Get Updates
Get notified of breaking news, exclusive insights, and must-see stories!

ಲಕ್ಷ್ಮೀ ಹೆಬ್ಬಾಳ್ಕರ್

ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ. ಸಾಮಾನ್ಯ ಕಾಂಗ್ರೆಸ್ ಕಾರ್ಯಕರ್ತೆಯಾಗಿದ್ದ ಅವರು ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆ ಏರಿದರು.
By Rashmi | Friday, September 2, 2022, 06:25:28 PM [IST]

ಲಕ್ಷ್ಮೀ ಹೆಬ್ಬಾಳ್ಕರ್ ಜೀವನ ಚರಿತ್ರೆ

ಬೆಳಗಾವಿ ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ. ಸಾಮಾನ್ಯ ಕಾಂಗ್ರೆಸ್ ಕಾರ್ಯಕರ್ತೆಯಾಗಿದ್ದ ಅವರು ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆ ಏರಿದರು.

1975ರಲ್ಲಿ ಬೆಳಗಾವಿಯಲ್ಲಿ ಜನಿಸಿದ ಲಕ್ಷ್ಮೀ ಹೆಬ್ಬಾಳ್ಕರ್ ಲಿಂಗಾಯತ ಸಮುದಾಯಕ್ಕೆ ಸೇರಿದವರು. ಮೈಸೂರು ವಿಶ್ವವಿದ್ಯಾಲಯದಿಂದ ಪೊಲಿಟಿಕಲ್ ಸೈನ್ಸ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

ಕಾಲೇಜು ದಿನಗಳಲ್ಲಿ ಅತಿ ಧೈರ್ಯಶಾಲಿಯಾಗಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ಉತ್ತಮ ವಾಗ್ಮಿ. ರವೀಂದ್ರ ಹೆಬ್ಬಾಳ್ಕರ್‌ರನ್ನು ಲಕ್ಷ್ಮೀ ವಿವಾಹವಾದರು. ಬೆಳಗಾವಿಯಲ್ಲಿ ಹೆಬ್ಬಾಳ್ಕರ್ ಕುಟುಂಬ ಹೆಚ್ಚು ಪ್ರಭಾವ ಹೊಂದಿದ್ದು, ಇದು ಲಕ್ಷ್ಮೀ ಹೆಬ್ಬಾಳ್ಕರ್ ರಾಜಕೀಯ ಬೆಳವಣಿಗೆಗೂ ಸಹಾಯಕವಾಗಿದೆ.

ಕರ್ನಾಟಕ ಕಾಂಗ್ರೆಸ್‌ನಲ್ಲಿರುವ ಮಹಿಳಾ ಶಾಸಕಿಯರಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಸಹ ಒಬ್ಬರು. ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಕೆಲಸ ಮಾಡಿರುವ ಇವರು, ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು.

2013ರ ಚುನಾವಣೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ 35,811 ಮತಗಳನ್ನು ಪಡೆದು ಲಕ್ಷ್ಮೀ ಹೆಬ್ಬಾಳ್ಕರ್ ಸೋಲು ಅನುಭವಿಸಿದರು. 2014ರ ಲೋಕಸಭೆ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದರು. 4,78,557 ಮತಗಳನ್ನು ಪಡೆದು ಬಿಜೆಪಿಯ ಸುರೇಶ ಅಂಗಡಿ ಪರಾಭವಗೊಂಡರು.

2018ರ ವಿಧಾನಸಭೆ ಚುನಾವಣೆಯಲ್ಲಿ 102,040 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ ಚನ್ನರಾಜ್ ಹಟ್ಟಿಹೊಳೆ ಸಹ ರಾಜಕೀಯದಲ್ಲಿದ್ದು, ವಿಧಾನ ಪರಿಷತ್ ಸದಸ್ಯರು.

ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿರುವ ಹೆಬ್ಬಾಳ್ಕರ್ ಯುವ ಕಾಂಗ್ರೆಸ್ ಮತ್ತು ಕೆಪಿಸಿಸಿಯ ಹಲವಾರು ಸಮಾವೇಶಗಳನ್ನು ಯಶಸ್ವಿಯಾಗಿ ಸಂಘಟಿಸಿದ್ದಾರೆ. ಚುನಾವಣೆಯಲ್ಲಿ ಸಕ್ರಿಯವಾಗಿ ಪ್ರಚಾರದಲ್ಲಿ ತೊಡಗಿಕೊಳ್ಳುತ್ತಾರೆ.

