• search
 • Live TV
ಮುಖ್ಯಪುಟ
 » 
ರಾಜಕಾರಣಿಗಳು
 » 
ಡಿ.ಕೆ. ಶಿವಕುಮಾರ್‌

ಡಿ.ಕೆ. ಶಿವಕುಮಾರ್‌

ಜೀವನ ಚರಿತ್ರೆ

ಡಿ. ಕೆ. ಶಿವಕುಮಾರ್ ರಾಮನಗರ ಜಿಲ್ಲೆಯ ಕನಕಪುರ ಕ್ಷೇತ್ರದ ಶಾಸಕರು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರು. ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕ ಕಾಂಗ್ರೆಸ್ ಹೈಕಮಾಂಡ್ ಜೊತೆ ಸಹ ಉತ್ತಮ ಬಾಂಧವ್ಯ ಹೊಂದಿದ್ದಾರೆ.

ಕನಕಪುರ ತಾಲೂಕು ದೊಡ್ಡಆಲಹಳ್ಳಿ ಗ್ರಾಮದ ಕೆಂಪೇಗೌಡ ಹಾಗೂ ಗೌರಮ್ಮ ದಂಪತಿಯ ಪುತ್ರ. ಸಹೋದರ ಡಿ. ಕೆ. ಸುರೇಶ್ ಸಹ ರಾಜಕೀಯದಲ್ಲಿ ಸಕ್ರಿಯರಾಗಿದ್ದು, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದರು.

18ನೇ ವಯಸ್ಸಿನಲ್ಲಿಯೇ ಎನ್‌ಎಸ್‌ಯುಐ ಸೇರಿದ ಡಿ. ಕೆ. ಶಿವಕುಮಾರ್ 1981-83ರ ತನಕ ಬೆಂಗಳೂರು ಜಿಲ್ಲಾ ಘಟಕದ ಅಧ್ಯಕ್ಷರಾಗಿದ್ದರು. ಬೆಂಗಳೂರಿನ ಆರ್. ಸಿ. ಕಾಲೇಜಿನಲ್ಲಿ ಓದುವಾಗ ಯುವ ಕಾಂಗ್ರೆಸ್ ರಾಜ್ಯ ಘಟಕದ ಕಾರ್ಯದರ್ಶಿಯಾಗಿ ಆಯ್ಕೆಗೊಂಡರು.

1985ರಲ್ಲಿ ಮೊದಲ ಬಾರಿಗೆ ಸಾತನೂರು ಕ್ಷೇತ್ರದಲ್ಲಿ ಜೆಡಿಎಸ್‌ನ ಎಚ್. ಡಿ. ದೇವೇಗೌಡರ ವಿರುದ್ಧ ಚುನಾವಣಾ ಕಣಕ್ಕಿಳಿದರು. ಪ್ರಬಲ ಪೈಪೋಟಿ ನೀಡಿದ ಡಿ. ಕೆ. ಶಿವಕುಮಾರ್ ದೇವೇಗೌಡರು ಪ್ರಯಾಸದ ಗೆಲುವು ಪಡೆಯುವಂತೆ ಮಾಡಿದರು.

1987ರಲ್ಲಿ ಸಾತನೂರು ಕ್ಷೇತ್ರದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾದರು. 1989ರಲ್ಲಿ ಸಾತನೂರು ಕ್ಷೇತ್ರದಿಂದ ವಿಧಾನಸಭೆ ಚುನಾವಣೆ ಗೆಲ್ಲುವ ಮೂಲಕ ಕ್ಷೇತ್ರದಲ್ಲಿದ್ದ ಜೆಡಿಎಸ್‌ ಪ್ರಭಾವನ್ನು ಕಡಿಮೆಗೊಳಿಸಿದರು.

1991ರಲ್ಲಿ ಎಸ್. ಬಂಗಾರಪ್ಪ ಮುಖ್ಯಮಂತ್ರಿಯಾಗಿ ಆಯ್ಕೆಯಾಗುವಲ್ಲಿ ಡಿ. ಕೆ. ಶಿವಕುಮಾರ್ ಮಹತ್ವದ ಪಾತ್ರವಹಿಸಿದ್ದರು. ಬಂಗಾರಪ್ಪ ಸಂಪುಟದಲ್ಲಿ ಬಂಧಿಖಾನೆ ಖಾತೆ ಹೊಣೆಯನ್ನು ಅವರಿಗೆ ನೀಡಲಾಯಿತು.

