ಮುಖ್ಯಪುಟ
 » 
ಜಗದೀಶ್ ಶೆಟ್ಟರ್

ಜಗದೀಶ್ ಶೆಟ್ಟರ್

ಜಗದೀಶ್ ಶೆಟ್ಟರ್

ಜಗದೀಶ್ ಶೆಟ್ಟರ್ ಕರ್ನಾಟಕದ ಮಾಜಿ ಮುಖ್ಯಮಂತ್ರಿ. ಹುಬ್ಬಳ್ಳಿ-ಧಾರವಾಡ ಕೇಂದ್ರ ಕ್ಷೇತ್ರದ ಬಿಜೆಪಿ ಶಾಸಕರು.

ಜಗದೀಶ್ ಶೆಟ್ಟರ್ ಜೀವನ ಚರಿತ್ರೆ

ಜಗದೀಶ್ ಶೆಟ್ಟರ್ ಕರ್ನಾಟಕದ ಮಾಜಿ ಮುಖ್ಯಮಂತ್ರಿ. ಹುಬ್ಬಳ್ಳಿ-ಧಾರವಾಡ ಕೇಂದ್ರ ಕ್ಷೇತ್ರದ ಬಿಜೆಪಿ ಶಾಸಕರು. ಉತ್ತರ ಕರ್ನಾಟಕ ಭಾಗದ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರು.

6 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಜಗದೀಶ್ ಶೆಟ್ಟರ್ ಸಚಿವರಾಗಿ, ವಿಧಾನಸಭೆ ಸ್ಪೀಕರ್ ಆಗಿ, ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿ, ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದಾರೆ.

ಮಾಜಿ ಮುಖ್ಯಮಂತ್ರಿಯಾದರೂ 2019ರಲ್ಲಿ ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾದಾಗ ಸಚಿವರಾಗಿ ಸಂಪುಟ ಸೇರಿದರು. ಬೃಹತ್ ಮತ್ತು ಮಧ್ಯ ಕೈಗಾರಿಕೆ , ಸಾರ್ವಜನಿಕ ಉದ್ದಿಮೆ ಖಾತೆ ಸಚಿವರಾಗಿದ್ದರು.

ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಬಳಿಕ ಜಗದೀಶ್ ಶೆಟ್ಟರ್ ಸಚಿವರಾಗುವುದಿಲ್ಲ ಎಂದು ಘೋಷಣೆ ಮಾಡಿದರು.

ಲಿಂಗಾಯತ ಸಮುದಾಯದ ಜಗದೀಶ್ ಶೆಟ್ಟರ್ ಎಲ್ಎಲ್‌ಬಿ ಪದವೀಧರರು. 10 ತಿಂಗಳ ಕಾಲ ಕರ್ನಾಟಕದ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.

ಆರ್‌ಎಸ್‌ಎಸ್ ಮೂಲಕ ರಾಜಕೀಯಕ್ಕೆ ಬಂದ ಜಗದೀಶ್ ಶೆಟ್ಟರ್ 1990ರಲ್ಲಿ ಹುಬ್ಬಳ್ಳಿ ಗ್ರಾಮೀಣ ಬಿಜೆಪಿ ಘಟಕದ ಅಧ್ಯಕ್ಷರಾಗಿ ನೇಮಕವಾದರು. 1994ರಲ್ಲಿ ಧಾರವಾಡ ಜಿಲ್ಲಾ ಘಟಕದ ಅಧ್ಯಕ್ಷರಾದರು. ಅದೇ ವರ್ಷ ಮೊದಲ ಬಾರಿಗೆ ವಿಧಾನಸಭೆಗೆ ಮೊದಲ ಬಾರಿಗೆ ಆಯ್ಕೆಗೊಂಡರು.

2006ರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಎಚ್. ಡಿ. ಕುಮಾರಸ್ವಾಮಿ ಸಂಪುಟದಲ್ಲಿ ಕಂದಾಯ ಸಚಿವರಾಗಿ ಕೆಲಸ ಮಾಡಿದರು. 2008-09ರಲ್ಲಿ ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಕಾರ್ಯ ನಿರ್ವಹಣೆ ಮಾಡಿದರು.