ಮತ್ತಷ್ಟು ಓದು

ಲಕ್ಷ್ಮೀ ಹೆಬ್ಬಾಳ್ಕರ್ ವಯಕ್ತಿಕ ಜೀವನ

ಪೂರ್ಣ ಹೆಸರು ಲಕ್ಷ್ಮೀ ಹೆಬ್ಬಾಳ್ಕರ್
ಜನ್ಮ ದಿನಾಂಕ 28 May 1975 (ವಯಸ್ಸು 50)
ಹುಟ್ಟಿದ ಸ್ಥಳ ಬೆಳಗಾವಿ
ಪಕ್ಷದ ಹೆಸರು Indian National Congress
ವಿದ್ಯಾರ್ಹತೆ University Of Mysore
ಉದ್ಯೋಗ ಸಮಾಜ ಸೇವೆ, ಉದ್ಯಮ, ರಾಜಕಾರಣಿ
ತಂದೆಯ ಹೆಸರು Not Known
ತಾಯಿಯ ಹೆಸರು Not Known
ಅವಲಂಬಿತರ ಹೆಸರು ರವೀಂದ್ರ ಹೆಬ್ಬಾಳ್ಕರ್‌
ಅವಲಂಬಿತರ ಉದ್ಯೋಗ ಕೃಷಿ
ಮಕ್ಕಳು 1 ಪುತ್ರ(ರು)
ಧರ್ಮ ಹಿಂದು
ಜಾತಿ ಲಿಂಗಾಯತ
ವೆಬ್‌ಸೈಟ್ laxmihebbalkarmla.com

ಲಕ್ಷ್ಮೀ ಹೆಬ್ಬಾಳ್ಕರ್ ಒಟ್ಟು ಆಸ್ತಿ

ಒಟ್ಟು ಆಸ್ತಿ
₹20.79 CRORE
ಆಸ್ತಿ
₹28.79 CRORE
ಸಾಲಸೋಲ
₹8 CRORE

ಲಕ್ಷ್ಮೀ ಹೆಬ್ಬಾಳ್ಕರ್ ಕುರಿತು ಆಸಕ್ತಿದಾಯಕ ಸಂಗತಿಗಳು

ಕರ್ನಾಟಕದ ಮಹಿಳಾ ಶಾಸಕಿಯರಲ್ಲಿ ಒಬ್ಬರು

ಬೆಳಗಾವಿಯಲ್ಲಿ ಭಾರೀ ಪ್ರಭಾವ ಹೊಂದಿರುವ ಕಾಂಗ್ರೆಸ್ ನಾಯಕಿ

ಕಾಂಗ್ರೆಸ್ ಪಕ್ಷದ ಮಹಿಳಾ ಶಾಸಕಿಯರಲ್ಲಿ ಒಬ್ಬರು

ಲಕ್ಷ್ಮೀ ಹೆಬ್ಬಾಳ್ಕರ್ ರಾಜಕೀಯ ಟೈಮ್‌ಲೈನ್

  • 2018: ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಚುನಾವಣಾ ಕಣಕ್ಕೆ, ಮೊದಲ ಬಾರಿ ಶಾಸಕರಾಗಿ ಆಯ್ಕೆ
  • 2015: ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕ
  • 2014: ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಚುನಾವಣಾ ಕಣಕ್ಕೆ ಸೋಲು
  • 2013: ವಿಧಾನಸಭೆ ಚುನಾವಣೆಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಕಣಕ್ಕೆ, ಸೋಲು

Disclaimer:The information provided on this page is sourced from various publicly available platforms including https://en.wikipedia.org/, https://sansad.in/ls, https://sansad.in/rs, https://pib.gov.in/, https://affidavit.eci.gov.in/ and the official websites of state assemblies respectively. While we make every effort to maintain the accuracy, comprehensiveness and timeliness of the information provided, we cannot guarantee the absolute accuracy or reliability of the content. The data presented here has been compiled without consideration of the objectives or opinions of individuals who may access it.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+