2023ರ ಏಪ್ರಿಲ್ 11ರಂದು ಮಾಜಿ ಸಚಿವ, ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಶಾಸಕ ಕೆ. ಎಸ್. ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದರು.
ಕರ್ನಾಟಕ ಬಿಜೆಪಿಯ ಹಿರಿಯ ನಾಯಕ ಕೆ. ಎಸ್. ಈಶ್ವರಪ್ಪ. ರಾಜ್ಯದಲ್ಲಿ ಪಕ್ಷವನ್ನು ಕಟ್ಟಿ ಬೆಳೆಸಿದ ನಾಯಕರಲ್ಲಿ ಈಶ್ವರಪ್ಪ ಸಹ ಒಬ್ಬರು. ಕುರುಬ ಸಮುದಾಯಕ್ಕೆ ಸೇರಿದ ಈಶ್ವರಪ್ಪ ಸಚಿವರಾಗಿ, ಉಪ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
2019ರಲ್ಲಿ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿತು. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಕೆ. ಎಸ್. ಈಶ್ವರಪ್ಪರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಂಡರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹೊಣೆ ನೀಡಿದರು.
ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಬಳಿಕವೂ ಈಶ್ವರಪ್ಪ ಸಚಿವರಾಗಿ ಮುಂದುವರೆದರು. ಆದರೆ. ಉಡುಪಿಯಲ್ಲಿ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡರು. ಈ ಪ್ರಕರಣದಲ್ಲಿ ಸಚಿವ ಕೆ. ಎಸ್. ಈಶ್ವರಪ್ಪ ಹೆಸರು ಕೇಳಿ ಬಂದಿತು. ಅವರ ವಿರುದ್ಧ ಎಫ್‌ಐಆರ್ ದಾಖಲಾಯಿತು.
ಪ್ರತಿಪಕ್ಷಗಳು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿದ್ದ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿದವು. 2022ರ ಏಪ್ರಿಲ್ 14ರಂದು ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸಿ ರಾಜೀನಾಮೆ ಘೋಷಣೆ ಮಾಡಿದ ಸಚಿವ ಈಶ್ವರಪ್ಪ ಏಪ್ರಿಲ್ 15ರಂದು ಬೆಂಗಳೂರಿಗೆ ಆಗಮಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ರಾಜೀನಾಮೆ ಸಲ್ಲಿಸಿದರು.
ಕೆ. ಎಸ್. ಈಶ್ವರಪ್ಪ ಜನಿಸಿದ್ದು ಬಳ್ಳಾರಿಯಲ್ಲಿ. ಆದರೆ ರಾಜಕೀಯ ನೆಲೆ ಕಂಡುಕೊಂಡಿದ್ದು ಶಿವಮೊಗ್ಗದಲ್ಲಿ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಜನ ಸಂಘ ನಂತರ ಭಾರತೀಯ ಜನತಾ ಪಾರ್ಟಿಯ ತಳಹಂತದ ಕಾರ್ಯಕರ್ತರಾಗಿ ರಾಜಕೀಯ ಚಟುವಟಿಕೆಗಳನ್ನು ಆರಂಭಿಸಿದ ಕೆ. ಎಸ್. ಈಶ್ವರಪ್ಪ ಶಿವಮೊಗ್ಗ ನಗರ ಘಟಕದ ಕಾರ್ಯದರ್ಶಿಯಾಗಿ ಕೆಲಸ ಮಾಡಿದರು.
ನಂತರ ಶಿವಮೊಗ್ಗ ನಗರ ಸಮಿತಿಯ ಬಿಜೆಪಿ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಬಿಜೆಪಿಯಿಂದ ವಿಧಾನ ಪರಿಷತ್ ಸದಸ್ಯರಾಗಿ ನಾಮನಿರ್ದೇಶನಗೊಂಡು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿಯೂ ಕಾರ್ಯ ನಿರ್ವಹಣೆ ಮಾಡಿದರು.
