ಕೆ. ಎಸ್. ಈಶ್ವರಪ್ಪ

ಕೆ. ಎಸ್. ಈಶ್ವರಪ್ಪ

2023ರ ಏಪ್ರಿಲ್ 11ರಂದು ಮಾಜಿ ಸಚಿವ, ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಶಾಸಕ ಕೆ. ಎಸ್.

ಕೆ. ಎಸ್. ಈಶ್ವರಪ್ಪ ಜೀವನ ಚರಿತ್ರೆ

2023ರ ಏಪ್ರಿಲ್ 11ರಂದು ಮಾಜಿ ಸಚಿವ, ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಶಾಸಕ ಕೆ. ಎಸ್. ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದರು.

ಕರ್ನಾಟಕ ಬಿಜೆಪಿಯ ಹಿರಿಯ ನಾಯಕ ಕೆ. ಎಸ್. ಈಶ್ವರಪ್ಪ. ರಾಜ್ಯದಲ್ಲಿ ಪಕ್ಷವನ್ನು ಕಟ್ಟಿ ಬೆಳೆಸಿದ ನಾಯಕರಲ್ಲಿ ಈಶ್ವರಪ್ಪ ಸಹ ಒಬ್ಬರು. ಕುರುಬ ಸಮುದಾಯಕ್ಕೆ ಸೇರಿದ ಈಶ್ವರಪ್ಪ ಸಚಿವರಾಗಿ, ಉಪ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.

2019ರಲ್ಲಿ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿತು. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಕೆ. ಎಸ್. ಈಶ್ವರಪ್ಪರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಂಡರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹೊಣೆ ನೀಡಿದರು.

ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಬಳಿಕವೂ ಈಶ್ವರಪ್ಪ ಸಚಿವರಾಗಿ ಮುಂದುವರೆದರು. ಆದರೆ. ಉಡುಪಿಯಲ್ಲಿ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡರು. ಈ ಪ್ರಕರಣದಲ್ಲಿ ಸಚಿವ ಕೆ. ಎಸ್. ಈಶ್ವರಪ್ಪ ಹೆಸರು ಕೇಳಿ ಬಂದಿತು. ಅವರ ವಿರುದ್ಧ ಎಫ್‌ಐಆರ್ ದಾಖಲಾಯಿತು.

ಪ್ರತಿಪಕ್ಷಗಳು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿದ್ದ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿದವು. 2022ರ ಏಪ್ರಿಲ್ 14ರಂದು ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸಿ ರಾಜೀನಾಮೆ ಘೋಷಣೆ ಮಾಡಿದ ಸಚಿವ ಈಶ್ವರಪ್ಪ ಏಪ್ರಿಲ್ 15ರಂದು ಬೆಂಗಳೂರಿಗೆ ಆಗಮಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ರಾಜೀನಾಮೆ ಸಲ್ಲಿಸಿದರು.

ಕೆ. ಎಸ್. ಈಶ್ವರಪ್ಪ ಜನಿಸಿದ್ದು ಬಳ್ಳಾರಿಯಲ್ಲಿ. ಆದರೆ ರಾಜಕೀಯ ನೆಲೆ ಕಂಡುಕೊಂಡಿದ್ದು ಶಿವಮೊಗ್ಗದಲ್ಲಿ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಜನ ಸಂಘ ನಂತರ ಭಾರತೀಯ ಜನತಾ ಪಾರ್ಟಿಯ ತಳಹಂತದ ಕಾರ್ಯಕರ್ತರಾಗಿ ರಾಜಕೀಯ ಚಟುವಟಿಕೆಗಳನ್ನು ಆರಂಭಿಸಿದ ಕೆ. ಎಸ್. ಈಶ್ವರಪ್ಪ ಶಿವಮೊಗ್ಗ ನಗರ ಘಟಕದ ಕಾರ್ಯದರ್ಶಿಯಾಗಿ ಕೆಲಸ ಮಾಡಿದರು.

