ದಿನೇಶ್ ಗುಂಡೂರಾವ್ ಕರ್ನಾಟಕ ಕಾಂಗ್ರೆಸ್‌ನ ನಾಯಕ. ಬೆಂಗಳೂರು ನಗರದ ಗಾಂಧಿನಗರ ಕ್ಷೇತ್ರದ ಶಾಸಕರು. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಆರ್. ಗುಂಡೂರಾವ್ ಅವರ ಪುತ್ರ.
ಇಂಜಿನಿಯರಿಂಗ್ ಪದವೀಧರರಾದ ದಿನೇಶ್ ಗುಂಡೂರಾವ್ ಪ್ರದೇಶ ಕಾಂಗ್ರೆಸ್ ಸಮಿತಿಯ ಸದಸ್ಯರಾಗಿ ರಾಜಕೀಯ ಜೀವನ ಆರಂಭಿಸಿದರು. ಯವ ಕಾಂಗ್ರೆಸ್ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ.
1999ರಲ್ಲಿ ಮೊದಲ ಬಾರಿಗೆ ದಿನೇಶ್ ಗುಂಡೂರಾವ್ ಗಾಂಧಿನಗರ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದರು. 15,634 ಮತಗಳನ್ನು ಪಡೆದು ಜಯಗಳಿಸಿ ವಿಧಾನಸಭೆ ಪ್ರವೇಶಿಸಿದರು.
2004, 2008, 2013 ಮತ್ತು 2018ರ ಚುನಾವಣೆಯಲ್ಲಿಯೂ ದಿನೇಶ್ ಗುಂಡೂರಾವ್ ಗಾಂಧಿನಗರ ಕ್ಷೇತ್ರದಿಂದ ಜಯಗಳಿಸಿದ್ದಾರೆ. 2013ರ ಚುನಾವಣೆಯಲ್ಲಿ ಗೆದ್ದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವರಾಗಿದ್ದರು. ಇದೇ ಸಂದರ್ಭದಲ್ಲಿ ಕರ್ನಾಟಕದಲ್ಲಿ ಅನ್ನಭಾಗ್ಯ ಯೋಜನೆ ಜಾರಿಗೊಳಿಸಲಾಯಿತು.
ಬ್ರಾಹ್ಮಣ ಸಮುದಾಯಕ್ಕೆ ಸೇರಿದ ಇವರು ಮುಸ್ಲಿಂ ಸಮುದಾಯದ ತಬು ರಾವ್ ವಿವಾಹವಾಗಿದ್ದಾರೆ. ಎಐಸಿಸಿ ಮಟ್ಟದಲ್ಲಿಯೂ ಉತ್ತಮ ಪ್ರಭಾವ ಹೊಂದಿರುವ ದಿನೇಶ್ ಗುಂಡೂರಾವ್ ರಾಹುಲ್ ಗಾಂಧಿ ಆಪ್ತರು. ಗೋವಾ, ಪಾಂಡಿಚೇರಿ ರಾಜ್ಯಗಳ ಕಾಂಗ್ರೆಸ್ ಉಸ್ತುವಾರಿ ಸಹ ಆಗಿದ್ದಾರೆ.
| ಪೂರ್ಣ ಹೆಸರು | ದಿನೇಶ ಗುಂಡೂರಾವ್ |
| ಜನ್ಮ ದಿನಾಂಕ | 09 Oct 1969 (ವಯಸ್ಸು 56) |
| ಹುಟ್ಟಿದ ಸ್ಥಳ | ಕುಶಾಲನಗರ, ಕೂರ್ಗ್ |
| ಪಕ್ಷದ ಹೆಸರು | Indian National Congress |
| ವಿದ್ಯಾರ್ಹತೆ | Graduate Professional |
| ಉದ್ಯೋಗ | ಶಾಸಕ |
| ತಂದೆಯ ಹೆಸರು | ಆರ್. ಗುಂಡೂರಾವ್ |
| ತಾಯಿಯ ಹೆಸರು | ವರಲಕ್ಷ್ಮಿ ಗುಂಡೂರಾವ್ |
| ಅವಲಂಬಿತರ ಹೆಸರು | ತಬು ರಾವ್ |
| ಅವಲಂಬಿತರ ಉದ್ಯೋಗ | ಗೃಹಿಣಿ |
| ಮಕ್ಕಳು | 2 ಪುತ್ರಿ(ಯರು) |
| ಧರ್ಮ | ಹಿಂದು |
| ಜಾತಿ | ಬ್ರಾಹ್ಮಣ |
Disclaimer:The information provided on this page is sourced from various publicly available platforms including https://en.wikipedia.org/, https://sansad.in/ls, https://sansad.in/rs, https://pib.gov.in/, https://affidavit.eci.gov.in/ and the official websites of state assemblies respectively. While we make every effort to maintain the accuracy, comprehensiveness and timeliness of the information provided, we cannot guarantee the absolute accuracy or reliability of the content. The data presented here has been compiled without consideration of the objectives or opinions of individuals who may access it.