ಮುಖ್ಯಮಂತ್ರಿ ಸ್ಥಾನಕ್ಕೆ ಡಿ. ವಿ. ಸದಾನಂದ ಗೌಡ ರಾಜೀನಾಮೆ ನೀಡಿದ ಬಳಿಕ ಜಗದೀಶ್ ಶೆಟ್ಟರ್ ರಾಜ್ಯದ 21ನೇ ಮುಖ್ಯಮಂತ್ರಿಯಾದರು. 10 ತಿಂಗಳ ಕಾಲ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದರು.

1999ರಲ್ಲಿ ಎಸ್. ಎಂ. ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ವಿರೋಧ ಪಕ್ಷದ ನಾಯಕರಾಗಿ ಕೆಲಸ ಮಾಡಿದರು. 2013ರಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ಸಿದ್ದರಾಮಯ್ಯ ಮುಖ್ಯಮಂತ್ರಿ ಬಳಿಕ ಸಹ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದರು.

ಮತ್ತಷ್ಟು ಓದು
By Moumi Majumdar Updated: Tuesday, August 30, 2022, 11:00:56 AM [IST]

ಜಗದೀಶ್ ಶೆಟ್ಟರ್ ವಯಕ್ತಿಕ ಜೀವನ

ಪೂರ್ಣ ಹೆಸರು ಜಗದೀಶ್ ಶೆಟ್ಟರ್
ಜನ್ಮ ದಿನಾಂಕ 17 Dec 1955 (ವಯಸ್ಸು 68)
ಹುಟ್ಟಿದ ಸ್ಥಳ ಬಾಗಲಕೋಟೆ ಬಾದಾಮಿ ತಾಲೂಕಿನ ಕೆರೂರು ಗ್ರಾಮ,
ಪಕ್ಷದ ಹೆಸರು Indian National Congress
ವಿದ್ಯಾರ್ಹತೆ B.Com, LL.B
ಉದ್ಯೋಗ ವಕೀಲರು, ರಾಜಕಾರಣಿ
ತಂದೆಯ ಹೆಸರು ಶಿವಪ್ಪ ಶಿವಮೂರ್ತಪ್ಪ ಶೆಟ್ಟರ್
ತಾಯಿಯ ಹೆಸರು ಬಸವಣ್ಣೆಮ್ಮ
ಧರ್ಮ ಹಿಂದು
ಜಾತಿ ಲಿಂಗಾಯತ
ವೆಬ್‌ಸೈಟ್ https://www.jagadishshettar.in/
ಸಾಮಾಜಿಕ ಜಾಲತಾಣದ ವಿಳಾಸ ಸಾಮಾಜಿಕ ಜಾಲತಾಣದ ವಿಳಾಸ:

ಜಗದೀಶ್ ಶೆಟ್ಟರ್ ಒಟ್ಟು ಆಸ್ತಿ

ಒಟ್ಟು ಆಸ್ತಿ: ₹12.61 CRORE
ಆಸ್ತಿ:₹13.52 CRORE
ಸಾಲಸೋಲ: ₹91.1 LAKHS

ಜಗದೀಶ್ ಶೆಟ್ಟರ್ ಕುರಿತು ಆಸಕ್ತಿದಾಯಕ ಸಂಗತಿಗಳು

ಉತ್ತರ ಕರ್ನಾಟಕ ಭಾಗದ ಪ್ರಭಾವಿ ಲಿಂಗಾಯತ ನಾಯಕ

ರಾಜ್ಯದ 21ನೇ ಮುಖ್ಯಮಂತ್ರಿಯಾಗಿ 10 ತಿಂಗಳ ಕಾಲ ಆಡಳಿತ ನಡೆಸಿದ್ದಾರೆ

ಮಾಜಿ ಮುಖ್ಯಮಂತ್ರಿಯಾಗಿದ್ದರೂ 2019ರಲ್ಲಿ ಬಿ. ಎಸ್. ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾಗಿದ್ದರು.