ನಂತರ ಶಿವಮೊಗ್ಗ ನಗರ ಸಮಿತಿಯ ಬಿಜೆಪಿ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಬಿಜೆಪಿಯಿಂದ ವಿಧಾನ ಪರಿಷತ್ ಸದಸ್ಯರಾಗಿ ನಾಮನಿರ್ದೇಶನಗೊಂಡು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿಯೂ ಕಾರ್ಯ ನಿರ್ವಹಣೆ ಮಾಡಿದರು.

1948ರ ಜೂನ್ 10ರಂದು ಜನಿಸಿದ ಕೆ. ಎಸ್. ಈಶ್ವರಪ್ಪ ತಂದೆ ಶರಣಪ್ಪ, ತಾಯಿ ಬಸಮ್ಮ. ಶಾಲಾ ದಿನಗಳಲ್ಲೇ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶಾಖೆಗಳ ಮೂಲಕ ವ್ಯಕ್ತಿತ್ವ ರೂಪಿಸಿಕೊಂಡರು. ನಗರದ ಪ್ರತಿಷ್ಠಿತ ಸರ್ಕಾರಿ ಪ್ರೌಢಶಾಲೆಯಲ್ಲಿ ಮೆಟ್ರಿಕ್ ವಿದ್ಯಾಭ್ಯಾಸ ಮುಗಿಸಿ ನಂತರ ನ್ಯಾಷನಲ್ ಕಾಮರ್ಸ್ ಕಾಲೇಜಿನ ವ್ಯಾಸಂಗ ಮಾಡಿದರು.

ಸಂಘದ ಶಾಖೆಗಳಲ್ಲಿ ಮೈಗೂಡಿಸಿಕೊಂಡಿದ್ದ ರಾಷ್ಟ್ರಪ್ರೇಮ, ಸಾಮಾಜಿಕ ಕಳಕಳಿಯ ಗುಣಗಳಿಂದಾಗಿ 1975ರ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಇವರು ಸಹಜವಾಗಿಯೇ ಹೋರಾಟಕ್ಕೆ ಧುಮುಕಿದ್ದರು.

ಕೆ. ಎಸ್. ಈಶ್ವರಪ್ಪ ತಮ್ಮ ಮಾತುಗಳ ಮೂಲಕವೇ ವಿವಾದಕ್ಕೆ ಸಿಲುಕುವುದು ಹೆಚ್ಚು. ಹಲವು ಬಾರಿ ಅವರು ನೀಡಿದ ಹೇಳಿಕೆ ರಾಜ್ಯದಲ್ಲಿ ಭಾರೀ ವಿವಾದ ಹುಟ್ಟು ಹಾಕಿವೆ.

ಮತ್ತಷ್ಟು ಓದು

ಕೆ. ಎಸ್. ಈಶ್ವರಪ್ಪ ವಯಕ್ತಿಕ ಜೀವನ

ಪೂರ್ಣ ಹೆಸರು ಕೆ. ಎಸ್. ಈಶ್ವರಪ್ಪ
ಜನ್ಮ ದಿನಾಂಕ 10 Jun 1948 (ವಯಸ್ಸು 75)
ಹುಟ್ಟಿದ ಸ್ಥಳ ಬಳ್ಳಾರಿ
ಪಕ್ಷದ ಹೆಸರು Bharatiya Janta Party
ವಿದ್ಯಾರ್ಹತೆ Graduate
ಉದ್ಯೋಗ ವ್ಯಾಪಾರ
ತಂದೆಯ ಹೆಸರು ಶರಣಪ್ಪ
ತಾಯಿಯ ಹೆಸರು ಬಸಮ್ಮ
ಅವಲಂಬಿತರ ಹೆಸರು ಜಯಲಕ್ಷ್ಮಿ
ಅವಲಂಬಿತರ ಉದ್ಯೋಗ ವ್ಯಾಪಾರ
ಮಕ್ಕಳು 1 ಪುತ್ರ(ರು)
ಖಾಯಂ ವಿಳಾಸ ಮಲ್ಲೇಶ್ವರ ಲೇಔಟ್, ಶಿವಮೊಗ್ಗ ನಗರ
ಪ್ರಸ್ತುತ ವಿಳಾಸ ಮಲ್ಲೇಶ್ವರ ಲೇಔಟ್, ಶಿವಮೊಗ್ಗ ನಗರ
ಸಂಪರ್ಕ ಸಂಖ್ಯೆ 9880030004, 08182-273500
ಈ ಮೇಲ್ Not Known
ವೆಬ್‌ಸೈಟ್ http://kseshwarappa.com/