1994ರ ಚುನಾವಣೆಯಲ್ಲಿ ಕೆಲವು ನಾಯಕರ ಪಿತೂರಿ ಕಾರಣ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿತು. ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು ಜಯಗಳಿಸಿದರು. 1999ರ ಚುನಾವಣೆಯಲ್ಲಿ ಸಾತನೂರು ಕ್ಷೇತ್ರದಿಂದ ಆಯ್ಕೆಗೊಂಡರು. ಎಸ್. ಎಂ. ಕೃಷ್ಣ ಸಂಪುಟದಲ್ಲಿ ಸಹಕಾರ ಸಚಿವರಾದರು.

2002ರಲ್ಲಿ ನಗರಾಭಿವೃದ್ಧಿ ಖಾತೆ ಸಚಿವರಾದರು. 2008ರಲ್ಲಿ ಕ್ಷೇತ್ರ ಪುನರ್ ವಿಂಗಡನೆ ಬಳಿಕ ಸಾತನೂರು ಕ್ಷೇತ್ರ ಇಲ್ಲವಾಯಿತು. ಆಗ ಕನಕಪುರ ಕ್ಷೇತ್ರಕ್ಕೆ ಬಂದರು. 2008, 2013 ಮತ್ತು 2018ರ ಚುನಾವಣೆಯಲ್ಲಿ ಕನಕಪುರದಿಂದ ಗೆಲುವು ಸಾಧಿಸಿದ್ದಾರೆ.

2013ರ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಸಿದ್ದರಾಮಯ್ಯ ಮುಖ್ಯಮಂತ್ರಿಯಾದರೂ ಡಿ. ಕೆ. ಶಿವಕುಮಾರ್‌ಗೆ ಸುಲಭವಾಗಿ ಸಚಿವ ಸ್ಥಾನ ಸಿಗಲಿಲ್ಲ. ಅಂತಿಮವಾಗಿ ಹೈಕಮಾಂಡ್ ಒಪ್ಪಿದ ಮೇಲೆ ಸಂಪುಟ ಸೇರಿ ಇಂಧನ ಖಾತೆ ವಹಿಸಿಕೊಂಡರು. ಎಚ್. ಡಿ. ಕುಮಾರಸ್ವಾಮಿ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಜಲಸಂಪನ್ಮೂಲ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದರು.

ಎಚ್. ಡಿ. ದೇವೇಗೌಡ ಮತ್ತು ಅವರ ಕುಟುಂಬದ ವಿರುದ್ಧ ರಾಜಕೀಯ ವೈಷಮ್ಯ ಹೊಂದಿದ್ದಾರೆ. 2006ರ ಲೋಕಸಭಾ ಚುನಾವಣೆಯಲ್ಲಿ ದೇವೇಗೌಡರ ವಿರುದ್ಧ ತೇಜಸ್ವಿನಿ ಗೌಡ ಕಣಕ್ಕಿಳಿಸಿ ಗೆಲ್ಲಿಸಿದ್ದು ಡಿ. ಕೆ. ಶಿವಕುಮಾರ್.

ಸುಮಾರು 35 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠರಾಗಿರುವ ಡಿ. ಕೆ. ಶಿವಕುಮಾರ್‌ ಪಕ್ಷ ವಹಿಸಿದ ಎಲ್ಲಾ ಕೆಲಸಗಳನ್ನು ಶ್ರದ್ಧೆಯಿಂದ ಮಾಡುತ್ತಾರೆ. 2020 ಮಾರ್ಚ್ 11ರಂದು ಅವರನ್ನು ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.

ಮಹಾರಾಷ್ಟ್ರದಲ್ಲಿ ವಿಲಾಸ್ ರಾವ್ ದೇಶ್‌ಮುಖ್ ಸರ್ಕಾರ ಅಲ್ಪಮೊತ್ತಕ್ಕೆ ಕುಸಿಯುವ ಭೀತಿ ಎದುರಾದಾಗ ಶಾಸಕರನ್ನು ರಕ್ಷಣೆ ಮಾಡಿ ಬೆಂಗಳೂರಿಗೆ ಕರೆದುಕೊಂಡು ಬಂದು ಕುದುರೆ ವ್ಯಾಪಾರ ನಡೆಯದಂತೆ ನೋಡಿಕೊಂಡರು.

2017ರಲ್ಲಿ ಗುಜರಾತ್ ವಿಧಾನಸಭೆಯಿಂದ ರಾಜ್ಯಸಭೆ ಚುನಾವಣೆ ನಡೆಯುವಾಗ ಪಕ್ಷದ ಸೂಚನೆಯಂತೆ ಪಕ್ಷದ ಶಾಸಕರನ್ನು ಬೆಂಗಳೂರಿಗೆ ಕರೆದುಕೊಂಡು ಬಂದು ಕುದುರೆ ವ್ಯಾಪಾರ ತಪ್ಪಿಸಿದರು.

