 2016ರಲ್ಲಿ ಗದಗ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದಾರೆ.

ಸಿ. ಸಿ. ಪಾಟೀಲ್ ಮುಖ್ಯಮಂತ್ರಿ ಡಿ. ವಿ. ಸದಾನಂದ ಗೌಡ ಸಂಪುಟದಲ್ಲಿ 2010 ರಿಂದ 2012ರ ತನಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾಗಿದ್ದರು.

ಗದಗ ಜಿಲ್ಲೆಯಲ್ಲಿ ಸಂಘ ಪರಿವಾರದೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಪಕ್ಷದ ಕಾರ್ಯಕರ್ತರ ಜೊತೆ ಸಹ ಉತ್ತಮ ಒಡನಾಟ ಹೊಂದಿದ್ದಾರೆ. ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮೀಸಲಾತಿ ನೀಡಬೇಕು ಎಂದು ಹೋರಾಟ ಆರಂಭವಾಯಿತು.

ಇದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸರ್ಕಾರಕ್ಕೆ ಹಿನ್ನಡೆ ಉಂಟು ಮಾಡಿತ್ತು. ಆಗ ಸಚಿವ ಮುರುಗೇಶ ನಿರಾಣಿ ಮತ್ತು ಸಿ. ಸಿ. ಪಾಟೀಲ ಸರ್ಕಾರ ಮತ್ತು ಹೋರಾಟ ನಡೆಸುತ್ತಿರುವ ನಡುವಿನ ಕೊಂಡಿಯಾಗಿ ಕಾರ್ಯ ನಿರ್ವಹಣೆ ಮಾಡಿದರು.

1955ರಲ್ಲಿ ಬೆಳಗಾವಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಚುನಾಯಿತರಾಗಿ ರಾಜಕೀಯ ಆರಂಭಿಸಿದರು. ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾದರು. ಸವದತ್ತಿಯ ಮಲಪ್ರಭಾ ಸಹಕಾರಿ ನೂಲಿನ ಗಿರಣಿಯ ನಿರ್ದೇಶಕ ಹಾಗೂ ಅಧ್ಯಕ್ಷರಾಗಿ ಕೆಲಸ ಮಾಡಿದರು.

ಧಾರವಾಡದ ನವಲಗುಂದ ತಾಲೂಕಿನ ರೇಣುಕಾದೇವಿ ಮೆಕ್ಕೆಜೋಳ ಸಂಸ್ಕರಣಾ ಘಟಕದ ಸಂಸ್ಥಾಪಕ ಅಧ್ಯಕ್ಷನಾಗಿ 6 ವರ್ಷ ಕೆಲಸ ಮಾಡಿದರು. 2004ರಲ್ಲಿ ಮೊದಲ ಬಾರಿಗೆ ನರಗುಂದ ಕ್ಷೇತ್ರದಿಂದ ಬಿಜೆಪಿಯಿಂದ ಮೊದಲ ಬಾರಿಗೆ ಸ್ಪರ್ಧಿಸಿ ವಿಧಾನಸಭೆ ಪ್ರವೇಶ ಮಾಡಿದರು.

ಮತ್ತಷ್ಟು ಓದು

ಸಿ. ಸಿ. ಪಾಟೀಲ್ ವಯಕ್ತಿಕ ಜೀವನ

ಪೂರ್ಣ ಹೆಸರು ಸಿ. ಸಿ. ಪಾಟೀಲ್
ಜನ್ಮ ದಿನಾಂಕ 22 Oct 1958 (ವಯಸ್ಸು 67)
ಹುಟ್ಟಿದ ಸ್ಥಳ ಗದಗ
ಪಕ್ಷದ ಹೆಸರು Bharatiya Janata Party
ವಿದ್ಯಾರ್ಹತೆ 10th Pass
ಉದ್ಯೋಗ ಕೃಷಿ, ಉದ್ಯಮಿ
ತಂದೆಯ ಹೆಸರು ಚನ್ನಪ್ಪ ಗೌಡ ಪಾಟೀಲ
ತಾಯಿಯ ಹೆಸರು ಮಾಹಿತಿ ಇಲ್ಲ
ಅವಲಂಬಿತರ ಹೆಸರು Not Known
ಅವಲಂಬಿತರ ಉದ್ಯೋಗ ಗೃಹಿಣಿ
ಧರ್ಮ ಹಿಂದು
ಜಾತಿ ಲಿಂಗಾಯತ ಪಂಚಮಸಾಲಿ
ವೆಬ್‌ಸೈಟ್ NA

