ಈಶ್ವರ ಖಂಡ್ರೆ

ಈಶ್ವರ ಖಂಡ್ರೆ
ಬೀದರ್ ಜಿಲ್ಲೆಯ ಭಾಲ್ಕಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಈಶ್ವರ ಖಂಡ್ರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಪೌರಾಡಳಿತ ಮತ್ತು ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರಾಗಿದ್ದ ಖಂಡ್ರೆ, ಪ್ರಸ್ತುತ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರು.
By Rashmi | Wednesday, September 28, 2022, 06:06:12 PM [IST]

ಈಶ್ವರ ಖಂಡ್ರೆ ಜೀವನ ಚರಿತ್ರೆ

ಬೀದರ್ ಜಿಲ್ಲೆಯ ಭಾಲ್ಕಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಈಶ್ವರ ಖಂಡ್ರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಪೌರಾಡಳಿತ ಮತ್ತು ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರಾಗಿದ್ದ ಖಂಡ್ರೆ, ಪ್ರಸ್ತುತ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರು.

ಈಶ್ವರ ಭೀಮಣ್ಣ ಖಂಡ್ರೆ 2018ರ ಚುನಾವಣೆಯಲ್ಲಿ 84,673 ಮತಗಳನ್ನು ಪಡೆದು ಶಾಸಕರಾಗಿ ಆಯ್ಕೆಯಾಗಿದ್ದಾರೆ. ಮಾಜಿ ಸಚಿವ ಭೀಮಣ್ಣ ಖಂಡ್ರೆ ಪುತ್ರರಾದ ಈಶ್ವರ ಖಂಡ್ರೆ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಣೆ ಮಾಡಿದ ಅನುಭವ ಹೊಂದಿರುವ ಈಶ್ವರ ಖಂಡ್ರೆ ಕಾಂಗ್ರೆಸ್ ಸೇವಾದಳದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ, ಬೀದರ್ ಜಿಲ್ಲಾ ಘಟಕದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಣೆ ಮಾಡಿದ್ದಾರೆ.

2018ರ ಚುನಾವಣೆ ಬಳಿಕ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ಬೀದರ್ ಜಿಲ್ಲಾ ಕೋಟಾದಲ್ಲಿ ಸಚಿವ ಸ್ಥಾನಕ್ಕಾಗಿ ಹ್ಯಾಟ್ರಿಕ್ ಗೆಲುವು ದಾಖಲಿಸಿದ ಈಶ್ವರ ಖಂಡ್ರೆ ಮತ್ತು 4ನೇ ಬಾರಿಗೆ ಶಾಸಕರಾದ ರಾಜಶೇಖರ ಪಾಟೀಲ ನಡುವೆ ಪೈಪೋಟಿ ನಡೆದಿತ್ತು. ಅಂತಿಮವಾಗಿ ರಾಜಶೇಖರ ಪಾಟೀಲ ಸಚಿವ ಸ್ಥಾನ ಪಡೆದಿದ್ದರು.

2008-2013ರ ತನಕ ಶಾಸಕರಾಗಿ, 2013-2018ರ ತನಕ ಶಾಸಕರಾಗಿ ಈಶ್ವರ ಖಂಡ್ರೆ ಕೆಲಸ ನಿರ್ವಹಣೆ ಮಾಡಿದ್ದಾರೆ. 2016ರಿಂದ ಪೌರಾಡಳಿತ, ಸ್ಥಳೀಯ ಸಂಸ್ಥೆಗಳು ಮತ್ತು ಸಾರ್ವಜನಿಕ ಉದ್ದಿಮೆಗಳ ರಾಜ್ಯ ಸಚಿವರು (ಸ್ವತಂತ್ರ ಖಾತೆ) ನಿರ್ವಹಣೆ ಮಾಡಿದ್ದಾರೆ. 2018ರ ಚುನಾವಣೆಯಲ್ಲಿ ಗೆದ್ದು ಮೂರನೇ ಬಾರಿಗೆ ಗೆಲುವು ದಾಖಲಿಸಿದ್ದಾರೆ.

ಬೀದರ್ ಸಹಕಾರ ಸಂಸ್ಥೆ ಕಾರ್ಖನೆ, ಹಳ್ಳಿಖೇಡ್ ಅಧ್ಯಕ್ಷರಾಗಿ, ಬಾಲ್ಕಿಯ ಶಾಂತಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾಗಿ, ಬೀದರ್‌ನ ಕರ್ನಾಟಕ ರಾಷ್ಟ್ರೀಯ ವಿದ್ಯಾಸಂಸ್ಥೆ ಸದಸ್ಯರಾಗಿ ಕೆಲಸ ಮಾಡಿದ್ದಾರೆ.