ಜಾರಿ ನಿರ್ದೇಶನಾಲಯದ ದಾಳಿ ಬಳಿಕ ಡಿ. ಕೆ. ಶಿವಕುಮಾರ್ ಬಂಧನವಾಯಿತು. ದೆಹಲಿಯ ತಿಹಾರ್ ಜೈಲಿನಲ್ಲಿದ್ದ ಅವರನ್ನು ನೋಡಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆಗಮಿಸಿದ್ದರು. ಅಷ್ಟರ ಮಟ್ಟಿಗೆ ಡಿ. ಕೆ. ಶಿವಕುಮಾರ್ ಹೈಕಮಾಂಡ್‌ಗೆ ನಿಷ್ಠರು ಮತ್ತು ನಂಬಿಕಸ್ಥರು.

ವಯಕ್ತಿಕ ಜೀವನ

ಪೂರ್ಣ ಹೆಸರು ಡಿ.ಕೆ. ಶಿವಕುಮಾರ್‌
ಜನ್ಮ ದಿನಾಂಕ 15 May 1962 (ವಯಸ್ಸು 60)
ಹುಟ್ಟಿದ ಸ್ಥಳ ದೊಡ್ಡಾಅಲಹಳ್ಳಿ
ಪಕ್ಷದ ಹೆಸರು Indian National Congress
ವಿದ್ಯಾರ್ಹತೆ Post Graduate
ಉದ್ಯೋಗ ರಾಜಕಾರಣಿ, ಉದ್ಯಮಿ
ತಂದೆಯ ಹೆಸರು ಕೆಂಪೇಗೌಡ
ತಾಯಿಯ ಹೆಸರು ಗೌರಮ್ಮ
ಅವಲಂಬಿತರ ಹೆಸರು ಉಷಾ ಶಿವಕುಮಾರ್
ಅವಲಂಬಿತರ ಉದ್ಯೋಗ ಗೃಹಿಣಿ
ಮಕ್ಕಳು 1 ಪುತ್ರ(ರು) 2 ಪುತ್ರಿ(ಯರು)
ಒಕ್ಕಲಿಗ

ವಿಳಾಸ

ಖಾಯಂ ವಿಳಾಸ 127, ದೊಡ್ಡಅಲಹಳ್ಳಿ, ಕನಕಪುರ ತಾಲ್ಲೂಕು, ರಾಮನಗರ ಜಿಲ್ಲೆ, ಕರ್ನಾಟಕ- 562126
ಪ್ರಸ್ತುತ ವಿಳಾಸ 127, ದೊಡ್ಡಅಲಹಳ್ಳಿ, ಕನಕಪುರ ತಾಲ್ಲೂಕು, ರಾಮನಗರ ಜಿಲ್ಲೆ, ಕರ್ನಾಟಕ- 562126
ಸಂಪರ್ಕ ಸಂಖ್ಯೆ 9845156524
ಈ ಮೇಲ್ dkshivakumar1@gmail.com
ವೆಬ್‌ಸೈಟ್ https://www.dkshivakumar.com/
ಸಾಮಾಜಿಕ ಜಾಲತಾಣದ ವಿಳಾಸ

ಆಸಕ್ತಿಕರ ಅಂಶಗಳು

ಕರ್ನಾಟಕ ಕಾಂಗ್ರೆಸ್‌ನ ಪ್ರಭಾವಿ ನಾಯಕ. ರಾಜೀವ್ ಯುವ ಶಕ್ತಿ ಸಂಘನೆಗಳು ರಾಜ್ಯದಲ್ಲಿ ಸ್ಥಾಪನೆಯಾಗುವಲ್ಲಿ ಮಹತ್ವದ ಪಾತ್ರವಹಿಸಿದ್ದಾರೆ.

ನ್ಯಾಷನಲ್ ಎಜುಕೇಶನ್ ಫೌಂಡೇಷನ್‌ನ ಸ್ಥಾಪಕ ಅಧ್ಯಕ್ಷರು. ಇಂಜಿನಿಯರಿಂಗ್, ನರ್ಸಿಂಗ್ ಕಾಲೇಜುಗಳನ್ನು ನಡೆಸುತ್ತಿದ್ದಾರೆ.

ಡಿಕೆಎಸ್ ಚಾರಿಟಬಲ್ ಟ್ರಸ್ಟ್ ಮೂಲಕ ಹಳ್ಳಿಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸುತ್ತಿದ್ದಾರೆ.

