Get Updates
Get notified of breaking news, exclusive insights, and must-see stories!

ಕೆ. ಗೋಪಾಲಯ್ಯ

ಕೆ. ಗೋಪಾಲಯ್ಯ
ಕೆ. ಗೋಪಾಲಯ್ಯ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಬಿಜೆಪಿ ಶಾಸಕ.
By Moumi Majumdar | Friday, September 23, 2022, 06:09:47 PM [IST]

ಕೆ. ಗೋಪಾಲಯ್ಯ ಜೀವನ ಚರಿತ್ರೆ

ಕೆ. ಗೋಪಾಲಯ್ಯ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಬಿಜೆಪಿ ಶಾಸಕ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಅಬಕಾರಿ ಸಚಿವರು. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಂಪುಟದಲ್ಲಿ ಆಹಾರ, ನಾಗರಿಕ ಪೂರೈಕೆ ಮತ್ತು ಗ್ರಾಹಕ ವ್ಯವಹಾರ ಖಾತೆ ಸಚಿವರಾಗಿದ್ದರು.

2013ರ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದಲ್ಲಿ ಗೆಲುವು ಸಾಧಿಸುವ ಮೂಲಕ ಮೊದಲ ಬಾರಿಗೆ ಶಾಸಕರಾದರು. 2018ರ ಚುನಾವಣೆಯಲ್ಲಿಯೂ ಜೆಡಿಎಸ್‌ನಿಂದ ಕಣಕ್ಕಿಳಿದು 88,218 ಮತಗಳನ್ನು ಪಡೆದು ಜಯಗಳಿಸಿದರು.

ಆದರೆ ಮುಖ್ಯಮಮಂತ್ರಿ ಎಚ್. ಡಿ. ಕುಮಾರಸ್ವಾಮಿ ವಿರುದ್ಧ ಬಂಡಾಯ ಎದ್ದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದವರಲ್ಲಿ ಕೆ. ಗೋಪಾಲಯ್ಯ ಸಹ ಒಬ್ಬರು. ಬಳಿಕ ಶಾಸಕ, ಜೆಡಿಎಸ್‌ ಸದಸ್ಯತ್ವಕ್ಕೆ ತೊರೆದು, ಬಿಜೆಪಿ ಸೇರಿದರು. 2019ರ ಡಿಸೆಂಬರ್‌ನಲ್ಲಿ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆಲುವು ಸಾಧಿಸಿದರು.

ಉಪ ಚುನಾವಣೆ ಗೆಲುವಿನ ಬಳಿಕ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಂಪುಟ ಸೇರಿದರು. 2021ರಲ್ಲಿ ಮುಖ್ಯಮಂತ್ರಿ ಬದಲಾವಣೆ ಬಳಿಕ, ಬಸವರಾಜ ಬೊಮ್ಮಾಯಿ ಸಂಪುಟಕ್ಕೆ ಸಹ ಸೇರ್ಪಡೆಯಾದರು. ಕೆ. ಗೋಪಾಲಯ್ಯ ಪತ್ನಿ ಹೇಮಲತಾ ಗೋಪಾಲಯ್ಯ ಸಹ ರಾಜಕೀಯದಲ್ಲಿ ಸಕ್ರಿಯರು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಉಪ ಮೇಯರ್ ಆಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.