ಕೆ. ಎಸ್. ಈಶ್ವರಪ್ಪ ಒಟ್ಟು ಆಸ್ತಿ

ಒಟ್ಟು ಆಸ್ತಿ: ₹8.28 CRORE
ಆಸ್ತಿ:₹10.31 CRORE
ಸಾಲಸೋಲ: ₹2.03 CRORE

Disclaimer: The information relating to the candidate is an archive based on the self-declared affidavit filed at the time of elections. The current status may be different. For the latest on the candidate kindly refer to the affidavit filed by the candidate with the Election Commission of India in the recent election.

ಕೆ. ಎಸ್. ಈಶ್ವರಪ್ಪ ಕುರಿತು ಆಸಕ್ತಿದಾಯಕ ಸಂಗತಿಗಳು

ರಾಜಕೀಯ ಹೊರತುಪಡಿಸಿ ಕೆ. ಎಸ್. ಈಶ್ವರಪ್ಪಗೆ ಕಲೆ ಮತ್ತು ಕ್ರೀಡೆಗಳಲ್ಲಿ ಆಸಕ್ತಿ ಇದೆ. ಈಶ್ವರಪ್ಪ ಕಾಲೇಜಿನ ದಿನಗಳಲ್ಲಿ ಉತ್ತಮ ಖೋ-ಖೋ ಹಾಗೂ ಫುಟ್ ಬಾಲ್ ಪಟುವಾಗಿದ್ದರು.

ಆರ್‌ಎಸ್‌ಎಸ್‌ನ ಘೋಷ್ ನಲ್ಲಿ ಆನಕ (Side Drum) ವಾದಕರಾಗಿದ್ದರು. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅಭಿರುಚಿ ಹೊಂದಿರುವ ಈಶ್ವರಪ್ಪ 1975ರಲ್ಲಿ Malnad Associates ಎಂಬ ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷರಾಗಿದ್ದರು.

ಶಿವಮೊಗ್ಗ ನಗರದಲ್ಲಿ ಶ್ರೀಗಂಧ ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷರೂ ಆಗಿದ್ದಾರೆ. ಚಂದ್ರಗುಪ್ತಮೌರ್ಯ ಟ್ರಸ್ಟ್, ಕನಕ ವಿದ್ಯಾಸಂಸ್ಥೆ, ಕುರುಬರ ಸಹಕಾರ ಸಂಘ, ಶನಿದೇವರ ದೇವಸ್ಥಾನದ ಸಮಿತಿಗಳ ಮಾರ್ಗದರ್ಶಕರು.

ಕೆ. ಎಸ್. ಈಶ್ವರಪ್ಪ ರಾಜಕೀಯ ಟೈಮ್‌ಲೈನ್

2023
  • ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಶಾಸಕ, ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಏಪ್ರಿಲ್ 11ರ ಮಂಗಳವಾರ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದರು. ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾರಿಗೆ ಈ ಕುರಿತು ಪತ್ರವನ್ನು ಬರೆದು ಯಾವುದೇ ಕ್ಷೇತ್ರದ ಟಿಕೆಟ್‌ಗೆ ನನ್ನ ಹೆಸರು ಪರಿಗಣಿಸಬೇಡಿ ಎಂದು ಮನವಿ ಮಾಡಿದರು.
2022
  • ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿದ್ದ ಈಶ್ವರಪ್ಪ ಏಪ್ರಿಪ್ 15ರಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪ ಹೆಸರು ಕೇಳಿ ಬಂದಿತು. ಆಗ ಪ್ರತಿಪಕ್ಷಗಳು ರಾಜೀನಾಮೆಗೆ ಒತ್ತಾಯಿಸಿದ್ದವು.

ಹಿಂದಿನ ಇತಿಹಾಸ

2019
  • ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಕೆ. ಎಸ್. ಈಶ್ವರಪ್ಪ ಸಚಿವರಾಗಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಂಪುಟ ಸೇರಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಹೊಣೆಯನ್ನು ಅವರಿಗೆ ನೀಡಲಾಯಿತು.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X