Get Updates
Get notified of breaking news, exclusive insights, and must-see stories!

ಡಾ. ಸಿ. ಎನ್. ಅಶ್ವಥ್ ನಾರಾಯಣ

ಡಾ. ಸಿ. ಎನ್. ಅಶ್ವಥ್ ನಾರಾಯಣ
ಬೆಂಗಳೂರಿನ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಗೆಲುವು ಸಾಧಿಸಿರುವ ಡಾ. ಸಿ.
By Moumi Majumdar | Monday, August 22, 2022, 09:54:49 AM [IST]

ಡಾ. ಸಿ. ಎನ್. ಅಶ್ವಥ್ ನಾರಾಯಣ ಜೀವನ ಚರಿತ್ರೆ

ಬೆಂಗಳೂರಿನ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಗೆಲುವು ಸಾಧಿಸಿರುವ ಡಾ. ಸಿ. ಎನ್. ಅಶ್ವಥ್ ನಾರಾಯಣ. 2019ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟ ಸೇರುವ ಮೂಲಕ ಸಚಿವರಾದರು. ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿಯೂ ಅವರು ಸಚಿವರಾಗಿದ್ದಾರೆ.

ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕ ಅಶ್ವಥ್ ನಾರಾಯಣ ಎಂಬಿಬಿಎಸ್ ಪದವೀಧರರು. ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗುವ ಮೂಲಕ ಮತ್ತು ಕಿರಿಯ ವೈದ್ಯರ ಸಂಘದ ಅಧ್ಯಕ್ಷರಾಗುವ ಮೂಲಕ ರಾಜಕೀಯದಲ್ಲಿ ತೊಡಗಿಸಿಕೊಂಡರು.

ರಾಜೀವ್ ಗಾಂಧಿ ವಿಶ್ವವಿದ್ಯಾಲಯ ಮತ್ತು ಆರೋಗ್ಯ ವಿಜ್ಞಾನ ಮತ್ತು ಬೆಂಗಳೂರು ವಿಶ್ವವಿದ್ಯಾಲಯದ ಸೆನೆಟ್ ಮತ್ತು ಸಿಂಡಿಕೇಟ್ ಸದಸ್ಯರಾಗಿ ನೇಮಿಸಲಾಯಿತು. ಅಶ್ವಥ್ ನಾರಾಯಣ 2004ರಲ್ಲಿ ಬಿಜೆಪಿಗೆ ಸೇರಿದರು.

2004ರ ವಿಧಾನಸಭಾ ಚುನಾವಣೆಯಲ್ಲಿ ಮಲ್ಲೇಶ್ವರಂ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದರು. 37,252 ಮತಗಳನ್ನು ಪಡೆದು ಕಾಂಗ್ರೆಸ್‌ ಎಂ. ಆರ್. ಸೀತಾರಾಮ್ ವಿರುದ್ಧ ಸೋಲು ಕಂಡರು.

2008ರ ಚುನಾವಣೆಯಲ್ಲಿ 53,794 ಮತಗಳನ್ನು ಪಡೆದು ಮೊದಲ ಬಾರಿಗೆ ಗೆಲುವು ಸಾಧಿಸಿದರು. ಬಳಿಕ 2013 ಮತ್ತು 2018ರ ಚುನಾವಣೆಯಲ್ಲಿಯೂ ಗೆಲುವು ಸಾಧಿಸುವ ಮೂಲಕ ಹ್ಯಾಟ್ರಿಕ್ ಗೆಲವು ಸಾಧಿಸಿದರು.

2019ರಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡು ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದತು. ಆಗ ಬಿ. ಎಸ್. ಯಡಿಯೂರಪ್ಪ ಸಂಪುಟ ಸೇರುವ ಮೂಲಕ ಅಶ್ವಥ್ ನಾರಾಯಣ ಮೊದಲ ಬಾರಿಗೆ ಸಚಿವರಾದರು. ಬಳಿಕ 2021ರಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಿ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದಾಗಲೂ ಅಶ್ವಥ್ ನಾರಾಯಣರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಯಿತು.