ಜಗದೀಶ್ ಶೆಟ್ಟರ್ ರಾಜಕೀಯ ಟೈಮ್‌ಲೈನ್

2019
  • ಸಚಿವರಾಗಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಂಪುಟ ಸೇರ್ಪಡೆ
2018
  • 6ನೇ ಬಾರಿಗೆ ಶಾಸಕರಾಗಿ ಆಯ್ಕೆ
2013
  • ಶೆಟ್ಟರ್ ಮತ್ತೆ ಹುಬ್ಬಳ್ಳಿ ಧಾರವಾಡ ಕೇಂದ್ರ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಗೆಲುವು ಸಾಧಿಸಿದರು ಮತ್ತು ತಮ್ಮ ಪಕ್ಷ ಚುನಾವಣೆಯಲ್ಲಿ ಸೋತಿದ್ದರಿಂದ ವಿರೋಧ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿದರು.
2013
  • ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಸರ್ಕಾರ ಆಡಳಿತ ಬಂದಾಗ ಪ್ರತಿಪಕ್ಷದ ನಾಯಕರಾದರು.
2012
  • 12 ಜುಲೈ 2012 ರಂದು ಕರ್ನಾಟಕ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. 2013ರ ಮೇ 8 ರವರೆಗೆ ಅಧಿಕಾರದಲ್ಲಿದ್ದರು.
2009
  • ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು
2008
  • ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಕಾರ್ಯ ನಿರ್ವಹಣೆ
2006
  • ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಕುಮಾರಸ್ವಾಮಿ ಸಂಪುಟದಲ್ಲಿ ಕಂದಾಯ ಸಚಿವರು
2004
  • ಹುಬ್ಬಳ್ಳಿ ಗ್ರಾಮೀಣ ಕ್ಷೇತ್ರದಿಂದ ಮೂರನೇ ಬಾರಿಗೆ 26000 ಮತಗಳ ಅಂತರದಿಂದ ವಿಧಾನಸಭೆಗೆ ಆಯ್ಕೆ
1999
  • ಎಸ್. ಎಂ. ಕೃಷ್ಣ ನೇತೃತ್ವದ ಕಾಂಗ್ರೆಸ್ ಸರ್ಕಾರವಿದ್ದಾಗ ವಿಧಾನಸಭೆಯ ಪ್ರತಿಪಕ್ಷದ ನಾಯಕರಾಗಿ ನೇಮಕ
1996
  • ಕರ್ನಾಟಕ ರಾಜ್ಯ ಬಿಜೆಪಿಯ ಕಾರ್ಯದರ್ಶಿಯಾಗಿ ಆಯ್ಕೆಯಾದರು
1994
  • ಧಾರವಾಡ ಬಿಜೆಪಿ ಘಟಕದ ಅಧ್ಯಕ್ಷರಾಗಿ ನೇಮಕ. ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧೆ ಗೆಲುವು
1990
  • ಹುಬ್ಬಳ್ಳಿ ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷರಾಗಿ ನೇಮಕ

ಹಿಂದಿನ ಇತಿಹಾಸ

1984
  • ಶಿಲ್ಪಾ ಶೆಟ್ಟರ್ ಜೊತೆ ವಿವಾಹವಾದರು.
1980
  • ಎಲ್. ಎಲ್. ಬಿ. ಪದವಿಯನ್ನು ಹುಬ್ಬಳ್ಳಿಯ ಜೆಎಸ್ಎಸ್ ಕಾನೂನು ಕಾಲೇಜಿನಿಂದ ಪಡೆದರು.

Disclaimer: The information provided on this page is sourced from various publicly available platforms including https://en.wikipedia.org/, https://sansad.in/ls, https://sansad.in/rs, https://pib.gov.in/, https://affidavit.eci.gov.in/ and the official websites of state assemblies respectively. While we make every effort to maintain the accuracy, comprehensiveness and timeliness of the information provided, we cannot guarantee the absolute accuracy or reliability of the content. The data presented here has been compiled without consideration of the objectives or opinions of individuals who may access it.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X