ರಾಜಕೀಯ ಕಾಲಾನುಕ್ರಮ

 • 2020
  ಮಾರ್ಚ್ 11ರಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿ ನೇಮಕ. ಕೆಪಿಸಿಸಿಯ 23ನೇ ಅಧ್ಯಕ್ಷರು.
 • 2018
  ಮೈತ್ರಿ ಸರ್ಕಾರದಲ್ಲಿ ಎಚ್. ಡಿ. ಕುಮಾರಸ್ವಾಮಿ ಸಂಪುಟದಲ್ಲಿ ಜಲಸಂಪನ್ಮೂಲ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು.
 • 2013
  ಚುನಾವಣೆಯಲ್ಲಿ ಗೆದ್ದ ಬಳಿಕ ಸಿದ್ದರಾಮಯ್ಯ ಸಂಪುಟದಲ್ಲಿ ಇಂಧನ ಖಾತೆ ಸಚಿವರು.
 • 2008
  ಕ್ಷೇತ್ರ ಪುನರ್ ವಿಂಗಡನೆ ಬಳಿಕ ಕನಕಪುರದಿಂದ ಸ್ಪರ್ಧೆ ಗೆಲುವು
 • 1999
  ಚುನಾವಣೆಯಲ್ಲಿ ಸಾತನೂರು ಕ್ಷೇತ್ರದಿಂದ ಮತ್ತೆ ಆಯ್ಕೆ. ಎಸ್. ಎಂ. ಕೃಷ್ಣ ಸಂಪುಟದಲ್ಲಿ ಸಹಕಾರ ಖಾತೆ ಸಚಿವ. ಬಳಿಕ ನಗರಾಭಿವೃದ್ಧಿ ಖಾತೆ ಹೊಣೆ.
 • 1994
  ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಕಾರಣ ಪಕ್ಷೇತರ ಅಭ್ಯರ್ಥಿಯಾಗಿ ಸಾತನೂರು ಕ್ಷೇತ್ರದಲ್ಲಿ ಕಣಕ್ಕಿಳಿದು ಜಯ.
 • 1991
  ಎಸ್. ಬಂಗಾರಪ್ಪ ಸಂಪುಟದಲ್ಲಿ ಬಂಧಿಖಾನೆ ಖಾತೆ ಸಚಿವರು
 • 1989
  ಸಾತನೂರು ಕ್ಷೇತ್ರದಿಂದ ವಿಧಾನಸಭೆ ಚುನಾವಣೆ ಗೆಲ್ಲುವ ಮೂಲಕ ಮೊದಲ ಬಾರಿಗೆ ಆಯ್ಕೆ
 • 1987
  ಸಾತನೂರು ಕ್ಷೇತ್ರದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಆಯ್ಕೆ
 • 1985
  ಮೊದಲ ಬಾರಿಗೆ ಸಾತನೂರು ಕ್ಷೇತ್ರದಲ್ಲಿ ಜೆಡಿಎಸ್‌ನ ಎಚ್. ಡಿ. ದೇವೇಗೌಡರ ವಿರುದ್ಧ ಸ್ಪರ್ಧೆ, ಸೋಲು

ಹಿಂದಿನ ಇತಿಹಾಸ

 • 80 ರ ದಶಕದ ಆರಂಭದಲ್ಲಿ
  ಬೆಂಗಳೂರಿನ ಜಗದ್ಗುರು ರೇಣುಕಾಚಾರ್ಯ ಕಾಲೇಜಿನಿಂದ ಬಿಎ ಪದವಿ ಪಡೆದರು. ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ರಾಜ್ಯಶಾಸ್ತ್ರದಲ್ಲಿ ಎಂವಿ ಸ್ನಾತಕೋತ್ತರ ಪದವಿ ಪಡೆದರು.
 • 70 ರ ದಶಕದ ಆರಂಭದಲ್ಲಿ
  ಬೆಂಗಳೂರಿನ ವಿದ್ಯಾವರ್ಧಕ ಸಂಘದಲ್ಲಿ ಎಸ್ಸೆಸ್ಸೆಲ್ಸಿ ಪಾಸು ಮಾಡಿದರು. ಬೆಂಗಳೂರಿನ ಹೈದರಾಬಾದ್ ಕರ್ನಾಟಕ ಎಜ್ಯುಕೇಶನ್ ಸೊಸೈಟಿಯಲ್ಲಿ ಪಿಯುಸಿ ಮುಗಿಸಿದರು.

.
ಒಟ್ಟು ಆಸ್ತಿ611.75 CRORE
ಆಸ್ತಿ840.02 CRORE
ಸಾಲಸೋಲ228.27 CRORE

Disclaimer: The information relating to the candidate is an archive based on the self-declared affidavit filed at the time of elections. The current status may be different. For the latest on the candidate kindly refer to the affidavit filed by the candidate with the Election Commission of India in the recent election.

ಆಲ್ಬಂ