ಜಗದೀಶ್ ಶೆಟ್ಟರ್ ಕರ್ನಾಟಕದ ಮಾಜಿ ಮುಖ್ಯಮಂತ್ರಿ. ಹುಬ್ಬಳ್ಳಿ-ಧಾರವಾಡ ಕೇಂದ್ರ ಕ್ಷೇತ್ರದ ಬಿಜೆಪಿ ಶಾಸಕರು. ಉತ್ತರ ಕರ್ನಾಟಕ ಭಾಗದ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರು.
6 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಜಗದೀಶ್ ಶೆಟ್ಟರ್ ಸಚಿವರಾಗಿ, ವಿಧಾನಸಭೆ ಸ್ಪೀಕರ್ ಆಗಿ, ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿ, ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದಾರೆ.
ಮಾಜಿ ಮುಖ್ಯಮಂತ್ರಿಯಾದರೂ 2019ರಲ್ಲಿ ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾದಾಗ ಸಚಿವರಾಗಿ ಸಂಪುಟ ಸೇರಿದರು. ಬೃಹತ್ ಮತ್ತು ಮಧ್ಯ ಕೈಗಾರಿಕೆ , ಸಾರ್ವಜನಿಕ ಉದ್ದಿಮೆ ಖಾತೆ ಸಚಿವರಾಗಿದ್ದರು.
ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಬಳಿಕ ಜಗದೀಶ್ ಶೆಟ್ಟರ್ ಸಚಿವರಾಗುವುದಿಲ್ಲ ಎಂದು ಘೋಷಣೆ ಮಾಡಿದರು.
ಲಿಂಗಾಯತ ಸಮುದಾಯದ ಜಗದೀಶ್ ಶೆಟ್ಟರ್ ಎಲ್ಎಲ್‌ಬಿ ಪದವೀಧರರು. 10 ತಿಂಗಳ ಕಾಲ ಕರ್ನಾಟಕದ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
ಆರ್‌ಎಸ್‌ಎಸ್ ಮೂಲಕ ರಾಜಕೀಯಕ್ಕೆ ಬಂದ ಜಗದೀಶ್ ಶೆಟ್ಟರ್ 1990ರಲ್ಲಿ ಹುಬ್ಬಳ್ಳಿ ಗ್ರಾಮೀಣ ಬಿಜೆಪಿ ಘಟಕದ ಅಧ್ಯಕ್ಷರಾಗಿ ನೇಮಕವಾದರು. 1994ರಲ್ಲಿ ಧಾರವಾಡ ಜಿಲ್ಲಾ ಘಟಕದ ಅಧ್ಯಕ್ಷರಾದರು. ಅದೇ ವರ್ಷ ಮೊದಲ ಬಾರಿಗೆ ವಿಧಾನಸಭೆಗೆ ಮೊದಲ ಬಾರಿಗೆ ಆಯ್ಕೆಗೊಂಡರು.
2006ರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಎಚ್. ಡಿ. ಕುಮಾರಸ್ವಾಮಿ ಸಂಪುಟದಲ್ಲಿ ಕಂದಾಯ ಸಚಿವರಾಗಿ ಕೆಲಸ ಮಾಡಿದರು. 2008-09ರಲ್ಲಿ ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಕಾರ್ಯ ನಿರ್ವಹಣೆ ಮಾಡಿದರು.
ಮುಖ್ಯಮಂತ್ರಿ ಸ್ಥಾನಕ್ಕೆ ಡಿ. ವಿ. ಸದಾನಂದ ಗೌಡ ರಾಜೀನಾಮೆ ನೀಡಿದ ಬಳಿಕ ಜಗದೀಶ್ ಶೆಟ್ಟರ್ ರಾಜ್ಯದ 21ನೇ ಮುಖ್ಯಮಂತ್ರಿಯಾದರು. 10 ತಿಂಗಳ ಕಾಲ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದರು.
1999ರಲ್ಲಿ ಎಸ್. ಎಂ. ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ವಿರೋಧ ಪಕ್ಷದ ನಾಯಕರಾಗಿ ಕೆಲಸ ಮಾಡಿದರು. 2013ರಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ಸಿದ್ದರಾಮಯ್ಯ ಮುಖ್ಯಮಂತ್ರಿ ಬಳಿಕ ಸಹ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದರು.
| ಪೂರ್ಣ ಹೆಸರು | ಜಗದೀಶ್ ಶೆಟ್ಟರ್ |
| ಜನ್ಮ ದಿನಾಂಕ | 17 Dec 1955 (ವಯಸ್ಸು 70) |
| ಹುಟ್ಟಿದ ಸ್ಥಳ | ಬಾಗಲಕೋಟೆ ಬಾದಾಮಿ ತಾಲೂಕಿನ ಕೆರೂರು ಗ್ರಾಮ, |
| ಪಕ್ಷದ ಹೆಸರು | Indian National Congress |
| ವಿದ್ಯಾರ್ಹತೆ | B.Com, LL.B |
| ಉದ್ಯೋಗ | ವಕೀಲರು, ರಾಜಕಾರಣಿ |
| ತಂದೆಯ ಹೆಸರು | ಶಿವಪ್ಪ ಶಿವಮೂರ್ತಪ್ಪ ಶೆಟ್ಟರ್ |
| ತಾಯಿಯ ಹೆಸರು | ಬಸವಣ್ಣೆಮ್ಮ |
| ಅವಲಂಬಿತರ ಹೆಸರು | ಶಿಲ್ಪಾ ಶೆಟ್ಟರ್ |
| ಅವಲಂಬಿತರ ಉದ್ಯೋಗ | ಗೃಹಿಣಿ ಮತ್ತು ಕೃಷಿ |
| ಮಕ್ಕಳು | 2 ಪುತ್ರ(ರು) |
| ಧರ್ಮ | ಹಿಂದು |
| ಜಾತಿ | ಲಿಂಗಾಯತ |
| ವೆಬ್‌ಸೈಟ್ | https://www.jagadishshettar.in/ |
Disclaimer:The information provided on this page is sourced from various publicly available platforms including https://en.wikipedia.org/, https://sansad.in/ls, https://sansad.in/rs, https://pib.gov.in/, https://affidavit.eci.gov.in/ and the official websites of state assemblies respectively. While we make every effort to maintain the accuracy, comprehensiveness and timeliness of the information provided, we cannot guarantee the absolute accuracy or reliability of the content. The data presented here has been compiled without consideration of the objectives or opinions of individuals who may access it.