ಮತ್ತಷ್ಟು ಓದು

ಡಾ. ಸಿ. ಎನ್. ಅಶ್ವಥ್ ನಾರಾಯಣ ವಯಕ್ತಿಕ ಜೀವನ

ಪೂರ್ಣ ಹೆಸರು ಡಾ. ಸಿ. ಎನ್. ಅಶ್ವಥ್ ನಾರಾಯಣ
ಜನ್ಮ ದಿನಾಂಕ 02 Feb 1969 (ವಯಸ್ಸು 57)
ಹುಟ್ಟಿದ ಸ್ಥಳ ಬೆಂಗಳೂರು, ಕರ್ನಾಟಕ
ಪಕ್ಷದ ಹೆಸರು Bharatiya Janta Party
ವಿದ್ಯಾರ್ಹತೆ
ಉದ್ಯೋಗ ವೈದ್ಯ, ರಾಜಕಾರಣಿ
ತಂದೆಯ ಹೆಸರು ಟಿ ಕೆ ನಾರಾಯಣಪ್ಪ
ತಾಯಿಯ ಹೆಸರು ಪದ್ಮಮ್ಮ
ಅವಲಂಬಿತರ ಹೆಸರು Shruthi
ಅವಲಂಬಿತರ ಉದ್ಯೋಗ Business, Social Work
ಮಕ್ಕಳು 1 ಪುತ್ರ(ರು) 1 ಪುತ್ರಿ(ಯರು)
ಧರ್ಮ ಹಿಂದು
ವೆಬ್‌ಸೈಟ್ https://drashwath.in/

ಡಾ. ಸಿ. ಎನ್. ಅಶ್ವಥ್ ನಾರಾಯಣ ಒಟ್ಟು ಆಸ್ತಿ

ಒಟ್ಟು ಆಸ್ತಿ
₹17.13 CRORE
ಆಸ್ತಿ
₹17.53 CRORE
ಸಾಲಸೋಲ
₹40.43 LAKHS

ಡಾ. ಸಿ. ಎನ್. ಅಶ್ವಥ್ ನಾರಾಯಣ ಕುರಿತು ಆಸಕ್ತಿದಾಯಕ ಸಂಗತಿಗಳು

2008, 2013 ಮತ್ತು 2018ರ ಚುನಾವಣೆಯಲ್ಲಿ ಬೆಂಗಳೂರಿನ ಮಲ್ಲೇಶ್ವರಂ ಕ್ಷೇತ್ರದಲ್ಲಿ ಜಯಗಳಿಸುವ ಮೂಲಕ ಅಶ್ವಥ್ ನಾರಾಯಣ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ.

ಡಾ. ಸಿ. ಎನ್. ಅಶ್ವಥ್ ನಾರಾಯಣ ರಾಜಕೀಯ ಟೈಮ್‌ಲೈನ್

  • 2021 : ಆಗಸ್ಟ್ 4ರಂದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟಕ್ಕೆ ಸೇರ್ಪಡೆಯಾದರು. ಉನ್ನತ ಶಿಕ್ಷಣ, ಐಟಿ & ಬಿಟಿ ಖಾತೆಯನ್ನು ಅವರಿಗೆ ನೀಡಲಾಗಿದೆ.

ಹಿಂದಿನ ಇತಿಹಾಸ

  • 2019: ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾದ ಬಳಿಕ ಅಶ್ವಥ್ ನಾರಾಯಣ ಸಚಿವರಾದರು. ಉನ್ನತ ಶಿಕ್ಷಣ, ಐಟಿ-ಬಿಟಿ, ವಿಜ್ಞಾನ, ತಂತ್ರಜ್ಞಾನ ಖಾತೆಯನ್ನು ಅವರಿಗೆ ನೀಡಲಾಯಿತು.
  • 2018: ಬೆಂಗಳೂರಿನ ಮಲ್ಲೇಶ್ವರಂ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿದ್ದ ಅಶ್ವಥ್ ನಾರಾಯಣ 64,270 ಮತಗಳನ್ನು ಪಡೆದು 3ನೇ ಬಾರಿಗೆ ಗೆಲವು ಸಾಧಿಸಿದರು.

Disclaimer:The information provided on this page is sourced from various publicly available platforms including https://en.wikipedia.org/, https://sansad.in/ls, https://sansad.in/rs, https://pib.gov.in/, https://affidavit.eci.gov.in/ and the official websites of state assemblies respectively. While we make every effort to maintain the accuracy, comprehensiveness and timeliness of the information provided, we cannot guarantee the absolute accuracy or reliability of the content. The data presented here has been compiled without consideration of the objectives or opinions of individuals who may access it.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+