ಮತ್ತಷ್ಟು ಓದು

ಈಶ್ವರ ಖಂಡ್ರೆ ವಯಕ್ತಿಕ ಜೀವನ

ಪೂರ್ಣ ಹೆಸರು ಈಶ್ವರ ಖಂಡ್ರೆ
ಜನ್ಮ ದಿನಾಂಕ 15 Jan 1962 (ವಯಸ್ಸು 64)
ಹುಟ್ಟಿದ ಸ್ಥಳ ಬಾಲ್ಕಿ
ಪಕ್ಷದ ಹೆಸರು Indian National Congress
ವಿದ್ಯಾರ್ಹತೆ B.E. from Poojya Doddappa Appa College of Engineering, Gulbarga University in 1985
ಉದ್ಯೋಗ ಕೃಷಿಕ, ಸಮಾಜ ಸೇವೆ
ತಂದೆಯ ಹೆಸರು ಭೀಮಣ್ಣ ಖಂಡ್ರೆ
ತಾಯಿಯ ಹೆಸರು NA
ಅವಲಂಬಿತರ ಹೆಸರು ಗೀತಾ ಖಂಡ್ರೆ
ಅವಲಂಬಿತರ ಉದ್ಯೋಗ ಗೃಹಿಣಿ
ಮಕ್ಕಳು 1 ಪುತ್ರ(ರು)
ಧರ್ಮ ಹಿಂದು
ಜಾತಿ ಲಿಂಗಾಯತ
ವೆಬ್‌ಸೈಟ್ karnatakapcc.com/working-president-eshwar-khandre

ಈಶ್ವರ ಖಂಡ್ರೆ ಒಟ್ಟು ಆಸ್ತಿ

ಒಟ್ಟು ಆಸ್ತಿ
₹8.16 CRORE
ಆಸ್ತಿ
₹8.74 CRORE
ಸಾಲಸೋಲ
₹58.02 LAKHS

ಈಶ್ವರ ಖಂಡ್ರೆ ಕುರಿತು ಆಸಕ್ತಿದಾಯಕ ಸಂಗತಿಗಳು

ಬೀದರ್‌ನ ಬಾಲ್ಕಿಯಲ್ಲಿ ಮೂರು ಬಾರಿ ಗೆದ್ದು ಹ್ಯಾಟ್ರಿಕ್ ಗೆಲುವು ದಾಖಲಿಸಿದ್ದಾರೆ.
2ನೇ ಬಾರಿ ಶಾಸಕರಾಗಿ ಆಯ್ಕೆಯಾದ ಬಳಿಕ ಸಚಿವರಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿತು.

ಈಶ್ವರ ಖಂಡ್ರೆ ರಾಜಕೀಯ ಟೈಮ್‌ಲೈನ್

  • 2018: ವಿಧಾನಸಭೆ ಚುನಾವಣೆಯಲ್ಲಿ 3ನೇ ಬಾರಿಗೆ ಗೆಲುವು. ಜುಲೈ 4ರಂದು ಈಶ್ವರ ಖಂಡ್ರೆ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ನೇಮಕ
  • 2016: ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಪೌರಾಡಳಿತ, ಸ್ಥಳೀಯ ಸಂಸ್ಥೆಗಳು ಮತ್ತು ಸಾರ್ವಜನಿಕ ಉದ್ದಿಮೆಗಳ ರಾಜ್ಯ ಸಚಿವರಾಗಿ ಕಾರ್ಯ ನಿರ್ವಹಣೆ
  • 2013: ಬೀದರ್‌ಬ ಬಾಲ್ಕಿ ಕ್ಷೇತ್ರದಿಂದ 2ನೇ ಬಾರಿಗೆ ಗೆಲುವು
  • 2008: ಬೀದರ್‌ನ ಬಾಲ್ಕಿ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆ

ಈಶ್ವರ ಖಂಡ್ರೆ ಸಾಧನೆಗಳು

ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ನಡೆದ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ 6 ಸ್ಥಾನಗಳ ಪೈಕಿ 4ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿದ್ದರು.

Disclaimer:The information provided on this page is sourced from various publicly available platforms including https://en.wikipedia.org/, https://sansad.in/ls, https://sansad.in/rs, https://pib.gov.in/, https://affidavit.eci.gov.in/ and the official websites of state assemblies respectively. While we make every effort to maintain the accuracy, comprehensiveness and timeliness of the information provided, we cannot guarantee the absolute accuracy or reliability of the content. The data presented here has been compiled without consideration of the objectives or opinions of individuals who may access it.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+