ಮತ್ತಷ್ಟು ಓದು

ಕೆ. ಗೋಪಾಲಯ್ಯ ವಯಕ್ತಿಕ ಜೀವನ

ಪೂರ್ಣ ಹೆಸರು ಕೆ. ಗೋಪಾಲಯ್ಯ
ಜನ್ಮ ದಿನಾಂಕ 23 Jun 1960 (ವಯಸ್ಸು 65)
ಹುಟ್ಟಿದ ಸ್ಥಳ ಬೆಂಗಳೂರು
ಪಕ್ಷದ ಹೆಸರು Bharatiya Janta Party
ವಿದ್ಯಾರ್ಹತೆ B. Sc from Bangalore University
ಉದ್ಯೋಗ ಸಮಾಜ ಸೇವೆ
ತಂದೆಯ ಹೆಸರು ಲೇಟ್ ಚನ್ನಿಗಪ್ಪ
ತಾಯಿಯ ಹೆಸರು NA
ಅವಲಂಬಿತರ ಹೆಸರು ಎಸ್. ವಿ. ಹೇಮಲತಾ
ಅವಲಂಬಿತರ ಉದ್ಯೋಗ ಗೃಹಿಣಿ, ರಾಜಕಾರಣಿ
ಧರ್ಮ ಹಿಂದು
ಜಾತಿ ಒಕ್ಕಲಿಗ
ವೆಬ್‌ಸೈಟ್ NA

ಕೆ. ಗೋಪಾಲಯ್ಯ ಒಟ್ಟು ಆಸ್ತಿ

ಒಟ್ಟು ಆಸ್ತಿ
₹53.04 CRORE
ಆಸ್ತಿ
₹110.65 CRORE
ಸಾಲಸೋಲ
₹57.6 CRORE

ಕೆ. ಗೋಪಾಲಯ್ಯ ಕುರಿತು ಆಸಕ್ತಿದಾಯಕ ಸಂಗತಿಗಳು

ಎರಡು ಬಾರಿ ಜೆಡಿಎಸ್‌ನಿಂದ ಗೆದ್ದಿದ್ದ ಕೆ. ಗೋಪಾಲಯ್ಯ ಬಳಿಕ ಬಿಜೆಪಿ ಸೇರಿದರು.

ಗೋಪಾಲಯ್ಯ, ಹೇಮಲತಾ ಗೋಪಾಲಯ್ಯ ಜೆಡಿಎಸ್ ಮೂಲಕ ರಾಜಕೀಯದಲ್ಲಿ ಸಕ್ರಿಯರಾಗಿದ್ದರು.

ಹೇಮಲತಾ ಗೋಪಾಲಯ್ಯ ಬಿಬಿಎಂಪಿ ಉಪ ಮೇಯರ್ ಆಗಿಯೂ ಕಾರ್ಯ ನಿರ್ವಹಣೆ ಮಾಡಿದ್ದಾರೆ.

ಕೆ. ಗೋಪಾಲಯ್ಯ ರಾಜಕೀಯ ಟೈಮ್‌ಲೈನ್

  • 2021: ಮುಖ್ಯಮಂತ್ರಿಗಳ ಬದಲಾವಣೆ ಬಳಿಕ ಬಸವರಾಜ ಬೊಮ್ಮಾಯಿ ಸಂಪುಟ ಸೇರ್ಪಡೆ
  • 2019: ಬಿಜೆಪಿ ಅಭ್ಯರ್ಥಿಯಾಗಿ ಉಪ ಚುನಾವಣೆ ಕಣಕ್ಕೆ, ಗೆಲುವು. ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟ ಸೇರ್ಪಡೆ
  • 2018: ವಿಧಾನಸಭೆ ಚುನಾವಣೆಯಲ್ಲಿ ಎರಡನೇ ಬಾರಿಗೆ ಜಯ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆ
  • 2013: ವಿಧಾನಸಭೆ ಚುನಾವಣೆಗೆ ಮತ್ತೆ ಸ್ಪರ್ಧೆ. ಮೊದಲ ಬಾರಿಗೆ ಗೆಲುವು
  • 2008 : ವಿಧಾನಸಭೆ ಚುನಾವಣೆಗೆ ಸ್ಪರ್ಧೆ. 28,097 ಮತಗಳನ್ನು ಪಡೆದು ಸೋಲು

Disclaimer:The information provided on this page is sourced from various publicly available platforms including https://en.wikipedia.org/, https://sansad.in/ls, https://sansad.in/rs, https://pib.gov.in/, https://affidavit.eci.gov.in/ and the official websites of state assemblies respectively. While we make every effort to maintain the accuracy, comprehensiveness and timeliness of the information provided, we cannot guarantee the absolute accuracy or reliability of the content. The data presented here has been compiled without consideration of the objectives or opinions of individuals who may access it.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+