ಸಿ. ಸಿ. ಪಾಟೀಲ್ ಒಟ್ಟು ಆಸ್ತಿ

ಒಟ್ಟು ಆಸ್ತಿ
₹12.7 CRORE
ಆಸ್ತಿ
₹16.81 CRORE
ಸಾಲಸೋಲ
₹4.11 CRORE

ಸಿ. ಸಿ. ಪಾಟೀಲ್ ಕುರಿತು ಆಸಕ್ತಿದಾಯಕ ಸಂಗತಿಗಳು

ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ರಾಜಕೀಯ ಆರಂಭಿಸಿದವರು ಸಚಿವ ಸ್ಥಾನದ ತನಕ ಬೆಳೆದರು

ಆರ್‌ಎಸ್‌ಎಸ್‌, ಬಿಜೆಪಿ ಕಾರ್ಯಕರ್ತರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ

ಕೋವಿಡ್ ಸಮಯದಲ್ಲಿ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಣೆ, ಆಕ್ಸಿಜನ್ ಪ್ಲಾಂಟ್‌ಗಳ ನಿರ್ಮಾಣ

ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮೀಸಲಾತಿ ನೀಡಬೇಕು ಎಂಬ ಹೋರಾಟದಲ್ಲಿ ಸರ್ಕಾರ ಹೋರಾಟಗಾರರ ನಡುವಿನ ವ್ಯಕ್ತಿಯಾಗಿ ಕೆಲಸ ಮಾಡಿದರು

ಸಿ. ಸಿ. ಪಾಟೀಲ್ ರಾಜಕೀಯ ಟೈಮ್‌ಲೈನ್

  • 2021 : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟ ಸೇರ್ಪಡೆ
  • 2018 : ಚುನಾವಣೆಯಲ್ಲಿ ಮತ್ತೆ ಗೆಲುವು. 2019ರಲ್ಲಿ ಬಿ. ಎಸ್. ಯಡಿಯೂರಪ್ಪ ಸಂಪುಟ ಸೇರ್ಪಡೆ
  • 2016 : ಗದಗ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಣೆ
  • 2010 : ಡಿ. ವಿ. ಸದಾನಂದ ಗೌಡ ಸಂಪುಟ ಸೇರ್ಪಡೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ
  • 2008 : ಚುನಾವಣೆಯಲ್ಲಿ ಮತ್ತೆ ಗೆಲುವು, ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿಯಾಗಿ ನೇಮಕ
  • 2007 : ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ
  • 2004 : ನರಗುಂದದಿಂದ ಮೊದಲ ಬಾರಿಗೆ ವಿಧಾನಸಭೆ ಚುನಾವಣೆಗೆ ಸ್ಪರ್ಧೆ, ಗೆಲುವು
  • 1955 : ಬೆಳಗಾವಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಆಯ್ಕೆ. ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ನೇಮಕ

Disclaimer:The information provided on this page is sourced from various publicly available platforms including https://en.wikipedia.org/, https://sansad.in/ls, https://sansad.in/rs, https://pib.gov.in/, https://affidavit.eci.gov.in/ and the official websites of state assemblies respectively. While we make every effort to maintain the accuracy, comprehensiveness and timeliness of the information provided, we cannot guarantee the absolute accuracy or reliability of the content. The data presented here has been compiled without consideration of the objectives or opinions of individuals who may access it.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+