1948ರ ಜೂನ್ 10ರಂದು ಜನಿಸಿದ ಕೆ. ಎಸ್. ಈಶ್ವರಪ್ಪ ತಂದೆ ಶರಣಪ್ಪ, ತಾಯಿ ಬಸಮ್ಮ. ಶಾಲಾ ದಿನಗಳಲ್ಲೇ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶಾಖೆಗಳ ಮೂಲಕ ವ್ಯಕ್ತಿತ್ವ ರೂಪಿಸಿಕೊಂಡರು. ನಗರದ ಪ್ರತಿಷ್ಠಿತ ಸರ್ಕಾರಿ ಪ್ರೌಢಶಾಲೆಯಲ್ಲಿ ಮೆಟ್ರಿಕ್ ವಿದ್ಯಾಭ್ಯಾಸ ಮುಗಿಸಿ ನಂತರ ನ್ಯಾಷನಲ್ ಕಾಮರ್ಸ್ ಕಾಲೇಜಿನ ವ್ಯಾಸಂಗ ಮಾಡಿದರು.
ಸಂಘದ ಶಾಖೆಗಳಲ್ಲಿ ಮೈಗೂಡಿಸಿಕೊಂಡಿದ್ದ ರಾಷ್ಟ್ರಪ್ರೇಮ, ಸಾಮಾಜಿಕ ಕಳಕಳಿಯ ಗುಣಗಳಿಂದಾಗಿ 1975ರ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಇವರು ಸಹಜವಾಗಿಯೇ ಹೋರಾಟಕ್ಕೆ ಧುಮುಕಿದ್ದರು.
ಕೆ. ಎಸ್. ಈಶ್ವರಪ್ಪ ತಮ್ಮ ಮಾತುಗಳ ಮೂಲಕವೇ ವಿವಾದಕ್ಕೆ ಸಿಲುಕುವುದು ಹೆಚ್ಚು. ಹಲವು ಬಾರಿ ಅವರು ನೀಡಿದ ಹೇಳಿಕೆ ರಾಜ್ಯದಲ್ಲಿ ಭಾರೀ ವಿವಾದ ಹುಟ್ಟು ಹಾಕಿವೆ.
| ಪೂರ್ಣ ಹೆಸರು | ಕೆ. ಎಸ್. ಈಶ್ವರಪ್ಪ |
| ಜನ್ಮ ದಿನಾಂಕ | 10 Jun 1948 (ವಯಸ್ಸು 77) |
| ಹುಟ್ಟಿದ ಸ್ಥಳ | ಬಳ್ಳಾರಿ |
| ಪಕ್ಷದ ಹೆಸರು | Bharatiya Janta Party |
| ವಿದ್ಯಾರ್ಹತೆ | Graduate |
| ಉದ್ಯೋಗ | ವ್ಯಾಪಾರ |
| ತಂದೆಯ ಹೆಸರು | ಶರಣಪ್ಪ |
| ತಾಯಿಯ ಹೆಸರು | ಬಸಮ್ಮ |
| ಅವಲಂಬಿತರ ಹೆಸರು | ಜಯಲಕ್ಷ್ಮಿ |
| ಅವಲಂಬಿತರ ಉದ್ಯೋಗ | ವ್ಯಾಪಾರ |
| ಮಕ್ಕಳು | 1 ಪುತ್ರ(ರು) |
| ವೆಬ್‌ಸೈಟ್ | http://kseshwarappa.com/ |
Disclaimer:The information provided on this page is sourced from various publicly available platforms including https://en.wikipedia.org/, https://sansad.in/ls, https://sansad.in/rs, https://pib.gov.in/, https://affidavit.eci.gov.in/ and the official websites of state assemblies respectively. While we make every effort to maintain the accuracy, comprehensiveness and timeliness of the information provided, we cannot guarantee the absolute accuracy or reliability of the content. The data presented here has been compiled without consideration of the objectives or opinions of individuals who may access it.